Homeಮುಖಪುಟಏಳು ಹಂತಗಳಲ್ಲಿ ದೀರ್ಘಾವಧಿ ಚುನಾವಣೆಗೆ ಕಾರಣವೇನು? ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ಏಳು ಹಂತಗಳಲ್ಲಿ ದೀರ್ಘಾವಧಿ ಚುನಾವಣೆಗೆ ಕಾರಣವೇನು? ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಏಳು ಹಂತಗಳಲ್ಲಿ ಚುನಾವಣೆ ನಿಗದಿ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧವನ್ನು ವ್ಯಕ್ತಪಡಿಸಿದ್ದು, ಏಳು ಹಂತಗಳಲ್ಲಿ ಚುನಾವಣೆ ಎಂದರೆ ಪ್ರಧಾನಿ ಮೋದಿ ಎಲ್ಲೆಡೆ ಪ್ರವಾಸ ಮಾಡಲು ಬಯಸುತ್ತಾರೆ ಇದಕ್ಕಾಗಿ ಈ ರೀತಿ ದೀರ್ಘಾವಧಿಯಾಗಿ ಚುನಾವಣೆ ನಿಗದಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಭುವನೇಶ್ವರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಚುನಾವಣೆ ಹೆಚ್ಚೆಂದರೆ ಮೂರ್ನಾಲ್ಕು ಹಂತಗಳಲ್ಲಿ ಪೂರ್ಣಗೊಳ್ಳಬೇಕಿತ್ತು. ಏನಾಗುತ್ತದೋ ಎಂಬ ಆತಂಕ ನಮಗಿಲ್ಲ, 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ, ಅಂದರೆ ಅವರು ಎಲ್ಲೆಡೆ ಪ್ರವಾಸ ಮಾಡಲು ಬಯಸುತ್ತಾರೆ. ಈ ದೇಶದಲ್ಲಿ, ನಾನು ಸುಮಾರು 12 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ ಮತ್ತು ಅದರಲ್ಲಿ ಹೆಚ್ಚೆಂದರೆ ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಯುತ್ತಿತ್ತು. ಕೆಲವೊಮ್ಮೆ ಏಕ ಹಂತದಲ್ಲಿ ಚುನಾವಣೆ ನಡೆಯುತ್ತಿತ್ತು. ನಾನು ಎರಡು ಹಂತಗಳಲ್ಲಿ ಚುನಾವಣೆ ನಡೆಯುವುದನ್ನು ನೋಡಿದ್ದೇನೆ ಆದರೆ ಗರಿಷ್ಠ ಅಂದರೆ ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಯುತ್ತಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.

ಏಳು ಹಂತಗಳಲ್ಲಿ ಚುನಾವಣೆ ನಡೆಸುವುದರಿಂದ ಬಹುತೇಕ ಎಲ್ಲ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಳ್ಳಲಿವೆ.    ಅಭಿವೃದ್ಧಿ ಕಾರ್ಯಗಳನ್ನು ಸುಮಾರು 70-80 ದಿನಗಳನ್ನು ನಿಲ್ಲಿಸಿ, ದೇಶವು ಹೇಗೆ ಪ್ರಗತಿ ಸಾಧಿಸುತ್ತದೆ ಎಂದು ಊಹಿಸಿ, ಚುನಾವಣಾ ನೀತಿ ಸಂಹಿತೆಯಿಂದಾಗಿ ಸಾಮಗ್ರಿಗಳ ಸರಬರಾಜು ನಡೆಯುವುದಿಲ್ಲ, ಬಜೆಟ್ ಖರ್ಚು ಮಾಡಲಾಗುವುದಿಲ್ಲ. ನನ್ನ ಪ್ರಕಾರ, ಇದು ಸರಿಯಲ್ಲ. ಚುನಾವಣೆಯನ್ನು ಮೂರ್ನಾಲ್ಕು ಹಂತಗಳಲ್ಲಿ ಪೂರ್ಣಗೊಳಿಸಬೇಕಿತ್ತು. ಚುನಾವಣೆ ಬೇಗ ನಡೆದರೆ ಜನರು ತಮ್ಮ ವ್ಯವಹಾರಗಳನ್ನು ಪೂರ್ಣಗೊಳಿಸಲು, ಮೂಲಸೌಕರ್ಯ ಪಡೆಯಲು ಸುಲಭವಾಗಿದೆ ಎಂದು ಖರ್ಗೆ ಹೇಳಿದ್ದಾರೆ.

2024ರ ಲೋಕಸಭಾ ಚುನಾವಣೆಯು ಏಪ್ರಿಲ್ 19ರಿಂದ 7 ಹಂತಗಳಲ್ಲಿ ನಡೆಯಲಿದ್ದು, ಜೂನ್ 4ರಂದು ಒಟ್ಟಾಗಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.  ಲೋಕಸಭೆ ಚುನಾವಣೆ ಇದೇ ಮೊದಲ ಬಾರಿಗೆ ದೀರ್ಘಾವಧಿ ಎಂದರೆ 7 ಹಂತಗಳಲ್ಲಿ ನಡೆಯಲಿದ್ದು, ನೀತಿ ಸಂಹಿತೆ ನಿನ್ನೆಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ.

ಇದನ್ನು ಓದಿ: ಮುಂಬೈನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಸಮಾಪ್ತಿ: ಇಂದು INDIA ಮೈತ್ರಿಯಿಂದ ಬೃಹತ್‌ ರ್‍ಯಾಲಿ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...