Homeಮುಖಪುಟಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಶಿಕ್ಷಣ ಕ್ಷೇತ್ರದಲ್ಲಿ RSS ಕಾರ್ಯಸೂಚಿಗಳನ್ನು ತಡೆಯುವಂತೆ ಖರ್ಗೆ-ರಾಹುಲ್ ಸೂಚನೆ

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಶಿಕ್ಷಣ ಕ್ಷೇತ್ರದಲ್ಲಿ RSS ಕಾರ್ಯಸೂಚಿಗಳನ್ನು ತಡೆಯುವಂತೆ ಖರ್ಗೆ-ರಾಹುಲ್ ಸೂಚನೆ

- Advertisement -
- Advertisement -

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಶಿಕ್ಷಣ ಕ್ಷೇತ್ರದಲ್ಲಿ ಆರ್‌ಎಸ್‌ಎಸ್ ಹಾಗೂ ಸಂಘ ಪರಿವಾರದ ವಿಭಜಕ ಮತ್ತು ಕೋಮು ಕಾರ್ಯಸೂಚಿಯನ್ನು ಜಾರಿಗೆ ತರುವುದನ್ನು ತಕ್ಷಣವೇ ತಡೆಯಬೇಕು ಹಾಗೂ ಸಂಪೂರ್ಣ ವಿದ್ಯಾರ್ಥಿ ಕೇಂದ್ರಿತ, ಜಾತ್ಯತೀತ ಶಿಕ್ಷಣ ನೀತಿಗಳನ್ನು ಜಾರಿಗೆ ತರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ತಮ್ಮ ಪಕ್ಷದ ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಂಗಳವಾರ (ಸೆಪ್ಟೆಂಬರ್ 29) ನವದೆಹಲಿಯಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪ್ರಮುಖ ನಾಯಕರು ಕಾಂಗ್ರೆಸ್ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಸಚಿವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಸಭೆಯ ನಂತರ ಮಾತನಾಡಿದ ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, “ಶಿಕ್ಷಣ ಕ್ಷೇತ್ರದ ಮೂಲಕ ಸಂಘ ಪರಿವಾರವು ದೇಶದಲ್ಲಿ ತನ್ನ ವಿಭಜಕ ಅಜೆಂಡಾವನ್ನು ತಳ್ಳಲು ನಡೆಸುತ್ತಿರುವ ಯತ್ನಗಳನ್ನು ಹೇಗೆ ಮೆಟ್ಟಿ ನಿಲ್ಲಬೇಕು ಮತ್ತು ಕಾಂಗ್ರೆಸ್ ಆಡಳಿತದ ರಾಜ್ಯಗಳು ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶಕ್ಕೆ ಹೇಗೆ ಮಾದರಿಯಾಗಬೇಕು ಎಂಬುದರ ಕುರಿತು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ ಶಿಕ್ಷಣ ತಜ್ಞರು ಮತ್ತು ಸಂಬಂಧಪಟ್ಟ ಪಾಲುದಾರರ ಮಾರ್ಗದರ್ಶನದಲ್ಲಿ ಶೀಘ್ರದಲ್ಲೇ ರಾಜ್ಯ ಮಟ್ಟದ ಬೃಹತ್ ಶಿಕ್ಷಣ ವಿಚಾರ ಸಂಕಿರಣಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಈ ವಿಚಾರ ಸಂಕಿರಣಗಳ ಸಲಹೆಗಳ ಆಧಾರದ ಮೇಲೆ ಮುಂದಿನ ಒಂದು ತಿಂಗಳ ಒಳಗಾಗಿ ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಸಮಗ್ರ ಕ್ರಿಯಾ ಯೋಜನೆಯನ್ನು (Action Plan) ಸಿದ್ಧಪಡಿಸಲಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಪರ್ಯಾಯ ಸುಧಾರಣೆಗಳನ್ನು ತಂದು ಮಾದರಿ ರಾಜ್ಯಗಳನ್ನಾಗಿ ರೂಪಿಸಲಿದ್ದಾರೆ. ಅಲ್ಲದೆ, ಆರ್‌ಎಸ್‌ಎಸ್ ಬೆಂಬಲಿತ ಕುಲಪತಿಗಳ (VC) ನೇಮಕ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ವಿಷಕಾರಿ ವಿಚಾರಗಳನ್ನು ತುಂಬುತ್ತಿರುವ ಪರಿಣಾಮಗಳ ಕುರಿತು ರಾಷ್ಟ್ರ ಮಟ್ಟದಲ್ಲಿ ತಜ್ಞರ ಸಮ್ಮೇಳನ ನಡೆಸಿ ರಾಷ್ಟ್ರೀಯ ಮಟ್ಟದ ಜಾಗೃತಿ ನೆಟ್‌ವರ್ಕ್ ರೂಪಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕೇಂದ್ರ ಸರ್ಕಾರದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ (NEP) ಶಿಕ್ಷಣದ ಕೇಂದ್ರೀಕರಣ, ವಾಣಿಜ್ಯೀಕರಣ ಮತ್ತು ಕೋಮುವಾದೀಕರಣಕ್ಕೆ ದಾರಿ ಮಾಡಿಕೊಡುತ್ತದೆ ಎಂಬುದು ಕಾಂಗ್ರೆಸ್‌ನ ಸ್ಪಷ್ಟ ನಿಲುವಾಗಿದೆ. ಈಗಾಗಲೇ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ‘ಎನ್‌ಇಪಿ’ ಅಧ್ಯಯನ ನಡೆಸಿ ಅದಕ್ಕೆ ಪರ್ಯಾಯವಾಗಿ ರಾಜ್ಯದ ಸ್ವಂತ ಶಿಕ್ಷಣ ನೀತಿಯನ್ನು (SEP) ತರಲು ಸಮಿತಿ ರಚಿಸಿದೆ. ಇನ್ನೊಂದೆಡೆ, ನೂತನವಾಗಿ ಅಧಿಕಾರಕ್ಕೆ ಬಂದಿರುವ ಕೇರಳದ ಯುಡಿಎಫ್ ಸರ್ಕಾರದಲ್ಲಿ ಕೇಂದ್ರದ ‘ಪಿಎಂ ಶ್ರೀ’ (PM SHRI) ಯೋಜನೆಯ ಅನುಷ್ಠಾನದ ಕುರಿತು ತೀವ್ರ ರಾಜಕೀಯ ವಿವಾದಗಳು ಸೃಷ್ಟಿಯಾಗಿದ್ದು, ಕೇಂದ್ರದ ಶಿಕ್ಷಣ ನೀತಿಗಳ ವಿರುದ್ಧ ಕಾಂಗ್ರೆಸ್ ಆಡಳಿತ ರಾಜ್ಯಗಳನ್ನು ಸಂಘಟಿಸಲು ಹೈಕಮಾಂಡ್ ಈಗ ಮುಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಹಾಗೂ ಚುನಾವಣಾ ಆಯೋಗದ ಅಕ್ರಮ ಖಂಡಿಸಿ ‘ಇಂಡಿಯಾ’ ಮೈತ್ರಿಕೂಟದ ರಾಷ್ಟ್ರವ್ಯಾಪಿ ಅಭಿಯಾನ: ಪ್ರಜಾಪ್ರಭುತ್ವ ರಕ್ಷಣೆಗೆ ವಿಪಕ್ಷಗಳಿಂದ 6 ಪ್ರಮುಖ ಬೇಡಿಕೆಗಳು!

ಚುನಾವಣಾ ಆಯೋಗದ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ಅಕ್ರಮಗಳು, 'ಫಾರ್ಮ್ 6' ನಮೂನೆಯಲ್ಲಿ ಸಾಫ್ಟ್‌ವೇರ್ ಮೂಲಕ ತಂದಿದ್ದ ಅಡೆತಡೆಗಳು ಹಾಗೂ ಮತದಾರರ ಪಟ್ಟಿಯಿಂದ ಅರ್ಹರ ಹೆಸರು ರದ್ದುಗೊಳಿಸಿರುವ ಕ್ರಮಗಳನ್ನು ಖಂಡಿಸಿ 'ಇಂಡಿಯಾ'...

ಮ್ಯಾನ್ಮಾರ್‌ನಲ್ಲಿ ಜನನಿಬಿಡ ಮಾರುಕಟ್ಟೆ ಮೇಲೆ ವೈಮಾನಿಕ ದಾಳಿ: 50ಕ್ಕೂ ಹೆಚ್ಚು ಸಾವು; ಗಡೀಪಾರು ನಿಲ್ಲಿಸಲು ಮಲೇಷ್ಯಾಕ್ಕೆ ವಿಶ್ವಸಂಸ್ಥೆ ಕರೆ

ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿ ಜನನಿಬಿಡ ಮಾರುಕಟ್ಟೆಯ ಮೇಲೆ ನಡೆದ ಮಿಲಿಟರಿ ವೈಮಾನಿಕ ದಾಳಿಯನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ವೋಲ್ಕರ್ ಟರ್ಕ್ ತೀವ್ರವಾಗಿ ಖಂಡಿಸಿದ್ದಾರೆ. ಕ್ಯುಕ್ತಾವ್ ಪಟ್ಟಣದಲ್ಲಿ ನಡೆದ ಈ ದಾಳಿಯಲ್ಲಿ ಮಹಿಳೆಯರು...

ಎನ್‌ಸಿಇಆರ್‌ಟಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ‘ಸೆಂಗೋಲ್‌’ ಸೇರ್ಪಡೆ

ನೂತನ ಸಂಸತ್ ಭವನದಲ್ಲಿ ಸ್ಥಾಪಿಸಲಾದ ಸೆಂಗೋಲ್‌ (ರಾಜದಂಡ) ಈಗ ಎನ್‌ಸಿಇಆರ್‌ಟಿಯ 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದ ಭಾಗವಾಗಿದೆ. ಪಠ್ಯಪುಸ್ತಕವು ಇದನ್ನು "ಆಡಳಿತ ಮತ್ತು ಉತ್ತಮ ಆಡಳಿತದ ಸಾಂಸ್ಕೃತಿಕ ಸಂಕೇತ" ಎಂದು...

Mangaluru| MRPLನಲ್ಲಿ ಭಾರಿ ಸ್ಫೋಟ: 8 ಮಂದಿಗೆ ಗಾಯ, ಕಂಪಿಸಿದ ಜೋಕಟ್ಟೆಯ ಮನೆಗಳು-ಅಂಗನವಾಡಿ

ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿ ಇರುವ ಮಂಗಳೂರು ರಿಫೈನರಿ ಅಂಡ್‌ ಪೆಟ್ರೋಕೆಮಿಕಲ್ಸ್‌‌ ಲಿಮಿಟೆಡ್‌ (MRPL) ಸಂಸ್ಥೆಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ (ಸಿಎಚ್‌ಟಿ) ಬುಧವಾರ ಮಧ್ಯಾಹ್ನ 12:15 ರ ಸುಮಾರಿಗೆ ಭಾರಿ...

ಎಸ್‌ಐಆರ್ ಪೂರ್ಣಗೊಂಡ ರಾಜ್ಯಗಳ ಫಾರ್ಮ್-6 ರಲ್ಲಿನ ‘ಸ್ವಘೋಷಣೆ’ ನಿಯಮಕ್ಕೆ ಬ್ರೇಕ್‌; ವಿವಾದದ ಬೆನ್ನಲ್ಲೇ ಚುನಾವಣಾ ಆಯೋಗದ ನಿರ್ಧಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪೂರ್ಣಗೊಂಡಿರುವ ರಾಜ್ಯಗಳಲ್ಲಿ, ಆನ್‌ಲೈನ್ ಮತದಾರರ ನೋಂದಣಿ 'ಫಾರ್ಮ್ 6' ರಲ್ಲಿದ್ದ ಹೆಚ್ಚುವರಿ ಎಸ್‌ಐಆರ್-ಸಂಬಂಧಿತ ಸ್ವಯಂಘೋಷಣಾ ಪತ್ರವನ್ನು ಚುನಾವಣಾ ಆಯೋಗವು ಹಿಂಪಡೆದಿದೆ. ಈ ನಿಯಮವು ಎಸ್‌ಐಆರ್...

‘ಇವಿಎಂ ಬಿಜೆಪಿ ಬಳಸುವ ಸಾಧನ’: ಬ್ಯಾಲೆಟ್ ಪೇಪರ್‌ಗೆ ಮರಳಲು ಖರ್ಗೆ ಒತ್ತಾಯ; ಗ್ಯಾನೇಶ್ ಕುಮಾರ್ ವಿರುದ್ಧ ವಾಗ್ದಾಳಿ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಮತ್ತು ಕೇಂದ್ರದ ಆಡಳಿತಾರೂಢ ಬಿಜೆಪಿ ನಡುವಿನ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ...

‘ಮಹಿಳೆಯರೇ ಪರಿಸ್ಥಿತಿ ಬದಲಿಸುತ್ತಾರೆ’: ಸುರಕ್ಷತೆ ಹೆಸರಿನಲ್ಲಿ ನಿರ್ಬಂಧ, ಅತ್ಯಾಚಾರ, ಲಿಂಗಾಧಾರಿತ ಹಿಂಸೆ ವಿರುದ್ಧ ದೆಹಲಿ ವಿದ್ಯಾರ್ಥಿನಿಯರ ಪ್ರತಿಭಟನೆ

ನವದೆಹಲಿ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಮರುಕಳಿಸುತ್ತಿರುವ ಬೆನ್ನಲ್ಲೇ, ಮಹಿಳೆಯರ ಸುರಕ್ಷತೆಯ ಹೆಸರಿನಲ್ಲಿ ಅವರ ಸ್ವಾತಂತ್ರ್ಯ ಮತ್ತು ಚಲನವಲನದ ಮೇಲೆಯೇ ನಿರ್ಬಂಧ ಹೇರುವ ಕ್ರಮಗಳ ವಿರುದ್ಧ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಬೀದಿಗಿಳಿದು...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಅವರ ಮೂರನೇ ಜಾಮೀನು ಅರ್ಜಿಯನ್ನೂ ತಿರಸ್ಕರಿಸಿದ ದೆಹಲಿ ಹೈಕೋರ್ಟ್‌

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿತರಾಗಿರುವ ವಿದ್ಯಾರ್ಥಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು...

Mysore| SIR ವಿರುದ್ಧ ಸರ್ಕಾರ ವಿಶೇಷ ಅಧಿವೇಶನ ನಡೆಸಲಿ: ಪ್ರಕಾಶ್ ರಾಜ್

ಕೇಂದ್ರ ಚುನಾವಣಾ ಆಯೋಗವು ಜಾರಿಗೆ ತಂದಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಿಂದಾಗಿ ರಾಜ್ಯದಲ್ಲಿ ಲಕ್ಷಾಂತರ ಬಡ ಹಾಗೂ ಅರ್ಹ ಮತದಾರರ ಹಕ್ಕು ಕಸಿಯಲಾಗುತ್ತಿದ್ದು, ಈ ಅನ್ಯಾಯದ ವಿರುದ್ಧ ನಾಗರಿಕ ಸಂಘಟನೆಗಳು ಸಂಗ್ರಹಿಸಿರುವ...

SIR: ‘ಫಾರ್ಮ್ 6’ ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ!

ಹೊಸ ಮತದಾರರ ನೋಂದಣಿಗೆ ಕಾಗದಪತ್ರಗಳ ಅಡೆತಡೆ ಒಡ್ಡುತ್ತಿದ್ದ ತನ್ಮೂಲಕ ಹಕ್ಕು ವಂಚಿತಗೊಳಿಸುತ್ತಿದ್ದ ಆರೋಪ ಎದುರಿಸುತ್ತಿದ್ದ ಕೇಂದ್ರ ಚುನಾವಣಾ ಆಯೋಗವು ಸಾರ್ವಜನಿಕ ಮತ್ತು ಕಾನೂನಾತ್ಮಕ ಒತ್ತಡದ ಹಿನ್ನೆಲೆಯಲ್ಲಿ ಭಾಗಶಃ ಹಿಂದೆ ಸರಿದಿದೆ. 'ವಿಶೇಷ ತೀವ್ರ...