Homeಕರ್ನಾಟಕಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?: ಮೂಢನಂಬಿಕೆ ವಿರುದ್ಧ ನಟ ಕಿಶೋರ್‌ ಜಾಗೃತಿ

ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?: ಮೂಢನಂಬಿಕೆ ವಿರುದ್ಧ ನಟ ಕಿಶೋರ್‌ ಜಾಗೃತಿ

- Advertisement -
- Advertisement -

“ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ?” ಎಂಬ ಪ್ರಶ್ನೆಯನ್ನು ಕೇಳುವ ಮೂಲಕ ನಟ ಕಿಶೋರ್‌, “ನಂಬಿಕೆ ಇರಲಿ ಮೂಢನಂಬಿಕೆ ಬೇಡ” ಜಾಗೃತಿ ಮೂಡಿಸಿದ್ದಾರೆ.

“ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ ಹರಿದು ಬಂತು. ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳಿವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ” ಎಂದು ಅವರು ತಮ್ಮ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

“ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಇರುವುದಿಲ್ಲ? ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ. ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ” ಎಂದಿದ್ದಾರೆ.

“ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ.‘ ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ” ಎಂದು ತಿಳಿಸಿದ್ದಾರೆ.

ಕಾಂತಾರ ಸಿನಿಮಾ ಬಳಿಕ ಹಲವು ಚರ್ಚೆ

‘ಕಾಂತಾರ’ ಸಿನಿಮಾ ಬಿಡುಗಡೆಯಾಗಿ ಸದ್ದು ಮಾಡಿದ ಬೆನ್ನಲ್ಲೇ ಹಲವಾರು ಚರ್ಚೆಗಳು ಮುನ್ನೆಲೆಗೆ ಬಂದಿವೆ. ಕರಾವಳಿ ಭಾಗದಲ್ಲಿನ ದೈವಾರಾಧನೆಯ ಕುರಿತು ಬೆಳಕು ಚೆಲ್ಲಿದ್ದ ಕಾಂತಾರ, “ದೈವವನ್ನು ಚಿತ್ರಿಸಿರುವ ರೀತಿ”ಯ ಕಾರಣ ಹಲವು ವಿಶ್ಲೇಷಣೆಗಳಿಗೆ ಒಳಪಟ್ಟಿತ್ತು.

ಈ ಹಿಂದೆ ನಟ ಚೇತನ್‌, “ನಮ್ಮ ಕನ್ನಡದ ಚಲನಚಿತ್ರ ಕಾಂತಾರವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ” ಎಂದಿದ್ದರು.

“ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ” ಎಂದು ತಿಳಿಸಿದ್ದರು.

ದೈವವನ್ನು ವೈಚಾರಿಕವಾಗಿಸದೆ ಮೌಢ್ಯವಾಗಿಸಿದ ಹೆಗ್ಗಳಿಕೆ ‘ಕಾಂತಾರ’ ಸಿನಿಮಾಕ್ಕೆ ಸಲ್ಲುತ್ತದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

‘ಕಾಂತಾರ- ಒಂದು ದಂತಕಥೆ’ ಎಂದು ರಿಷಬ್ ಹೇಳಿದ್ದಾರೆ. ಆದರೆ ಇದನ್ನು ಸಾಮಾನ್ಯ ಜನಸಮೂಹ ದಂತಕಥೆಯಾಗಿಯೋ, ಕಾಲ್ಪನಿಕವಾಗಿಯೋ ಗ್ರಹಿಸುವುದಕ್ಕಿಂತ ವಾಸ್ತವವೆಂಬಂತೆ ನಂಬಿಬಿಡುವ ಹಾಗೂ ಹಿಂದುತ್ವವಾದಿಗಳು ತಮ್ಮ ರಾಜಕಾರಣಕ್ಕೆ ಬಳಸಿಕೊಳ್ಳುವ ಅಪಾಯವಿರುತ್ತದೆ. ಸಂಸ್ಕೃತಿಯ ನೆಪದಲ್ಲಿ ದೃಶ್ಯ ಮಾಧ್ಯಮವೊಂದು ಮೌಢ್ಯವನ್ನು ರಾರಾಜಿಸುವುದು ಆತಂಕದ ಸಂಗತಿ. ಸಾಂಸ್ಕೃತಿಕ ಪರಿಕರಗಳನ್ನು ದೃಶ್ಯಮಾಧ್ಯಮಕ್ಕೆ ಒಳಪಡಿಸಿದಾಗ ಕಲಾತ್ಮಕತೆ ಹೆಚ್ಚುತ್ತದೆ ಎಂಬುದು ನೂರಕ್ಕೆ ನೂರರಷ್ಟು ನಿಜ. ಆದರೆ ಆ ಸಾಂಸ್ಕೃತಿಕ ಕಲಾತ್ಮಕತೆ ಮೌಢ್ಯದ ರೂಪವಾಗಿರಬಾರದು‌. ಅದು ರೂಪಕವಾಗಿ ಹೊಮ್ಮಬೇಕು. ಆಗ ಮಾತ್ರ ವಿಶಿಷ್ಟ ಅನುಭೂತಿಯನ್ನು ಕಲಾ ಮಾಧ್ಯಮವೊಂದು ನೀಡಬಲ್ಲದು‌ ಎಂಬ ವಿಶ್ಲೇಷಣೆಗಳು ಬಂದಿದ್ದವು.

ಇದನ್ನೂ ಓದಿರಿ: ‘ಕಾಂತಾರ’ ದೈವಕ್ಕೂ ‘ಕರ್ಣನ್‌’ ದೈವಕ್ಕೂ ಎಷ್ಟೊಂದು ವ್ಯತ್ಯಾಸ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...