Homeಮುಖಪುಟಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

- Advertisement -
- Advertisement -

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, 80 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಖರ್ಗೆ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 98ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಕರ್ನಾಟಕದ ಗುರ್ಮಿಟ್ಕಲ್‌ನಿಂದ ಒಂಬತ್ತು ಬಾರಿ ಶಾಸಕರಾಗಿ, ಗುಲ್ಬರ್ಗಾದಿಂದ ಎರಡು ಬಾರಿ ಸಂಸದರಾಗಿದ್ದಾರೆ. ಜೊತೆಗೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಖರ್ಗೆಯವರ ಆಯ್ಕೆಯು ಐತಿಹಾಸಿಕವಾಗಿದೆ. 50 ವರ್ಷಗಳ ಬಳಿಕ ದಲಿತ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. 1970-71ರಲ್ಲಿ ಜಗಜೀವನ್ ರಾಮ್ ಅಧ್ಯಕ್ಷರಾಗಿದ್ದರು. ಕನ್ನಡಿಗರಾದ ಎಸ್.ನಿಜಲಿಂಗಪ್ಪ ಅವರು 1969ರಲ್ಲಿ ಈ ಸ್ಥಾನಕ್ಕೇರಿದ್ದರು. ಆ ಬಳಿಕ ಕಾಂಗ್ರೆಸ್‌ ಅಧ್ಯಕ್ಷಗಿರಿಗೇರಿದ ಕನ್ನಡಿಗ ಎಂಬ ಖ್ಯಾತಿಗೂ ಖರ್ಗೆಯವರು ಪಾತ್ರರಾಗಿದ್ದಾರೆ. 1998ರ ನಂತರದಲ್ಲಿ ಗಾಂಧಿಯೇತರ ಕುಟುಂಬದಿಂದ ಆಯ್ಕೆಯಾದವರಾಗಿಯೂ ಗಮನ ಸೆಳೆದಿದ್ದಾರೆ. ಅಧ್ಯಕ್ಷರಾದ ಖರ್ಗೆಯವರ ಮುಂದೆ ಐದು ಅಂಶಗಳು ಮುಖ್ಯವಾಗಲಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

1. ಏಕತೆಗೆ ಒತ್ತು

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಪ್ರಚಾರದಲ್ಲಿ ಒಂದು ಅಂಶವು ಗಮನ ಸೆಳೆಯಿತು. ಹಿಂದಿನ ಜಿ-23 ಸದಸ್ಯರಾದ ಭೂಪಿಂದರ್ ಸಿಂಗ್ ಹೂಡಾ, ಮನೀಶ್ ತಿವಾರಿ, ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಪೃಥ್ವಿರಾಜ್ ಚವಾಣ್ ಅವರಿಂದ ಸಕ್ರಿಯ ಬೆಂಬಲವನ್ನು ಖರ್ಗೆಯವರು ಪಡೆದರು.

ಜಿ-23 ನಾಯಕರ ಪೈಕಿ ಒಬ್ಬರಾದ ಶಶಿ ತರೂರ್‌ ಅವರು ಚುನಾವಣೆಯ ಪ್ರತಿಸ್ಪರ್ಧಿಯಾಗಿದ್ದಾರೆ ಎಂಬ ವಾಸ್ತವದ ಹೊರತಾಗಿಯೂ ಈ ಬೆಂಬಲ ದೊರಕಿತು. ಪಕ್ಷದ ಅಧ್ಯಕ್ಷ ಸ್ಥಾನದ ಮುಖವಾಗಿ ತೋರಿದ್ದ ಅಶೋಕ್ ಗೆಹ್ಲೋಟ್‌ ಅವರಿಗೆ ಹೋಲಿಸಿದರೆ ಖರ್ಗೆ ಅವರು ಜಿ-23 ಬಗ್ಗೆ ಹೆಚ್ಚು ಸಮಾಧಾನಕರ ನಾಯಕರಾಗಿದ್ದಾರೆ ಎನ್ನಲಾಗುತ್ತಿದೆ.

ಅಧ್ಯಕ್ಷರಾಗಿ ಖರ್ಗೆ ಅವರು ಜಿ-23 ನಾಯಕರ ಕಳವಳಗಳನ್ನು ಪರಿಹರಿಸಲು ಮತ್ತು ಸಾಧ್ಯವಾದಷ್ಟು ಹೆಚ್ಚಿನವರಿಗೆ ಗೌರವಾನ್ವಿತ ರೀತಿಯಲ್ಲಿ ಅವಕಾಶ ಕಲ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳಬಹುದು.

2. ಸೈದ್ಧಾಂತಿಕ ನಿರಂತರತೆ

ಸೋನಿಯಾ ಗಾಂಧಿಯವರ ಅಧಿಕಾರಾವಧಿಯ ಬಳಿಕ ಹೊಮ್ಮಿರುವ ಸೈದ್ಧಾಂತಿಕ ನಿರಂತರತೆಯನ್ನು ಖರ್ಗೆಯವರು ಅಧ್ಯಕ್ಷರಾಗಿರುವುದು ಧ್ವನಿಸುತ್ತದೆ. ಖರ್ಗೆಯವರು ನಿರಂತರವಾಗಿ ಜಾತ್ಯತೀತತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸ್ಪಷ್ಟವಾದ ನಿಲುವನ್ನು ತೆಗೆದುಕೊಂಡಿದ್ದಾರೆ. ಇದು ಅವರ ಅಧ್ಯಕ್ಷತೆಯಲ್ಲೂ ಪ್ರತಿಫಲಿಸುವ ಸಾಧ್ಯತೆಯಿದೆ.

ಬೀದರ್ ಜಿಲ್ಲೆಯಿಂದ ಬಂದು ಗುಲ್ಬರ್ಗದಿಂದ ಸಂಸದರಾದ ಖರ್ಗೆ ಅವರು ಸಾಕಷ್ಟು ಮುಸ್ಲಿಂ ಬಾಹುಳ್ಯವುಳ್ಳ ಭಾಗದಲ್ಲಿ ಸಮುದಾಯಗಳೊಂದಿಗೆ ನಿಕಟವಾಗಿದ್ದಾರೆ. ಸಮುದಾಯಗಳ ಬಗೆಗಿರಬೇಕಾದ ಕಾಳಜಿಯನ್ನು ಅರ್ಥಮಾಡಿಕೊಂಡಿದ್ದಾರೆ.

3. ರಾಹುಲ್ ಗಾಂಧಿ ಪಕ್ಷದ ಮುಖವಾದರೆ, ಪಕ್ಷ ಸಂಘಟನೆಯಲ್ಲಿ ಖರ್ಗೆ  

ಅಧ್ಯಕ್ಷ ಚುನಾವಣೆ ನಡೆಯುತ್ತಿದ್ದರೂ ರಾಹುಲ್ ಗಾಂಧಿಯನ್ನೇ ಪ್ರಧಾನವಾಗಿಟ್ಟುಕೊಂಡು ಭಾರತ್ ಜೋಡೋ ಯಾತ್ರೆ ಮುಂದುವರೆದಿದೆ. ಖರ್ಗೆ ಅವರು ಪಕ್ಷದ ಸಂಘಟನಾ ಮತ್ತು ದೈನಂದಿನ ವ್ಯವಹಾರಗಳನ್ನು ನಿರ್ವಹಿಸಿದರೆ, ರಾಹುಲ್ ಗಾಂಧಿ ಅವರು ಮುಖ್ಯ ರಾಜಕೀಯ ಮುಖವಾಗಿ ಹೊಮ್ಮಬಹುದು.

ಖರ್ಗೆ ಅವರು ರಾಹುಲ್ ಗಾಂಧಿಯವರ ನಿಕಟವರ್ತಿ ಎನ್ನಲಾಗುತ್ತಿದೆ. ಆದರೆ ರಾಹುಲ್‌ ಗಾಂಧಿಯವರು, “ಪಕ್ಷದಲ್ಲಿ ನನ್ನ ಸ್ಥಾನವೇನು ಎಂಬುದನ್ನು ಪಕ್ಷದ ಅಧ್ಯಕ್ಷರು ನಿರ್ಧರಿಸಲಿದ್ದಾರೆ” ಎಂದಿದ್ದಾರೆ.

4. ಪಕ್ಷದ ಕಾರ್ಯನಿರ್ವಹಣೆಯಲ್ಲಿ ಯಥಾಸ್ಥಿತಿ

ತರೂರ್ ಅವರಂತೆ ಖರ್ಗೆಯವರು ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಚಾರದ ಸಮಯದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿಲ್ಲ. ಈ ವರ್ಷದ ಆರಂಭದಲ್ಲಿ ಉದಯಪುರ ಚಿಂತನ್ ಶಿಬಿರದಲ್ಲಿ ಮಾಡಲಾದ ಘೋಷಣೆಯೇ ತಮ್ಮ ಪ್ರಣಾಳಿಕೆ ಎಂದು ಹೇಳಿದರು. ಸಾಂಸ್ಥಿಕ ವಿಷಯಗಳಲ್ಲಿ ಹೆಚ್ಚಿನ ಮಟ್ಟದ ಯಥಾಸ್ಥಿತಿ ಇರುವ ಸಾಧ್ಯತೆಯಿದೆ ಎಂಬುದನ್ನು ಇದು ಸೂಚಿಸುತ್ತದೆ.

ಆದಾಗ್ಯೂ ಬಹು ಕಾಯಾಧ್ಯಕ್ಷ ಸ್ಥಾನದಂತಹ ಹಲವಾರು ಹೊಸ ಹುದ್ದೆಗಳನ್ನು ಅನ್ವೇಷಿಸಲಾಗುತ್ತಿದೆ. ಪಕ್ಷ ಸಂಘಟನೆಯಲ್ಲೂ ಕೆಲವು ಬದಲಾವಣೆಗಳಾಗಬಹುದು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಬಹುದು. ಖರ್ಗೆ ಅವರು ಕೆಲವು ಹೊಸ ಪ್ರಧಾನ ಕಾರ್ಯದರ್ಶಿಗಳನ್ನೂ ನೇಮಿಸಬಹುದು. ಈಗಿನ ಪದಾಧಿಕಾರಿಗಳನ್ನು ಎಷ್ಟರ ಮಟ್ಟಿಗೆ ಬದಲಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರಾಜಸ್ಥಾನದಲ್ಲಿ ಏನು ಮಾಡಬೇಕು ಎಂಬುದು ಖರ್ಗೆ ಅವರ ಮುಂದಿರುವ ಮತ್ತೊಂದು ಸವಾಲು. ಶೋಕಾಸ್ ನೋಟಿಸ್ ನೀಡಿದ ಗೆಹ್ಲೋಟ್ ನಿಷ್ಠಾವಂತರಿಗೆ ಶಿಕ್ಷೆಯಾಗುತ್ತದೆಯೇ? ಗೆಹ್ಲೋಟ್ ಕೂಡ ಕ್ರಮ ಎದುರಿಸುತ್ತಾರೆಯೇ? ಹೊಸ ಕಾಂಗ್ರೆಸ್ ಅಧ್ಯಕ್ಷರು ಸಚಿನ್ ಪೈಲಟ್‌ಗೆ ಹೇಗೆ ಅವಕಾಶ ಕಲ್ಪಿಸುತ್ತಾರೆ? ಎಂಬ ಪ್ರಶ್ನೆಗಳಿವೆ.

5. ಕರ್ನಾಟಕದತ್ತ ಗಮನ

ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣೆಗಳು ಬರುತ್ತಿವೆ. ನಂತರ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ಚುನಾವಣೆಗಳು 2023ರ ಆರಂಭದಲ್ಲಿ ಎದುರಾಗಲಿವೆ. ಆದರೆ ಪಕ್ಷದ ಅಧ್ಯಕ್ಷರಾಗಿ ಖರ್ಗೆ ಅವರಿಗೆ ನಿಜವಾದ ಪರೀಕ್ಷೆ ಎದುರಾಗುವುದು 2023ರ ಬೇಸಿಗೆಯಲ್ಲಿ ನಡೆಯುವ ಚುನಾವಣೆಯಲ್ಲಿ ಎಂಬುದು ಸ್ಪಷ್ಟ. ಏಕೆಂದರೆ ತಮ್ಮ ತವರು ರಾಜ್ಯವಾದ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ಇದನ್ನೂ ಓದಿರಿ: ಕಾರ್ಮಿಕನ ಪುತ್ರರಾದ ಖರ್ಗೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯವರೆಗೆ ಬೆಳೆದ ಯಶೋಗಾಥೆ

ಕರ್ನಾಟಕವನ್ನು ಗೆಲ್ಲುವುದು ಕಾಂಗ್ರೆಸ್‌ಗೆ ನಿರ್ಣಾಯಕವಾಗಿದೆ. ಏಕೆಂದರೆ ಕರ್ನಾಟಕದಲ್ಲಿ ಸರ್ಕಾರವನ್ನು ರಚಿಸಿದರೆ 2024ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಸಹಾಯವಾಗುತ್ತದೆ. ಖರ್ಗೆಯವರು ಪಕ್ಷದ ಅಧ್ಯಕ್ಷರಾಗುವುದರಿಂದ ಪಕ್ಷಕ್ಕೆ ಸ್ವಲ್ಪ ಲಾಭವಾಗಬಹುದು.

ಕರ್ನಾಟಕ ರಾಜ್ಯದಲ್ಲಿ ನಾಯಕತ್ವದ ಪ್ರಶ್ನೆಯನ್ನು ಪರಿಹರಿಸುವುದು ಮುಖ್ಯವಾಗುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಸಮತೋಲನ ಸಾಧಿಸುವುದು ಖರ್ಗೆಯವರ ಮುಂದಿರುವ ಸವಾಲಾಗಿದೆ.

ವರದಿ ಕೃಪೆ: ದಿ ಕ್ವಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....