Homeಮುಖಪುಟರಾಷ್ಟ್ರ ಮುಂದುವರಿಯಲು ಪ್ರಧಾನಿ ಮೋದಿಯಂತಹ ವ್ಯಕ್ತಿ ಬೇಕು: ಬಿಜೆಪಿ ಸೇರ್ಪಡೆ ಬಳಿಕ ನಟಿ ಖುಷ್ಬೂ

ರಾಷ್ಟ್ರ ಮುಂದುವರಿಯಲು ಪ್ರಧಾನಿ ಮೋದಿಯಂತಹ ವ್ಯಕ್ತಿ ಬೇಕು: ಬಿಜೆಪಿ ಸೇರ್ಪಡೆ ಬಳಿಕ ನಟಿ ಖುಷ್ಬೂ

ಖುಷ್ಬೂ ನಿರ್ಗಮನವು ಮುಂಬರುವ ತಮಿಳುನಾಡು ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

- Advertisement -
- Advertisement -

ಬಹುಭಾಷಾ ನಟಿ, ರಾಜಕಾರಣಿ ಖುಷ್ಬೂ ಸುಂದರ್ ಕಾಂಗ್ರೆಸ್ ತೊರೆದು ನಿರೀಕ್ಷೆಯಂತೇ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಪ‍್ರಧಾನ ಕಚೇರಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ, ತಮಿಳುನಾಡು ಉಸ್ತುವಾರಿ ಸಿ.ಟಿ ರವಿ ಮತ್ತು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಎಲ್‌.ಮುರುಗನ್ ಸಮ್ಮುಖದಲ್ಲಿ‌ ‌ಅಧಿಕೃತವಾಗಿ ಕಮಲಪಾಳಯ ಸೇರಿದ್ದಾರೆ.

ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದ ನಟಿ ’ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಬಯಸುವ ನನ್ನಂತಹ ಜನರನ್ನು ತುಳಿಯಲಾಗುತ್ತಿದೆ ಎಂದಿದ್ದರು. ಜೊತೆಗೆ ’ಪಕ್ಷದಲ್ಲಿ ವಾಸ್ತವ ಪರಿಸ್ಥಿತಿಯ ಅರಿವಿಲ್ಲದವರು ಅಥವಾ ಸಾರ್ವಜನಿಕವಾಗಿ ಗುರುತಿಸಿಕೊಳ್ಳದ ವ್ಯಕ್ತಿಗಳು ನಿಯಂತ್ರಣ ಹೇರುತ್ತಿದ್ದಾರೆ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದರು.

ಬಿಜೆಪಿ ಸೇರ್ಪಡೆ ಬಳಿಕ “ರಾಷ್ಟ್ರವು ಮುಂದುವರಿಯಬೇಕಾದರೆ, ದೇಶವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ನಮಗೆ ಪ್ರಧಾನಿ ನರೇಂದ್ರ ಮೋದಿಯಂತಹ ವ್ಯಕ್ತಿ ಬೇಕು” ಎಂದು ಖುಷ್ಬೂ ಸುಂದರ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ಗೆ ನಟಿ ಖುಷ್ಬೂ ರಾಜೀನಾಮೆ: ಇಂದು ಬಿಜೆಪಿ ಸೇರುವ ಸಾಧ್ಯತೆ

2021ರ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಖುಷ್ಬೂ ಅವರಿಗೆ ಪ್ರಮುಖ ಜವಾಬ್ದಾರಿ ನೀಡುವ ನಿರೀಕ್ಷೆಯಿದೆ. ರಾಜ್ಯಸಭಾ ಸ್ಥಾನ ನೀಡುವ ಬಗ್ಗೆ ವದಂತಿಗಳಿವೆ. “ಖುಷ್ಬೂ ತಮಿಳುನಾಡಿನಲ್ಲಿ ಬಿಜೆಪಿ ಬಗ್ಗೆಯ ಗ್ರಹಿಕೆಯನ್ನು ಬದಲಿಸುತ್ತಾರೆ” ಎಂದು ಬಿಜೆಪಿಯ ತಮಿಳುನಾಡು ಘಟಕ ಹೇಳಿದೆ. ತಮಿಳುನಾಡು ವಿಧಾನಸಭೆ ಚುನಾವಣೆಗೆ ಇನ್ನು ಎಂಟು ತಿಂಗಳು ಬಾಕಿ ಇದೆ.

2014ರಲ್ಲಿ ಸೋನಿಯಾ ಗಾಂಧಿ ಜೊತೆಗಿನ ಭೇಟಿ ಬಳಿಕ ನಟಿ ಡಿಎಂಕೆ ತೊರೆದ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಆದರೆ 2019ರ ಲೋಕಸಭಾ ಚುನಾವಣೆಯ ಡಿಎಂಕೆ–ಕಾಂಗ್ರೆಸ್‌ ಮೈತ್ರಿಯಲ್ಲಿ ಅವರಿಗೆ ಟಿಕೆಟ್‌ ಸಿಗಲಿಲ್ಲ, ಅಲ್ಲದೇ ರಾಜ್ಯಸಭೆಗೂ ಆಯ್ಕೆ ಮಾಡಲಿಲ್ಲ.

ನಟಿಯ ಪಕ್ಷ ಸೇರ್ಪಡೆ ಬಗ್ಗೆ ಟ್ವೀಟ್‌ ಮಾಡಿರುವ ಸಿ.ಟಿ ರವಿ, ‘ ತಮಿಳುನಾಡಿನಲ್ಲಿ ಬಿಜೆಪಿಯನ್ನು ಬಲಪಡಿಸಲು ಖುಷ್ಬೂ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ತಿರುಮುರುಗನ್‌ ಅವರ ನೇತೃತ್ವದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

ಇತ್ತ ಕಾಂಗ್ರೆಸ್ ಕೂಡ ಖುಷ್ಬೂ ಬಿಜೆಪಿ ಸೇರ್ಪಡೆಯಾಗಿರುವ ಕುರಿತು ಪ್ರತಿಕ್ರಿಯೆ ನೀಡಿದೆ. ಪಕ್ಷವನ್ನು ತೊರೆದ ನಟಿಗೆ “ಸೈದ್ಧಾಂತಿಕ ಬದ್ಧತೆ” ಇಲ್ಲ ಮತ್ತು ಅವರ ನಿರ್ಗಮನವು ಮುಂಬರುವ ತಮಿಳುನಾಡು ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

“ಅವರು ಬಿಜೆಪಿಗೆ ಸೇರಿರುವುದು ದುರದೃಷ್ಟಕರ. ಇದು ತಮಿಳುನಾಡು ರಾಜಕೀಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು  ತಮಿಳುನಾಡಿನ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

90ರ ದಶಕದಲ್ಲಿ ತಮಿಳುನಾಡಿನ ಅತ್ಯಂತ ಜನಪ್ರಿಯ ಸ್ಟಾರ್‌ ನಟ-ನಟಿಯರಲ್ಲಿ ಖುಷ್ಬೂ ಸಹ ಒಬ್ಬರಾಗಿದ್ದರು. ಆ ಸಮಯದಲ್ಲಿ ಅಭಿಮಾನಿಗಳು ಅವರಿಗಾಗಿಯೇ ದೇವಾಲಯವನ್ನೂ ಕಟ್ಟಿದ್ದರು. ಅವರು ಹಿರಿತೆರೆಯ ಜೊತೆಗೆ ಕಿರುತೆರೆಗಳಲ್ಲೂ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ: ಮೋದಿಗೆ 8,400 ಕೋಟಿ ರೂ. ವಿಮಾನ; ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್!: ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೇಹಾ ಕೊಲೆ ಪ್ರಕರಣ: ‘ತನಿಖೆ ದಿಕ್ಕು ತಪ್ಪುತ್ತಿದೆ’ ಎಂದು ಆರೋಪಿಸಿದ್ದ ತಂದೆ ಕ್ಷಮೆಯಾಚನೆ

0
ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಆರೋಪಿಸಿದ್ದ ಆಕೆಯ ತಂದೆ ನಿರಂಜನಯ್ಯ ಹಿರೇಮಠ ಇದೀಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಮಾಹಿತಿಯ ಕೊರತೆಯಿಂದ ಮಗಳ ಕೊಲೆ ಪ್ರಕರಣದ ತನಿಖೆ ದಿಕ್ಕು...