Homeಮುಖಪುಟವಿಪಕ್ಷಗಳ INDIA ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ

ವಿಪಕ್ಷಗಳ INDIA ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿರೋಧ ಪಕ್ಷದ INDIA ಮೈತ್ರಿಕೂಟದ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ.

ಶನಿವಾರ ನಡೆದ INDIA ಮೈತ್ರಿಕೂಟದ ಉನ್ನತ ನಾಯಕರ ಸಭೆಯಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ INDIA ಮೈತ್ರಿಕೂಟದ ಸಂಚಾಲಕ ಹುದ್ದೆಯನ್ನು ನೀಡಲಾಗಿದೆ. ಶನಿವಾರ ನಡೆದ INDIA ಮೈತ್ರಿಕೂಟದ ಅಗ್ರಗಣ್ಯ ನಾಯಕರ  ಸಭೆಯಲ್ಲಿ ಈ ನಿರ್ಧಾರವನ್ನು ಸರ್ವಾನುಮತದಿಂದ ತೆಗೆದುಕೊಳ್ಳಲಾಗಿದೆ.

ಸಭೆಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಗೈರಾಗಿದ್ದು, ಈ ನಿರ್ಧಾರದ ಬಗ್ಗೆ ಅವರಿಗೆ ತಿಳಿಸಲಾಗುವುದು ಎಂದು  ಮೈತ್ರಿಕೂಟದ ಸದಸ್ಯ ಪಕ್ಷಗಳು ತಿಳಿಸಿದೆ.

ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಪಕ್ಷದಿಂದ ಯಾರಾದರೂ ಒಬ್ಬರು ಈ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಹೇಳಿ ಸಂಚಾಲಕ ಹುದ್ದೆಯನ್ನು ತಿರಸ್ಕರಿಸಿದ್ದಾರೆ ಎಂದು ಸಭೆಯಲ್ಲಿದ್ದ ಜೆಡಿಯು ನಾಯಕ ಸಂಜಯ್ ಝಾ ಹೇಳಿದ್ದಾರೆ. ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಎಲ್ಲಾ ಪಕ್ಷಗಳು ಒಪ್ಪಿಗೆ ಇದ್ದರೆ ಮಾತ್ರ ಸಂಚಾಲಕರ ಹುದ್ದೆಯನ್ನು ಒಪ್ಪಿಕೊಳ್ಳುವುದಾಗಿ ನಿತೀಶ್‌ ಕುಮಾರ್ ಹೇಳಿದ್ದಾರೆ.

2024ರ ಸಾರ್ವತ್ರಿಕ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಯನ್ನು ಸೋಲಿಸಲು ರಚಿಸಲಾದ  26 ಪಕ್ಷಗಳ ಮೈತ್ರಿಕೂಟಕ್ಕೆ ಜೆಡಿಯು, ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ಮಾಡಲು ಬಯಸಿತ್ತು ಆದರೆ ಇದಕ್ಕೆ ಟಿಎಂಸಿಯಿಂದ ವಿರೋಧ ವ್ಯಕ್ತವಾಗುತ್ತಿದೆ ಎಂದು ಪಿಟಿಐ ವರದಿ ಮಾಡಿದೆ.

ಸೀಟು ಹಂಚಿಕೆ ಕಾರ್ಯಸೂಚಿ, ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸುವಿಕೆ ಮತ್ತು ಮೈತ್ರಿಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಶೀಲಿಸಲು INDIA ಮೈತ್ರಿಕೂಟದ ನಾಯಕರ ವರ್ಚುವಲ್ ಸಭೆ ಇಂದು ನಡೆದಿದೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಮುಂಬೈನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆಯಲ್ಲಿ ಭಾಗವಹಿಸಿದರು. ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಮತ್ತು ಪಕ್ಷದ ನಾಯಕಿ ಕನಿಮೊಳಿ ಕರುಣಾನಿಧಿ ಅವರು ಚೆನ್ನೈನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಇದಲ್ಲದೆ ಮೈತ್ರಿಕೂಟದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸೀತಾರಾಂ ಯೆಚೂರಿ ಸೇರಿದಂತೆ 14 ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಇದನ್ನು ಓದಿ: ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...