Homeಮುಖಪುಟಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

- Advertisement -
- Advertisement -

ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ ‘ನ್ಯಾಯಪತ್ರ’ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

ಖರ್ಗೆ ಪತ್ರವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, “ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಮತ್ತು ಅಂಚಿನಲ್ಲಿರುವ ಜನರಿಗೆ ನ್ಯಾಯ ಒದಗಿಸುವುದು’ ಕಾಂಗ್ರೆಸ್ ನ್ಯಾಯ ಪತ್ರದ ಗುರಿಯಾಗಿದೆ ಎಂದು ಖರ್ಗೆ ಪ್ರಧಾನಿಗೆ ತಿಳಿಸಿದ್ದಾರೆ. ನ್ಯಾಯ ಪತ್ರದ ಕುರಿತು ‘ವಿವರಿಸಲು’ ಮೋದಿ ಅವರನ್ನು ಭೇಟಿ ಮಾಡಲು ಸಿದ್ಧರಿರುವುದಾಗಿ ಹೇಳಿದ್ದಾರೆ. ಅಲ್ಲದೆ, ಪ್ರಧಾನಿಗೆ ತಮ್ಮ ಸಲಹೆಗಾರರು ತಪ್ಪು ಮಾಹಿತಿ ನೀಡುತ್ತಿರುವುದಾಗಿ ತಿಳಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಏಪ್ರಿಲ್ 6 ರಂದು ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದ ಬಿಜೆಪಿಯ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ಮೋದಿಯವರು ” ಕಾಂಗ್ರೆಸ್ ಪ್ರಣಾಳಿಕೆಯನ್ನು ಸುಳ್ಳಿನ ಕಂತೆ ಎಂದು ಕರೆದಿದ್ದರು. ಪ್ರಣಾಳಿಕೆಯ ಪ್ರತಿ ಪುಟವು ‘ಭಾರತವನ್ನು ತುಂಡು ತುಂಡುಗಳಾಗಿ ಒಡೆಯುತ್ತದೆ’ ಎಂದು ಹೇಳಿದ್ದರು. ಮುಸ್ಲಿಂ ಲೀಗ್‌ನ ವಿಚಾರಗಳನ್ನು ಭಾರತದ ಮೇಲೆ ಹೇರಲು ಕಾಂಗ್ರೆಸ್‌ ಬಯಸುತ್ತಿದೆ ಎಂದು ಆರೋಪಿಸಿದ್ದರು. ಸ್ವಾತಂತ್ರ್ಯದ ಸಮಯದಲ್ಲಿ ಮುಸ್ಲಿಂ ಲೀಗ್‌ನಲ್ಲಿದ್ದ ಅದೇ ಚಿಂತನೆಯು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರತಿಬಿಂಬಿಸುತ್ತಿದೆ ಎಂದು ಮೋದಿ ಆರೋಪಿಸಿದ್ದರು.

ಇದನ್ನೂ ಓದಿ : ರಾಮ ಮಂದಿರ, ಸಿಖ್ಖರ ಉಲ್ಲೇಖ ನೀತಿ ಸಂಹಿತೆ ಉಲ್ಲಂಘನೆಯಾಗದು: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ನೀಡಲು ಮುಂದಾದ ಚು.ಆಯೋಗ; ವರದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

0
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ...