Homeಕರ್ನಾಟಕಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

ಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

- Advertisement -
- Advertisement -

ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾಗಿರುವ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, “ಟಿಪ್ಪು ಸುಲ್ತಾನನ ಎಲ್ಲಾ ಅನುಯಾಯಿಗಳನ್ನು ಕೊಲ್ಲಬೇಕು” ಎಂದು ಹೇಳಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ. ಟಿಪ್ಪು ಸುಲ್ತಾನ್ ವಂಶಸ್ಥರನ್ನು ಓಡಿಸಿ ಕಾಡಿಗೆ ಕಳುಹಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಇಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಂಚಾಯತ್ ಪಟ್ಟಣದಲ್ಲಿ ಬಿಜೆಪಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಕಟೀಲು, “ನಾವು ಶ್ರೀರಾಮ, ಹನುಮಂತನ ಭಕ್ತರು. ನಾವು ಹನುಮಂತ ದೇವರಿಗೆ ಪ್ರಾರ್ಥನೆ ಮತ್ತು ನಮನ ಸಲ್ಲಿಸುತ್ತೇವೆ. ನಾವು ಟಿಪ್ಪು ವಂಶಸ್ಥರಲ್ಲ. ಟಿಪ್ಪು ವಂಶಸ್ಥರನ್ನು ಮನೆಗೆ ಕಳುಹಿಸೋಣ” ಎಂದಿದ್ದಾರೆ.

“ನೀವು ಹನುಮಂತನನ್ನು ಪ್ರಾರ್ಥಿಸುತ್ತೀರೋ, ಟಿಪ್ಪುವಿಗೆ ಪ್ರಾರ್ಥನೆ ಸಲ್ಲಿಸುತ್ತೀರೋ ಎಂದು ಕೇಳುತ್ತಿದ್ದೇನೆ. ಹಾಗಾದರೆ ನೀವು ಟಿಪ್ಪುವಿನ ಕಟ್ಟಾ ಅನುಯಾಯಿಗಳನ್ನು ಕಾಡಿಗೆ ಕಳುಹಿಸುತ್ತೀರಾ? ಯೋಚಿಸಿ. ಈ ರಾಜ್ಯಕ್ಕೆ ಭಗವಾನ್ ಹನುಮಾನ್ ಭಕ್ತರು ಬೇಕೋ ಅಥವಾ ಟಿಪ್ಪುವಿನ ವಂಶಸ್ಥರು ಬೇಕೋ? ಟಿಪ್ಪುವಿನ ಕಟ್ಟಾ ಅನುಯಾಯಿಗಳು ಈ ನೆಲದಲ್ಲಿ ಜೀವಂತವಾಗಿರಬಾರದು” ಎಂದು ಅವರು ಪ್ರಚೋದಿಸಿರುವುದಾಗಿ ವರದಿ ತಿಳಿಸಿದೆ.

ಬ್ರಿಟಿಷರೊಂದಿಗೆ ಹೋರಾಡಿದ ಟಿಪ್ಪು ಸುಲ್ತಾನ್‌ನನ್ನು ವಿರೋಧಿಸುತ್ತಾ ಬಂದಿರುವ ಬಿಜೆಪಿ ಮೊದಲಿನಿಂದಲೂ ಕೋಮು ಧ್ರುವೀಕರಣದ ರಾಜಕೀಯ ಮಾಡುತ್ತಿದೆ. ಟಿಪ್ಪು ಸುಲ್ತಾನ್ ವರ್ಸಸ್ ಹನುಮಾನ್ ಚರ್ಚೆಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರ್ನಾಟಕದಲ್ಲಿ 2018 ರ ಚುನಾವಣೆಗೆ ಮುಂಚಿತವಾಗಿ ಪ್ರಚೋದಿಸಿದ್ದರು.

“ಹನುಮಂತನನ್ನು ಮತ್ತು ವಿಜಯನಗರವನ್ನು ಪೂಜಿಸುವ ಬದಲು ಕಾಂಗ್ರೆಸ್ ಟಿಪ್ಪು ಸುಲ್ತಾನ್‌ನನ್ನು ಪೂಜಿಸುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಕಾಂಗ್ರೆಸ್ ಅನ್ನು ಕರ್ನಾಟಕ ವಜಾಗೊಳಿಸಿದರೆ, ಟಿಪ್ಪು ಸುಲ್ತಾನ್ ಪೂಜೆಗೆ ಬೇರೆ ಯಾರೂ ಬರುವುದಿಲ್ಲ” ಎಂದಿದ್ದರು.

ಈ ತಿಂಗಳ ಆರಂಭದಲ್ಲಿ ಮಾತನಾಡಿದ್ದ ಕಟೀಲ್, ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯು “ಟಿಪ್ಪು ವರ್ಸಸ್ ಸಾವರ್ಕರ್” ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. “ಅಗತ್ಯವಿಲ್ಲದ ಟಿಪ್ಪು ಜಯಂತಿಯನ್ನು ಆಚರಿಸಲು ಕಾಂಗ್ರೆಸ್‌ನವರು ಅವಕಾಶ ಮಾಡಿಕೊಟ್ಟರು. ಸಾವರ್ಕರ್ ಬಗ್ಗೆ ಅವಮಾನಕರವಾಗಿ ಮಾತನಾಡಿದರು” ಎಂದು ದೂರಿದ್ದರು.

ಏಪ್ರಿಲ್-ಮೇ ತಿಂಗಳಲ್ಲಿ ಕರ್ನಾಟಕದಲ್ಲಿ 224 ಸ್ಥಾನಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌- ಬಿಜೆಪಿ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ.

ಟಿಪ್ಪುವಿನ ಕುರಿತು ತಪ್ಪು ಕಲ್ಪನೆಗಳು

ಮೈಸೂರು ರಾಜ್ಯವನ್ನು ಆಳಿದ ’ಟಿಪ್ಪು ಸುಲ್ತಾನ್‌’ ಮತಾಂಧ, ಹಿಂದೂಗಳ ವಿರೋಧಿ, ನರಮೇಧ ನಡೆಸಿದವನು, ಕನ್ನಡ ವಿರೋಧಿ, ಅಸಂಖ್ಯಾತ ಹಿಂದೂಗಳನ್ನು ಇಸ್ಲಾಂಗೆ ಮತಾಂತರ ಮಾಡಿದವನು, ದೇವಾಲಯಗಳನ್ನು ಧ್ವಂಸ ಮಾಡಿದವನು- ಇತ್ಯಾದಿ ಸುಳ್ಳುಗಳನ್ನು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಪ್ರಚಾರ ಮಾಡಲಾಗುತ್ತಿದೆ. ಟಿಪ್ಪುವಿನ ಕುರಿತು ಹಬ್ಬಿಸಲಾದ ಇಂತಹ ಸುಳ್ಳುಗಳ ಕುರಿತು ಇತಿಹಾಸಕಾರರು, ವಿಚಾರವಂತರು ಸಾಕಷ್ಟು ಚರ್ಚೆ ಮಾಡಿದ್ದಾರೆ.

ಶೃಂಗೇರಿಯ ಮಠಾಧೀಶರಾಗಿದ್ದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಹಲವು ಪತ್ರಗಳೇ ಆತನ ಪರಧರ್ಮ ಸಹಿಷ್ಣುತೆಗೆ ಸಾಕ್ಷಿಯಾಗಿವೆ. ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಪತ್ರಗಳು ಕನ್ನಡದಲ್ಲಿರುವುದು- ಟಿಪ್ಪು ಕನ್ನಡ ವಿರೋಧಿ ಎನ್ನುವವರಿಗೆ ಉತ್ತರವಾಗಿವೆ. ಮರಾಠರ ಸೇನೆ ಶೃಂಗೇರಿ ಮಠದ ಮೇಲೆ ದಾಳಿ ಮಾಡಿದಾಗ, ಟಿಪ್ಪು ಸ್ವಾಮೀಜಿಯವರಿಗೆ ಪತ್ರ ಬರೆದು ಸಂತೈಸಿದ್ದಾರೆ. ಮಠಕ್ಕೆ, ಧಾರ್ಮಿಕ ಆಚರಣೆಗಳಿಗೆ ಬೇಕಾದ ಎಲ್ಲ ಸಹಕಾರವನ್ನು ಟಿಪ್ಪು ನೀಡಿರುವುದು ಇಲ್ಲಿನ ಪತ್ರಗಳಿಂದ ಸ್ಪಷ್ಟವಾಗುತ್ತದೆ. ಅಲ್ಲದೇ ಸ್ವಾಮೀಜಿಯವರ ಕುರಿತು ಟಿಪ್ಪುವಿಗೆ ಇದ್ದ ಪ್ರೀತಿ, ಗೌರವ ಮಹತ್ವದ್ದು.

ಸ್ವಾಮೀಜಿಯವರು ಪುಣೆಗೆ ಹೋಗಿ ಹಲವು ದಿನಗಳಾದರೂ ವಾಪಸ್ ಬರದಿದ್ದಾಗ ಟಿಪ್ಪು ಪತ್ರ ಬರೆದು, “ಶ್ರೀ ಸ್ವಾಮೀಜಿಯವರಿಗೆ ಟಿಪ್ಪು ಸುಲ್ತಾನ್ ಬಾದಶಹರವರ ಸಲಾಮು…. ತಮ್ಮಂಥಾ ದೊಡ್ಡವರು ಯಾವ ದೇಶದಲ್ಲಿ ಇದ್ದರೂ ಆ ದೇಶಕ್ಕೆ ಮಳೆ, ಬೆಳೆ ಸಕಲವೂ ಆಗಿ ಸುಭಿಕ್ಷೆಯೂ ಆಗಿ ಇರತಕ್ಕದ್ದರಿಂದ ಪರಸ್ಥಳದಲ್ಲಿ ಬಹಳ ದಿವಸ ತಾವು ಯಾತಕ್ಕೆ ಇರಬೇಕು? ಹೋದ ಕೆಲಸವನ್ನು ಕ್ಷಿಪ್ರದಲ್ಲಿ ಅನುಕೂಲ ಮಾಡಿಸಿಕೊಂಡು ಸ್ಥಳಕ್ಕೆ ಸಾಗಿಬರುವಂತೆ ಮಾಡಿಸುವುದು…” ಎಂದು ಭಿನ್ನವಿಸಿಕೊಳ್ಳುವುದು ಹೃದಯಸ್ಪರ್ಶಿಯಾಗಿದೆ. ಟಿಪ್ಪುವಿಗೆ ಇಸ್ಲಾಮೀ ಶಿಕ್ಷಣವನ್ನು ಮೌಲವಿ ಉಬೇದುಲ್ಲಾಹ್ ನೀಡಿದರೆ, ಹಿಂದೂ ಧಾರ್ಮಿಕ ಶಿಕ್ಷಣವನ್ನು ಗೋವರ್ಧನ ಪಂಡಿತರು ನೀಡಿದ್ದರು.

ಟಿಪ್ಪುವಿನ ನ್ಯಾಯದಾನ ವ್ಯವಸ್ಥೆಯೂ ಮಾನವೀಯವಾಗಿತ್ತು. ತಿರುವಾಂಕೂರಿನ ನಂಬೂದಿರಿ ಜಾತಿಯ ಅರಸರು ಕೇರಳದಲ್ಲಿ ’ಮುಲಕ್ಕರ’ (ಸ್ತನ ತೆರಿಗೆ) ಎಂಬ ಅಮಾನವೀಯ ತೆರಿಗೆಯನ್ನು ಅಲ್ಲಿನ ಕೆಳವರ್ಗದ ಮಹಿಳೆಯರಿಗೆ ವಿಧಿಸುತ್ತಿದ್ದರು. ಋತುಮತಿಯಾದ ಕೆಳವರ್ಗದ ಮಹಿಳೆಯರು ಮೇಲ್ವಸ್ತ್ರ ಧರಿಸದೇ
ತಮ್ಮ ಸ್ತನಗಳು ಕಾಣುವಂತೆ ಅವರು ನಡೆದಾಡಬೇಕಿತ್ತು. ಒಂದು ವೇಳೆ ಯಾರಾದರೂ ಸ್ತನ ಮುಚ್ಚುವ ಮೇಲ್ವಸ್ತ್ರ ಧರಿಸಿದರೆ ಅದಕ್ಕಾಗಿ ತೆರಿಗೆ ಕಟ್ಟಬೇಕಾಗಿತ್ತು. ಇಂತಹ ಅಮಾನವೀಯ ಪದ್ಧತಿಯ ವಿರುದ್ಧ ಮೊಟ್ಟಮೊದಲು ಕಾನೂನು ಜಾರಿಗೆ ತಂದು ಕೆಳವರ್ಗದ ಮಹಿಳೆಯರಿಗೆ ಗೌರವ ಕೊಟ್ಟ ಅರಸ ಟಿಪ್ಪು ಸುಲ್ತಾನ್. ಭೂಮಿ ಇಲ್ಲದವರು ಭೂಮಿ ಹೊಂದಲು ಅವಕಾಶ ನೀಡಿದರು. ರೈತರ ಮೇಲಿನ ತೆರಿಗೆ ಭಾರ ಕಡಿಮೆ ಮಾಡಿದರು. ಕೃಷಿ ಪರಿಕರಗಳನ್ನು ಖರೀದಿಸಲು ಮುಂಗಡ ಹಣ ನೀಡುವ ಪದ್ಧತಿ ಶುರುಮಾಡಿದರು. ಕೆ.ಆರ್.ಎಸ್. ಅಣೆಕಟ್ಟೆಗೆ ಅಡಿಗಲ್ಲು ಹಾಕಿದರು. ಕಾರ್ಮಿಕರ ಘನತೆಯನ್ನು ಎತ್ತಿ ಹಿಡಿದರು – ಇಂತಹ ಹಲವು ಸುಧಾರಣೆಗಳತ್ತ ಗಮನ ಹರಿಸಿದ ಟಿಪ್ಪು, ಮೂವರು ಶತ್ರುಗಳನ್ನು (ಬ್ರಿಟಿಷರು, ಮರಾಠರು, ನಿಜಾಮರು) ಸದಾ ಎದುರಿಸಬೇಕಾಯಿತು.

(ಟಿಪ್ಪುವಿನ ಆಡಳಿತ ಮತ್ತು ಹೋರಾಟದ ಕುರಿತು ‘ನಾನುಗೌರಿ.ಕಾಂ’ನಲ್ಲಿ ಸಾಕಷ್ಟು ಲೇಖನಗಳು ಪ್ರಕಟವಾಗಿವೆ. ಅವುಗಳನ್ನು ಓದಲು ‘ಇಲ್ಲಿ’ ‘ಕ್ಲಿಕ್’ ಮಾಡಿರಿ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...