Homeಕರ್ನಾಟಕದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ...

ದೇವನಹಳ್ಳಿ| ಕೆಐಎಡಿಬಿ ಅಂತಿಮ ಅಧಿಸೂಚನೆ ಪ್ರತಿ ಸುಟ್ಟು ಆಕ್ರೋಶ; ಸರ್ಕಾರದ ವಿರುದ್ಧ ಸೆಟೆದು ನಿಂತ ಚನ್ನರಾಯಪಟ್ಟಣ ರೈತರು

- Advertisement -
- Advertisement -

ರೈತರ ಪ್ರತಿರೋಧವನ್ನೂ ಲೆಕ್ಕಿಸದೆ ಬಲವಂತದ ಭೂಸ್ವಾಧೀನಕ್ಕೆ ಮುಂದಾಗಿರುವ ಸರ್ಕಾರ, ಎರಡು ದಿನಗಳ ಹಿಂದಷ್ಟೇ ಚನ್ನರಾಯಪಟ್ಟಣ ಹೋಬಳಿಯ ಎಂಟು ಹಳ್ಳಿಗಳಿಗೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಈ ಬಗ್ಗೆ ಆಕ್ರೋಶಗೊಂಡಿರುವ ರೈತರು, ಚನ್ನರಾಯಪಟ್ಟಣ ನಾಡ ಕಚೇರಿ ಮುಂಭಾಗದ ಧರಣಿ ಸ್ಥಳದಲ್ಲಿ ಸಭೆ ನಡೆಸಿದರು. ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಹೊರಡಿಸಿರುವ ಅಂತಿಮ‌ ಅಧಿಸೂಚನೆಯನ್ನು ಸುಡುವ ಮೂಲಕ ಪ್ರತಿರೋಧ ವ್ಯಕ್ತಪಡಿಸಿದರು.

“ಯಾವುದೇ ಕಾರಣಕ್ಕೂ ಭೂಮಿ ಬಿಡುವ ಪ್ರಶ್ನೆಯೇ ಇಲ್ಲ, ನಮ್ಮ ಪ್ರಾಣತ್ಯಾಗವಾದರೂ ಸರಿ ನಾವು ಭೂಮಿ ಬಿಡುವುದಿಲ್ಲ, ಭೂಮಿ ತಂಟೆಗೆ ಬಂದವರನ್ನೂ ಸುಮ್ಮನೆ ಬಿಡುವುದಿಲ್ಲ” ಎಂದು ರೈತರು ಸರ್ಕಾರದ ವಿರುದ್ಧ ಸೆಟೆದು ನಿಂತಿದ್ದಾರೆ.

ಕಳೆದ ಮೂರುವರೆ ವರ್ಷಗಳಿಂದ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಭೂಸ್ವಾಧೀನವನ್ನು ವಿರೋಧಿಸಿ ನಿರಂತರ ಧರಣಿ ನಡೆಸುತ್ತಿದ್ದರೂ, ಈ ಪೈಕಿ ಇದುವರೆಗೂ ಎರಡು ಹಂತದಲ್ಲಿ 10 ಹಳ್ಳಿಗಳ 1280 ಎಕರೆ ಭೂಮಿಗೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಈ ಸರ್ಕಾರದ ಆದೇಶವನ್ನು ಖಂಡಿಸಿ ಮಾತನಾಡಿದ ರೈತರು “ಜನರ ಸಂಪೂರ್ಣ ವಿರೋಧದ ನಡುವೆಯು ಸರ್ಕಾರ ಬಲವಂತವಾಗಿ ಭೂಸ್ವಾಧೀನಕ್ಕೆ ಮುಂದಾಗಿರುವುದು ರೈತಸಮುದಾಯಕ್ಕೆ ಮಾಡುತ್ತಿರುವ ದ್ರೋಹ, ಇದನ್ನು ಸಹಿಸಲು ಸಾದ್ಯವೇ ಇಲ್ಲ” ಎಂದು ಆಕ್ರೋಶ ಹೊರಹಾಕಿದರು.

“ಈ ವಚನ ಭ್ರಷ್ಟ ಸರ್ಕಾರ, ಮಾತು ತಪ್ಪಿದ ಮುಖ್ಯಮಂತ್ರಿ ಮತ್ತು ಮಂತ್ರಿಗಳು ನಾಳೆ ನಮ್ಮ ಜಿಲ್ಲೆಯಲ್ಲಿ ಸಾಧನೆ ಸಮಾವೇಶ ಮಾಡುತ್ತಿದ್ದು, ಬಡ ರೈತರ ಭೂಮಿ ಕಸಿದುಕೊಂಡು ಬೀದಿಗೆ ತಳ್ಳುತ್ತಿರುವುದೆ ಇವರ ಅತಿದೊಡ್ಡ ಸಾಧನೆ, ಇದೇ ಈ ಕಾಲದ ವ್ಯಂಗ್ಯ. ಇದು ಈ ತಾಲ್ಲೂಕಿನ ಬಡ ರೈತರ ಸಮಾದಿಗಳ ಮೇಲೆ ನಡೆಸುತ್ತಿರುವ ಸಮಾವೇಶ” ಎಂದರು.

“ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರನ್ನು ಇತ್ತೀಚೆಗೆ ಬೇಟಿಯಾದಾಗಲೂ ರೈತರಿಗೆ ಯಾವುದೇ ಆತಂಕ ಬೇಡ, ನಾನು ರೈತರ ಪರವಾಗಿದ್ದು ಭೂಮಿಯನ್ನು ಉಳಿಸುತ್ತೇನೆ ಎಂದು ಹೇಳಿರುತ್ತಾರೆ. ಆದ್ದರಿಂದ, ರೈತರಿಗೆ ವಿಶ್ವಾಸದ್ರೋಹ‌ ಮಾಡದೆ, ತಕ್ಷಣವೇ ಈ ಅಧಿಸೂಚನೆಯನ್ನು ಹಿಂಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಿ ರೈತರಿಗೆ ನ್ಯಾಯ ಒದಗಿಸಬೇಕು” ಎಂದು ರೈತರು ಒತ್ತಾಯಿಸಿದರು.

“ಸರ್ಕಾರಕ್ಕೆ ಕಿಂಚಿತ್ತಾದರೂ ಬದ್ದತೆ ಇದ್ದರೆ, ನಾಳೆ ನಡೆಯುವ ಸಮಾವೇಶದಲ್ಲಿ ಚನ್ನರಾಯಪಟ್ಟಣ ಹೋಬಳಿಯ ರೈತರ ಭೂಮಿಯನ್ನು ಸ್ವಾಧೀನದಿಂದ ಕೈಬಿಡುವ ಘೋಷಣೆ ಮಾಡುವ ಮೂಲಕ ತಮ್ಮ ಘನತೆಯನ್ನು ಉಳಿಸಿಕೊಳ್ಳಲಿ. ಇಲ್ಲವಾದಲ್ಲಿ ಅತಿ ಶೀಘ್ರದಲ್ಲಿ ರೈತರ ತೀವ್ರ ಪ್ರತಿರೋಧ ಎದುರಿಸಲು ಸಜ್ಜಾಗಿ. ಇಷ್ಟು ದಿನಗಳ ಕಾಲ ಶಾಂತಿಯುತವಾಗಿ ಧರಣಿ ಕುಳಿತಿದ್ದೆವು. ಆದರೆ, ಈ ಬಾರಿ ರಕ್ತಪಾತವಾದರೂ ಸರಿ, ನಮ್ಮ ಪ್ರಾಣತ್ಯಾಗವಾದರು ಸರಿ ನಮ್ಮ ಭೂಮಿಯನ್ನು ಉಳಿಸಿಕೊಳ್ಳುವ ಶಪತ ತೊಟ್ಟು ಹೋರಾಟಕ್ಕೆ ದುಮುಕುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಭೆಯಲ್ಲಿ ನೀರಾವರಿ ಹೋರಾಟಗಾರರಾದ ಆಂಜನೇಯರೆಡ್ಡಿ, ಪ್ರಾಂತ್ಯ ರೈತ ಸಂಘದ ಚಂದ್ರತೇಜಸ್ವಿ, ಪ್ರಭಾ ಬೆಳವಂಗಲ, ರೈತ ಮುಖಂಡರಾದ ಕಾರಳ್ಳಿ ಶ್ರೀನಿವಾಸ್, ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತ್ಥಪ್ಪ, ತಿಮ್ಮರಾಯಪ್ಪ,ವೆಂಕಟೇಶ್, ಮುಕುಂದ, ಪ್ರಮೋದ್, ಮೋಹನ್, ಮಂಜುನಾಥ್, ಮಾರೇಗೌಡ ಸೇರಿದಂತೆ ನೂರಾರು ರೈತರು ಭಾಗಿಯಾಗಿದ್ದರು.

ಎದೆಗೆ ಬಿದ್ದ ಸಂವಿಧಾನ-ಭೂಮಿಗೆ ಬಿದ್ದ ಬೀಜ ಒಂದಲ್ಲ ಒಂದು ದಿನ ಫಲ ಕೊಡುತ್ತದೆ: ಮಾವಳ್ಳಿ ಶಂಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...