Homeಮುಖಪುಟಅಪ್ರಾಪ್ತ ಮುಸ್ಲಿಂ ಬಾಲಕಿಯ ಅಪಹರಣ: ಸಾಕ್ಷ್ಯ ನೀಡಿದರೂ ಆರೋಪಿಯ ಬಂಧಿಸದ ಪೊಲೀಸರು

ಅಪ್ರಾಪ್ತ ಮುಸ್ಲಿಂ ಬಾಲಕಿಯ ಅಪಹರಣ: ಸಾಕ್ಷ್ಯ ನೀಡಿದರೂ ಆರೋಪಿಯ ಬಂಧಿಸದ ಪೊಲೀಸರು

- Advertisement -
- Advertisement -

ಅಸ್ಸಾಂನ ಧುಬ್ರಿ ಜಿಲ್ಲೆಯ ಚಿರಕೋಟಾ ಗ್ರಾಮದ 13 ವರ್ಷದ ಮುಸ್ಲಿಂ ಬಾಲಕಿಯನ್ನು ಉತ್ತರ ಪ್ರದೇಶದ ಯುವಕನೊಬ್ಬ ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ಅಪಹರಿಸಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯು ಸ್ಥಳೀಯ ಮುಸ್ಲಿಂ ಸಮುದಾಯದಲ್ಲಿ ಹೆಚ್ಚುತ್ತಿರುವ ಕೋಪಕ್ಕೆ ಕಾರಣವಾಗಿದ್ದು, ಈ ಕುರಿತು ಪೊಲೀಸರ ನಿರ್ಲಕ್ಷ್ಯವು ಸ್ಥಳೀಯರ ಆಕ್ರೋಶಕ್ಕೆ ತುತ್ತಾಗಿದೆ.

ಧುಬ್ರಿಯ ಬಾಲಾಜಿ ಇಟ್ಟಿಗೆ ಉದ್ಯಮದಲ್ಲಿ ಕೆಲಸ ಮಾಡುತ್ತುದ್ದ ಪ್ರೇಮಚಂದ್ ಅಲಿಯಾಸ್ ಲಕ್ಕಿ ಎಂದು ಗುರುತಿಸಲಾದ ಆರೋಪಿಯು ತನ್ನ ಮಗಳೊಂದಿಗೆ ಸ್ನೇಹ ಬೆಳೆಸಿ ಅಂತಿಮವಾಗಿ ಅವಳನ್ನು ಕರೆದೊಯ್ದಿದ್ದಾನೆ ಎಂದು ಹುಡುಗಿಯ ತಂದೆ ಹೇಳಿದ್ದಾರೆ. ತನ್ನ ಮಗಳನ್ನು ವೇಶ್ಯಾವಾಟಿಕೆ ಅಥವಾ ಮಾನವ ಕಳ್ಳಸಾಗಣೆಕೆಗೆ ಮಾರಾಟ ಮಾಡಬಹುದೆಂಬ ಭಯದಿಂದ ತಂದೆ ಒಂದು ವಾರದ ಹಿಂದೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ಪೊಲೀಸರು ಇನ್ನೂ ಯಾವುದೇ ಮಹತ್ವದ ಕ್ರಮ ಕೈಗೊಳ್ಳದಿರುವುದು ಸಮುದಾಯದೊಳಗೆ ಬೇಸರ ಮೂಡಿಸಿದೆ.

ಪ್ರೇಮಚಂದ್ ಕುರಿತು ತಿಳಿದಿರುವ ಇಟ್ಟಿಗೆ ಉದ್ಯಮದ ಹಲವಾರು ಕಾರ್ಮಿಕರು ಮುಂದೆ ಬಂದು, ಅವನು ಹುಡುಗಿಯೊಂದಿಗೆ ಉತ್ತರ ಪ್ರದೇಶಕ್ಕೆ ಹಿಂತಿರುಗಿದ್ದಾನೆ ಎಂದು ಖಚಿತಪಡಿಸಿದ್ದಾರೆ. ಇಷ್ಟೆಲ್ಲಾ ಸಾಕ್ಷ್ಯಗಳಿದ್ದರೂ ಪೊಲೀಸರು ಪ್ರಕರಣದಲ್ಲಿ ಯಾವುದೇ ಪ್ರಗತಿ ಸಾಧಿಸಿಲ್ಲ. ಮುಸ್ಲಿಮ್ ಯುವಕರು ಮತ್ತು ಮುಸ್ಲಿಮೇತರ ಅಪರಾಧಿಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಪೊಲೀಸರು ನಡೆದುಕೊಳ್ಳುವ ರೀತಿಯಲ್ಲಿ ಸಂಪೂರ್ಣ ವ್ಯತಿರಿಕ್ತತೆಯನ್ನು ಇದು ತೋರಿಸುತ್ತದೆ. ಇದು ಬಾಲಕಿಯ ಕುಟುಂಬ ಮತ್ತು ಸ್ಥಳೀಯರಲ್ಲಿ ಹೆಚ್ಚುತ್ತಿರುವ ಅಸಮಾಧಾನವನ್ನು ತೋರ್ಪಡಿಸುತ್ತಿದೆ.

ಪ್ರತಿ ಬಾರಿ ಮುಸ್ಲಿಂ ಹುಡುಗನು ಇದೇ ರೀತಿಯ ಪರಿಸ್ಥಿತಿಯಲ್ಲಿ ತೊಡಗಿಸಿಕೊಂಡಾಗ, ಅವನನ್ನು ತ್ವರಿತವಾಗಿ ಬಂಧಿಸಲಾಗುತ್ತದೆ ಮತ್ತು ಅದನ್ನು ಲವ್ ಜಿಹಾದ್ ನ ಹಣೆಪಟ್ಟಿ ಕಟ್ಟಲಾಗುತ್ತದೆ ಎಂದು ಹುಡುಗಿಯ ತಂದೆ ಹೇಳಿದ್ದಾರೆ. ಆದರೆ ಇಲ್ಲಿ, ಆರೋಪಿ ಮುಸ್ಲಿಮೇತರನಾಗಿದ್ದಕ್ಕಾಗಿ ಪೊಲೀಸರು ಅಸಡ್ಡೆ ತೋರುತ್ತಿದ್ದಾರೆ. ಯಾಕೆ ಈ ಡಬಲ್ ಸ್ಟಾಂಡರ್ಡ್? ಎಂದು ಅವರು ಪ್ರಶ್ನಿಸಿದ್ದಾರೆ.

ಆರೋಪಿ ಮತ್ತು ಬಲಿಪಶುವಿನ ಧಾರ್ಮಿಕ ಗುರುತಿನಿಂದಾಗಿ ಅಧಿಕಾರಿಗಳು ಈ ಪ್ರಕರಣದಲ್ಲಿ ಕಣ್ಣು ಮುಚ್ಚಿದ್ದಾರೆ ಎಂದು ಸಮುದಾಯವು ಆರೋಪಿಸುತ್ತಿದೆ. ಇದು ಸ್ಥಳೀಯರ ಇನ್ನಷ್ಟು ಕೋಪಕ್ಕೆ ಕಾರಣವಾಗಿದೆ.

ರಾಜ್ಯದ ವಕೀಲ ಸಮುದಾಯದ ಪ್ರಮುಖರಾದ ಹಿರಿಯ ವಕೀಲ ಇಲ್ಯಾಸ್ ಅಹಮದ್ ಅವರು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ. “ಇವಳು ಹಿಂದೂ ಹುಡುಗಿಯಾಗಿದ್ದರೆ, ಈ ವಿಷಯವನ್ನು ಲವ್ ಜಿಹಾದ್ ಎಂದು ಹಣೆಪಟ್ಟಿ ಕಟ್ಟಲಾಗುತ್ತಿತ್ತು ಮತ್ತು ಪೊಲೀಸರು ಶೀಘ್ರವಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಅಹ್ಮದ್ ಹೇಳಿದ್ದಾರೆ. “ಆದರೆ ಇದು ಮುಸ್ಲಿಂ ಬಾಲಕಿಯ ವಿಷಯವಾಗಿರುವುದರಿಂದ ಇದಕ್ಕೆ ಪೊಲೀಸರ ಪ್ರತಿಕ್ರಿಯೆಯು ಆಲಸ್ಯದಿಂದ ಕೂಡಿದೆ. ಇದು ಗಂಭೀರ ಅನ್ಯಾಯವಾಗಿದೆ” ಎಂದಿದ್ದಾರೆ.

ಅಸ್ಸಾಂ ಸರ್ಕಾರ ಮತ್ತು ಪೊಲೀಸರು ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ವಕೀಲ ಅಹ್ಮದ್ ಕರೆ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಇಂತಹ ಪ್ರಕರಣದಲ್ಲಿ ಪೊಲೀಸರು ಕಾರ್ಯನಿರ್ವಹಿಸದಿರುವುದು ವಿಭಜಕ ಮನಸ್ಥಿತಿಯನ್ನು ಇನ್ನಷ್ಟು ಆಳವಾಗಿಸಲು ಮತ್ತು ಕಾನೂನು ಜಾರಿಯ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆಗಳನ್ನು ಎತ್ತುವಂತೆ ಮಾಡುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಹೆಚ್ಚುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಮತ್ತು ಸ್ಥಳೀಯ ಮುಸ್ಲಿಂ ಸಮುದಾಯದ ಸದಸ್ಯರು  ತಮ್ಮ ಕಳವಳವನ್ನು ಅಧಿಕಾರಿಗಳು ಪರಿಹರಿಸಬೇಕು ಮತ್ತು ಪೊಲೀಸರು ತೋರುತ್ತಿರುವ ಪಕ್ಷಪಾತವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. “ಸಂತ್ರಸ್ತರು ಅಥವಾ ಆರೋಪಿಯು ಯಾವುದೇ ಸಮುದಾಯಕ್ಕೆ ಸೇರಿದವರಾಗಿದ್ದರೂ ಕಾನೂನನ್ನು ಸಮಾನವಾಗಿ ಅನ್ವಯಿಸಬೇಕು” ಎಂದು ನಿವಾಸಿಯೊಬ್ಬರು ಹೇಳಿದ್ದಾರೆ.

ಕುಟುಂಬವು ನ್ಯಾಯಕ್ಕಾಗಿ ಕಾಯುತ್ತಿರುವಾಗ, ಈ ಪ್ರಕರಣದಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಎತ್ತಿ ತೋರಿಸುತ್ತದೆ ಮತ್ತು ಅವರ ಧಾರ್ಮಿಕ ಹಿನ್ನೆಲೆಯನ್ನು ಲೆಕ್ಕಿಸದೆ ಎಲ್ಲಾ ನಾಗರಿಕರಿಗೆ ಕಾನೂನಿನ ಅಡಿಯಲ್ಲಿ ಸಮಾನ ರಕ್ಷಣೆಯ ಅಗತ್ಯವನ್ನು ತೋರಿಸುತ್ತದೆ.

ಅಲ್ಲಾ ಕುರಿತು ಸಾಲು: ‘ರಘುಪತಿ ರಾಘವ ರಾಜ ರಾಮ್’ ಹಾಡದಂತೆ ತಡೆದ ಬಿಜೆಪಿ ನಾಯಕರು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...