Homeಮುಖಪುಟರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

ರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ಸದನವನ್ನುದ್ದೇಶಿಸಿ ಮಾತನಾಡುವಾಗ ತಮ್ಮ ಕೆಲವು ಹೇಳಿಕೆಗಳನ್ನು ಕಡತದಿಂದ ತಗೆದುಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಬುಧವಾರ ಸದನದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು, “ಕಳೆದ ಎರಡೂವರೆ ವರ್ಷಗಳಲ್ಲಿ” ಅದಾನಿ ಸಮೂಹದ ಸಂಪತ್ತಿನ ಏರಿಕೆಯನ್ನು ಪ್ರಶ್ನಿಸಿ ಪ್ರಧಾನಿ ಮೋದಿ ಮತ್ತು ಅವರ ಸರ್ಕಾರವನ್ನು ಗುರಿಯಾಗಿಸಿ ಟೀಕಿಸಿದ್ದರು. ಆದರೆ ಆ ನಂತರ ಸದನದ ದಾಖಲೆಗಳಿಂದ ಖರ್ಗೆಯವರ ಕೆಲವು ಟೀಕೆಗಳನ್ನು ತೆಗೆದುಹಾಕಲಾಗಿದೆ.

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಅದಾನಿ ಸಂಸ್ಥೆಯ ವಂಚನೆ ಬಗ್ಗೆ ಮಾತನಾಡುತ್ತ ಪ್ರಧಾನಿಯನ್ನು ಟೀಕಿಸಿದ್ದಾರೆ. ಆದರೆ ಅದನ್ನು ರಾಜ್ಯಸಭಾ ಕಡತದಿಂದ ತಗೆದುಹಾಕಲಾಗಿದೆ. ಇದನ್ನು ನಾವು ‘ಸೆನ್ಸಾರ್‍‌ಶಿಪ್’ ಎಂದು ಹೇಳುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

”ಪ್ರಧಾನಿ ಮೋದಿಯವರ ಆತ್ಮೀಯ ಸ್ನೇಹಿತರೊಬ್ಬರ ಸಂಪತ್ತು 2.5 (ಎರಡೂವರೆ) ವರ್ಷಗಳಲ್ಲಿ 13 ಪಟ್ಟು ಹೆಚ್ಚಾಗಿದೆ. 2014ರಲ್ಲಿ 50,000 ಕೋಟಿಯಷ್ಟಿದ್ದ ಅವರ ಸಂಪತ್ತು 2019ರಲ್ಲಿ 1 ಲಕ್ಷ ಕೋಟಿ ಆಯಿತು. ಕೇವಲ ಎರಡು ವರ್ಷಗಳಲ್ಲಿ ಅವರ ಆಸ್ತಿ 12 ಲಕ್ಷ ಕೋಟಿ ರೂ.ಗೆ ತಲುಪಲು ಏನೆಲ್ಲಾ ಮ್ಯಾಜಿಕ್ ನಡೆದಿದೆ ಎಂದು ನನಗೆ ಗೊತ್ತಿಲ್ಲ” ಎಂದು ಖರ್ಗೆ ಕುಟುಕಿದ್ದಾರೆ. ಇದರ ನಡುವೆ ಬಿಜೆಪಿ ಸಂಸದರು ಪ್ರತಿಭಟನೆಯನ್ನೂ ನಡೆಸಿದ್ದಾರೆ ಎಂದರು.

ಇದನ್ನೂ ಓದಿ: ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

”ನಾನು ಸತ್ಯವನ್ನು ಮಾತನಾಡಿದರೆ ಅದು ದೇಶವಿರೋಧಿಯಾಗುತ್ತದೆಯೇ? ನಾನು ದೇಶವಿರೋಧಿ ಅಲ್ಲ, ನಾನು ಇಲ್ಲಿ ಎಲ್ಲರಿಗಿಂತಲೂ ಹೆಚ್ಚು ದೇಶಭಕ್ತನಾಗಿದ್ದೇನೆ. ನಾನು ‘ಭೂಮಿ-ಪುತ್ರ’. ನೀವು ದೇಶವನ್ನು ಲೂಟಿ ಮಾಡುತ್ತಿದ್ದೀರಿ, ಆದರೆ ನನ್ನನ್ನು ದೇಶವಿರೋಧಿ ಎನ್ನುತ್ತಿದ್ದೀರಿ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಯಾವುದಕ್ಕೂ ಹೆದರುವುದಿಲ್ಲ ಎನ್ನುವುದಾದರೆ, ಅದಾನಿ-ಹಿಂಡನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಲು ಯಾಕೆ ಹೆದರುತ್ತಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದರು. ಖರ್ಗೆಯವರ ಈ ಹೇಳಿಕೆಗಳಲ್ಲಿ ಕೆಲವನ್ನು ಕಡತದಿಂದ ತಗೆದುಹಾಕಲಾಗಿದೆ.

ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಚರ್ಚೆಗಳು ಜೋರಾಗಿ ನಡೆದವು. ಇಂದು ಉಭಯ ಸದನಗಳು ಕೇಂದ್ರ ಬಜೆಟ್ 2023 ಅನ್ನು ಚರ್ಚಿಸಲು ಸಿದ್ಧವಾಗಿವೆ.

ಇಂದು ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ ನೀಡಲಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಾಡಿದ ಭಾಷಣದಲ್ಲಿ, 140 ಕೋಟಿ ಜನರು ತಮ್ಮ ಸರ್ಕಾರದ ಮೇಲೆ ನಂಬಿಕೆ ಇಟ್ಟಿರುವ “ರಕ್ಷಣಾತ್ಮಕ ಗುರಾಣಿ” ಎಂದು ಪ್ರಧಾನಿ ಮೋದಿ ಹೇಳಿದರು. ವಿಪಕ್ಷಗಳ ಆರೋಪಗಳಿಂದ ಅಥವಾ ಸುಳ್ಳು ಆರೋಪಗಳಿಂದ ಜನರ ನಂಬಿಕೆಯನ್ನು ಸುಳ್ಳು ಮಾಡಲು ಸಾಧ್ಯವಿಲ್ಲ ಎಂದರು.

ಈ ನಡುವೆ ಪ್ರತಿಪಕ್ಷಗಳು “ಅದಾನಿ, ಅದಾನಿ,” ಮತ್ತು “ಜೆಪಿಸಿ, ಜೆಪಿಸಿ” ಎಂದು ಕೂಗಿದರು. ಆಗ ಮೋದಿ ಸ್ವಲ್ಪ ಹೊತ್ತು ಭಾಷಣ ನಿಲ್ಲಿಸಿ, ನಂತರ ಭಾಷಣ ಮುಂದುವರೆಸಿದರು. ಅದಾನಿ ಗುಂಪಿನ ಬಗ್ಗೆ ರಾಹುಲ್ ಗಾಂಧಿಯವರು ಮಾಡಿದ ಆರೋಪಗಳ ಬಗ್ಗೆ ಮೋದಿ ಎಲ್ಲೂ ಉಲ್ಲೇಖಿಸಲಿಲ್ಲ.

ಈ ಬಗ್ಗೆ ರಾಹುಲ್ ಗಾಂಧಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿಯವರು ಅದಾನಿಗೆ ರಕ್ಷಣೆ ನೀಡುತ್ತಿದ್ದಾರೆ ಮತ್ತು ಅದಾನಿ ಬಗ್ಗೆ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...