Homeಕರ್ನಾಟಕಲವ್ ಜಿಹಾದ್ ಹೆಸರಿನಲ್ಲಿ ಮುಸ್ಲಿಂ ಯುವಕನ ಬರ್ಬರ ಕೊಲೆ: ಬಲಪಂಥೀಯ ಸಂಘಟನೆಗಳ ಮೇಲೆ ಆರೋಪ

ಲವ್ ಜಿಹಾದ್ ಹೆಸರಿನಲ್ಲಿ ಮುಸ್ಲಿಂ ಯುವಕನ ಬರ್ಬರ ಕೊಲೆ: ಬಲಪಂಥೀಯ ಸಂಘಟನೆಗಳ ಮೇಲೆ ಆರೋಪ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಮುಸ್ಲಿಂ ಯುವಕನ ಛಿದ್ರವಾದ ಶವ ಪತ್ತೆಯಾಗಿದೆ. ಸೆಪ್ಟಂಬರ್ 28 ರಂದು ಕೊಲೆ ನಡೆದಿರುವ ಸಂಭವವಿದ್ದು, ತಲೆ ಮತ್ತು ಕಾಲುಗಳನ್ನು ಬರ್ಬರವಾಗಿ ಕತ್ತರಿಸಿ ಎಸೆಯಲಾಗಿದೆ. ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನ ಕೊಲೆಗೈಯಲಾಗಿದೆ ಎಂದು ಶಂಕಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿ ಅರ್ಬಾಜ್ ನವಾಜ್ (27) ಎಂಬಾತನೇ ಕೊಲೆಯಾಗಿರುವ ದುರ್ದೈವಿ ಎಂದು ಗುರುತಿಸಲಾಗಿದೆ. ಸೆಪ್ಟಂಬರ್ 28 ರಿಂದ ಆತ ಕಾಣೆಯಾಗಿದ್ದನು ಎಂದು ಅವನ ಪೋಷಕರು ದೂರಿದ್ದಾರೆ. ಇಂದು ಮುಂಜಾನೆ ರೈಲ್ವೆ ಹಳಿ ಮೇಲೆ ಶವ ಗುರುತಿಸಿದ ರೈತರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

ಅರ್ಬಾಜ್ ನವಾಜ್ ಅನ್ಯ ಸಮುದಾಯದ ಯುವತಿಯನ್ನು ಪ್ರೀತಿಸುತ್ತಿದ್ದನು. ಇದಕ್ಕೆ ಹುಡುಗಿಯ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು. ಕೆಲ ಬಲಪಂಥೀಯ ಸಂಘಟನೆಯ ಸದಸ್ಯರು ಲವ್ ಜಿಹಾದ್ ಎಂದು ಅರ್ಬಾಜ್‌ನೊಂದಿಗೆ ಜಗಳ ಮಾಡಿದ್ದರು. ಸೆಪ್ಟೆಂಬರ್ 28ರಂದು ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ ಅರ್ಬಾಜ್ ನನ್ನು ಖಾನಾಪುರ ಹೊರವಲಯದ ರೈಲ್ವೆ ಹಳಿ ಮೇಲೆ ಬರ್ಬರವಾಗಿ ಕೊಲೆಗೈಯಲಾಗಿದೆ ಎಂದು ಆತನ ಕುಟುಂಬಸ್ಥರು ದೂರಿದ್ದಾರೆ.

ಗಾಂಧಿ ಜಯಂತಿಯ ದಿನವೇ ಮುಸ್ಲಿಂ ಯುವಕನಿಗೆ ಚಿತ್ರಹಿಂಸೆ ನೀಡಿ ಬರ್ಬರವಾಗಿ ಕೊಲೆಗೈಯಲಾಗಿದೆ. ಅನ್ಯಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದುದೆ ಅದಕ್ಕೆ ಕಾರಣ. ಈ ಕೊಲೆಯಲ್ಲಿ ಹುಡುಗಿಯ ಕುಟುಂಬಸ್ಥರದ್ದು ಪಾತ್ರವಿದೆ ಎಂದು ಕೊಲೆಯಾದ ಹುಡುಗನ ತಾಯಿ ಆರೋಪಿಸಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ. ಈ ಕುರಿತು ಹಲವು ಪತ್ರಕರ್ತರು ಟ್ವೀಟ್ ಸಹ ಮಾಡಿದ್ದಾರೆ.

ರಾಮ್ ಸೇನಾ ಎಂಬ ಸಂಘಟನೆಯ ಯುವಕರು ಅರ್ಬಾಜ್ ವಿರುದ್ಧ ಪದೇ ಪದೇ ಜಗಳ ನಡೆಸುತ್ತಿದ್ದರು ಎಂದು ಸಾಮಾಜಿಕ ಜಾಲತಾಣಿಗರು ಆರೋಪಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಜಿಲ್ಲಾ ಪೊಲೀಸ್ ಇಲಾಖೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದು ಇದಕ್ಕಾಗಿ ತಂಡವೊಂದನ್ನು ರಚಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...