Homeಕರ್ನಾಟಕ'ಕಿಂಗ್ ಮೇಕರ್' ಕನಸು ನುಚ್ಚುನೂರಾಗಿದ್ದರಿಂದ HDK ಭಗ್ನಪ್ರೇಮಿಯಂತೆ ವ್ಯಗ್ರರಾಗಿದ್ದಾರೆ: ದಿನೇಶ್ ಗುಂಡೂರಾವ್

‘ಕಿಂಗ್ ಮೇಕರ್’ ಕನಸು ನುಚ್ಚುನೂರಾಗಿದ್ದರಿಂದ HDK ಭಗ್ನಪ್ರೇಮಿಯಂತೆ ವ್ಯಗ್ರರಾಗಿದ್ದಾರೆ: ದಿನೇಶ್ ಗುಂಡೂರಾವ್

- Advertisement -
- Advertisement -

ವಿದೇಶದಿಂದ ಬರುತ್ತಿದ್ದಂತೆಯೇ ಮಾಜಿ ಮುಖ್ಯಂಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್​ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಬಾಂಬ್ ಸಿಡಿಸಿದ್ದಾರೆ. ಇದರ ಬೆನ್ನಲ್ಲೇ ಕುಮಾರಸ್ವಾಮಿ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇನ್ನು ಇದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರು ತಿರುಗೇಟು ಕೊಡುತ್ತಿದ್ದಾರೆ. ಇದೀಗ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್​ ಮೂಲಕ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

”ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ HDKಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ HDK ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ?” ಎಂದು ಕೇಳಿದ್ದಾರೆ.

”HDKಯವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. HDKಯವರು ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು?” ಎಂದಿದ್ದಾರೆ.

”HDKಯವರು ಚುನಾವಣೆಗೂ ಮುನ್ನ ‘ಕಿಂಗ್ ಮೇಕರ್’ ಆಗುವ ಕನಸು ಕಂಡಿದ್ದರು. ಆದರೆ ಜನರು ಚುನಾವಣೆಯಲ್ಲಿ HDK ‘ಕಿಂಗ್ ಮೇಕರ್’ ಕನಸನ್ನು ನುಚ್ಚುನೂರು ಮಾಡಿದರು. ಕನಸು ಭಗ್ನಗೊಂಡ HDK, ಭಗ್ನಪ್ರೇಮಿಯಂತೆ ವ್ಯಗ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ” ಎಂದು ದಿನೇಶ್ ಗುಂಡೂರಾವ್ ಅವರು ವಾಗ್ದಾಳಿ ನಡೆಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...