Homeಮುಖಪುಟಎನ್‌ಹೆಚ್‌ಆರ್‌ಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ : ಅಸಮಾಧಾನ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ...

ಎನ್‌ಹೆಚ್‌ಆರ್‌ಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ : ಅಸಮಾಧಾನ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಹೆಚ್‌ಆರ್‌ಸಿ) ಅಧ್ಯಕ್ಷರ ನೇಮಕ ಪ್ರಕ್ರಿಯೆ ದೋಷಪೂರಿತವಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್‌ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಹೆಚ್‌ಆರ್‌ಸಿ) ಅಧ್ಯಕ್ಷರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ (ಡಿ.23) ನೇಮಿಸಿದ್ದಾರೆ.

ನ್ಯಾ. ರಾಮಸುಬ್ರಮಣಿಯನ್‌ ಅವರ ನೇಮಕ ಪೂರ್ವ ನಿರ್ಧರಿತ, ಇವರ ಆಯ್ಕೆ ಪ್ರಕ್ರಿಯೆ ವೇಳೆ
ಪರಸ್ಪರ ಸಮಾಲೋಚನೆ ಮತ್ತು ಒಮ್ಮತದ ನಿರ್ಧಾರ ಕೈಗೊಳ್ಳುವ ಸ್ಥಾಪಿತ ಸಂಪ್ರದಾಯವನ್ನು ನಿರ್ಲಕ್ಷಿಸಲಾಗಿದೆ ಎಂದು ಇಬ್ಬರು ನಾಯಕರು ಆರೋಪಿಸಿದ್ದಾರೆ.

ಎನ್‌ಹೆಚ್‌ಆರ್‌ಸಿ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತಾಧಿಕಾರ ಸಮಿತಿಯ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಡಿಸೆಂಬರ್ 18ರಂದು ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಸರ್ಕಾರ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್‌ ಅವರ ಹೆಸರನ್ನು ಪ್ರಸ್ತಾಪಿಸಿತ್ತು. ಆದರೆ, ರಾಹುಲ್ ಗಾಂಧಿ ಮತ್ತು ಖರ್ಗೆ ಅವರು, ಅಗತ್ಯವಿರುವ ಅರ್ಹತೆ ಮತ್ತು ಒಳಗೊಳ್ಳುವಿಕೆಯ ಅಗತ್ಯವನ್ನು ಪರಿಗಣಿಸಿ, ನ್ಯಾಯಮೂರ್ತಿಗಳಾದ ರೋಹಿಂಟನ್ ಫಾಲಿ ನಾರಿಮನ್ ಮತ್ತು ನ್ಯಾಯಮೂರ್ತಿ ಕುಟ್ಟಿಯಿಲ್ ಮ್ಯಾಥ್ಯೂ ಜೋಸೆಫ್ ಅವರ ಹೆಸರನ್ನು ಪ್ರಸ್ತಾಪಿಸಿ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಅಲ್ಪಸಂಖ್ಯಾತ ಪಾರ್ಸಿ ಸಮುದಾಯದ ಒಬ್ಬ ವಿಶಿಷ್ಟ ನ್ಯಾಯಶಾಸ್ತ್ರಜ್ಞ ನ್ಯಾಯಮೂರ್ತಿ ರೋಹಿಂಟನ್ ಫಾಲಿ ನಾರಿಮನ್ ಅವರು ತಮ್ಮ ಬೌದ್ಧಿಕ ಆಳ ಮತ್ತು ಸಾಂವಿಧಾನಿಕ ಮೌಲ್ಯಗಳಲ್ಲಿ ಹೊಂದಿರುವ ಅಚಲವಾದ ಬದ್ಧತೆಗೆ ಹೆಸರುವಾಸಿಯಾಗಿದ್ದಾರೆ. ಅವರನ್ನು ಎನ್‌ಹೆಚ್‌ಆರ್‌ಸಿ ಅಧ್ಯಕ್ಷರಾಗಿ ನೇಮಿಸುವುದು ಭಾರತದ ಬಹುತ್ವವನ್ನು ಎತ್ತಿ ಹಿಡಿಯಲಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದರು.

ಅದೇ ರೀತಿ ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯಕ್ಕೆ ಸೇರಿದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಜಸ್ಟಿಸ್ ಕುಟ್ಟಿಯಿಲ್ ಮ್ಯಾಥ್ಯೂ ಜೋಸೆಫ್ ಅವರು ವೈಯಕ್ತಿಕ ಸ್ವಾತಂತ್ರ್ಯ ಮತ್ತು ತಳ ಸಮುದಾಯಗಳ ರಕ್ಷಣೆಗೆ ಒತ್ತು ನೀಡುವ ತೀರ್ಪುಗಳನ್ನು ನೀಡಿದವರು. ಅವರು ಈ ಮಹತ್ವದ ಸ್ಥಾನಕ್ಕೆ ಆದರ್ಶ ಅಭ್ಯರ್ಥಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಎನ್‌ಹೆಚ್‌ಎಸ್‌ಆರ್‌ಸಿಯ ಇತರ ಸದಸ್ಯ ಸ್ಥಾನಗಳಿಗೆ ನ್ಯಾಯಮೂರ್ತಿ ಎಸ್. ಮುರಳೀಧರ್ ಮತ್ತು ನ್ಯಾಯಮೂರ್ತಿ ಅಕಿಲ್ ಅಬ್ದುಲ್‌ ಹಮೀದ್ ಖುರೇಷಿ ಅವರ ಹೆಸರನ್ನು ಕಾಂಗ್ರೆಸ್ ನಾಯಕರು ಶಿಫಾರಸು ಮಾಡಿದ್ದರು. ಈ ಇಬ್ಬರೂ ಕೂಡ ಮಾನವ ಹಕ್ಕುಗಳನ್ನು ಎತ್ತಿಹಿಡಿದ ಹಿನ್ನೆಲೆಯನ್ನು ಹೊಂದಿದ್ದಾರೆ.

“ನ್ಯಾಯಮೂರ್ತಿ ಎಸ್. ಮುರಳೀಧರ್ ಅವರು ಸಾಮಾಜಿಕ ನ್ಯಾಯದ ಪರ ತೀರ್ಪುಗಳನ್ನು ನೀಡಿದ ಖ್ಯಾತಿ ಹೊಂದಿದ್ದಾರೆ. ಕಸ್ಟಡಿ ಹಿಂಸಾಚಾರಗಳಂತ ಶೋಷಣೆಯನ್ನು ವಿರೋಧಿಸಿ, ನಾಗರಿಕ ಸ್ವಾತಂತ್ರ್ಯಗಳ ರಕ್ಷಣೆಗೆ ಅವರು ಕೊಡುಗೆ ನೀಡಿದ್ದಾರೆ”.

“ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನ್ಯಾಯಮೂರ್ತಿ ಅಕಿಲ್ ಅಬ್ದುಲ್ ಹಮೀದ್ ಖುರೇಷಿ ಅವರು ಸಾಂವಿಧಾನಿಕ ತತ್ವಗಳನ್ನು ನಿರಂತರವಾಗಿ ಸಮರ್ಥಿಸಿಕೊಂಡವರು. ಅವರು ಸೇವಾವಧಿಯಲ್ಲಿ ತನ್ನ ಕೆಲಸದ ಮೇಲೆ ಬದ್ದತೆ ಹೊಂದಿದ್ದರು. ಅವರನ್ನು ಎನ್‌ಹೆಚ್‌ಆರ್‌ಸಿಗೆ ಸೇರ್ಪಡೆಗೊಳಿಸಿದರೆ, ಎನ್‌ಹೆಚ್‌ಆರ್‌ಸಿಯ ಪರಿಣಾಮಕಾರಿತ್ವ, ವೈವಿಧ್ಯತೆ ಮತ್ತು ಅದರ ಬದ್ಧತೆಗೆ ಕೊಡುಗೆ ನೀಡಲಿದ್ದಾರೆ” ಎಂದು ಭಿನ್ನಾಭಿಪ್ರಾಯಪಟ್ಟಿದ್ದರು. ಆದರೆ, ಸಭೆಯಲ್ಲಿ ಇವುಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎನ್ನಲಾಗಿದೆ.

ಹೊಸದಾಗಿ ನೇಮಕಗೊಂಡಿರುವ ಎನ್‌ಹೆಚ್‌ಆರ್‌ಸಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಪರಸ್ಪರ ಸಮಾಲೋಚನೆ ಮತ್ತು ಒಮ್ಮತದ ನಿರ್ಧಾರದ ಸ್ಥಾಪಿತ ಸಂಪ್ರದಾಯವನ್ನು ನಿರ್ಲಕ್ಷಿಸಲಾಗಿದೆ. ಇದು ಅತ್ಯಂತ ಕಳವಳಕಾರಿ ಬೆಳವಣಿಗೆ. ಸಮಿತಿಯ ಸಭೆಯಲ್ಲಿ ಎತ್ತಿದ ಕೆಲವೊಂದು ಗಂಭೀರ ವಿಷಯಗಳನ್ನು ಬದಿಗೊತ್ತಿ, ಕೇವಲ ಸಂಖ್ಯಾತ್ಮಕ ಬಹುಮತದ ಆಧಾರದಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಮತ್ತು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಭಿನ್ನಬಿಪ್ರಾಯದ ಪತ್ರ ಬರೆದಿದ್ದಾರೆ.

ಎನ್‌ಹೆಚ್‌ಆರ್‌ಸಿಯು ಎಲ್ಲಾ ನಾಗರಿಕರ, ವಿಶೇಷವಾಗಿ ಸಮಾಜದಲ್ಲಿ ತುಳಿತಕ್ಕೊಳಗಾದ ಮತ್ತು ತಳಮಟ್ಟದ ವರ್ಗಗಳ ಮೂಲಭೂತ ಮಾನವ ಹಕ್ಕುಗಳನ್ನು ರಕ್ಷಿಸುವ ಕಾರ್ಯವನ್ನು ಹೊಂದಿರುವ ಪ್ರಮುಖ ಶಾಸನಬದ್ಧ ಸಂಸ್ಥೆಯಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಎನ್‌ಹೆಚ್‌ಆರ್‌ಸಿಯ ಪ್ರಮುಖರು ರಾಷ್ಟ್ರದ ಪ್ರಾದೇಶಿಕ, ಜಾತಿ, ಸಮುದಾಯ ಮತ್ತು ಧಾರ್ಮಿಕ ವೈವಿಧ್ಯತೆಯನ್ನು ಎತ್ತಿ ಹಿಡಿಯಬೇಕಿದೆ. ಈ ವಿಷಯಗಳಲ್ಲಿ ಸಮತೋಲನ ಕಾಯ್ದುಕೊಳ್ಳಬೇಕಿದೆ. ಎಲ್ಲರನ್ನೂ ಒಳಗೊಳ್ಳುವ ವೈವಿದ್ಯಮಯ ತೀರ್ಮಾನಗಳು ಇಲ್ಲಿ ಪ್ರಾಥಮಿಕ ಮಾನದಂಡವಾಗಬೇಕು. ಅಲ್ಲದೆ, ಕೇವಲ ಸಾಂಖ್ಯಿಕ ಬಹುಮತವಲ್ಲ ಎಂದು ಇಬ್ಬರು ನಾಯಕರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ : ಎನ್‌ಹೆಚ್‌ಆರ್‌ಸಿ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...