Homeಕರ್ನಾಟಕಸಂತ್ರಸ್ತೆ ಅಪಹರಣ ಪ್ರಕರಣ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ರೇವಣ್ಣಗೆ ಜಾಮೀನು

ಸಂತ್ರಸ್ತೆ ಅಪಹರಣ ಪ್ರಕರಣ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ರೇವಣ್ಣಗೆ ಜಾಮೀನು

- Advertisement -
- Advertisement -

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಕೆಆರ್ ನಗರ ಸಂತ್ರಸ್ತೆಯ ಅಪಹರಣದಲ್ಲಿ ಜೈಲು ಸೇರಿದ್ದ ಶಾಸಕ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಇಂದು ವಿಚಾರಣೆ ಆರಂಭವಾಗುತ್ತಿದ್ದಂತೆ ಎಸ್‌ಐಟಿ ಪರ ವಾದ ಮಂಡಿಸಿದ ಜಯ್ನಾ ಕೊಠಾರಿಯವರು, ಜಾಮೀನಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. “ರೇವಣ್ಣ ಅವರೇ ಅಪಹರಣಕ್ಕೆ ಯೋಜನೆ ರೂಪಿಸಿದ್ದಾರೆ; ಇತರೆ ಆರೋಪಿಗಳು ಈಗಾಗಲೇ ಸ್ವ ಇಚ್ಛಾ ಹೇಳಿಕೆ ನೀಡಿದ್ದಾರೆ” ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.

ಕಿಡ್ನ್ಯಾಪ್‌ ಕೇಸ್‌ ಗಂಭೀರತೆ ಬಗ್ಗೆ ಕೋರ್ಟ್‌ ಗಮನಕ್ಕೆ ತಂದ ಎಸ್‌ಪಿಪಿ ಜಯ್ನಾ ಕೊಠಾರಿ, ರೇವಣ್ಣಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ವಾದ ಮಂಡಿಸಿದರು.

ಕಪೋಲಕಲ್ಪಿತ ಮಾಹಿತಿ ಕಲೆ ಹಾಕ್ತಿದ್ದಾರೆ; ಸಂತ್ರಸ್ತೆ ಮೇಲೆ ಯಾವುದೇ ಮಾರಣಾಂತಿಕ ಹಲ್ಲೆಯಾಗಿಲ್ಲ. ಪ್ರಕರಣದಲ್ಲಿ ಸಾಕ್ಷಿ ಕಲೆ ಹಾಕುವುದೇ ತಡವಾಗಿದೆ. ಪ್ರಾಥಮಿಕವಾಗಿ ಏನ್‌ ಮಾಡಬೇಕೋ ಅದನ್ನ ಸರಿಯಾಗಿ ಮಾಡಿಲ್ಲ. 364ಎ ಅಡಿ ಎಫ್‌ಐಆರ್‌ ದಾಖಲಾಗಿರುವುದೇ ಕಾನೂನುಬಾಹಿರ ಎಂದು ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್‌ ವಾದ ಮಂಡಿಸಿದರು.

“ರೇವಣ್ಣ ಅವರು ರಾಹುಕಾಲ, ಸಮಯ ಸರಿಇಲ್ಲ ಮತ್ತು ಹೊಟ್ಟೆ ನೋವು ಎಂಬ ಅನೇಕ ಕಾರಣ ನೀಡಿ ತನಿಖೆಗೆ ಸಹಕಾರ ನೀಡಿಲ್ಲ. ಹಾಗಾಗಿ, ಅವರಿಗೆ ಜಾಮೀನು ನೀಡಬಾರದು” ಎಂದು ಎಸ್‌ಐಟಿ ತಂಡದ ವಕೀಲರಾದ ಜಯ್ನಾ ಕೊಠಾರಿ ವಾದಿಸಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್‌ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ; ಇವಿಎಂ-ವಿವಿಪ್ಯಾಟ್ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...