Homeಕರ್ನಾಟಕಪಿಎಸ್‌ಐ ಹಗರಣದ ಕಿಂಗ್‌ ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನ

ಪಿಎಸ್‌ಐ ಹಗರಣದ ಕಿಂಗ್‌ ಪಿನ್‌, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನ

- Advertisement -
- Advertisement -

ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿದಂತೆ ಐವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. ಸಿಐಡಿ ಎಸ್‌.ಪಿ. ರಾಘವೇಂದ್ರ ಹೆಗಡೆ ನೇತೃತ್ವದ ತಂಡ ಆರೋಪಿಗಳನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾಗಿ ವರದಿಯಾಗಿದ್ದು, ಅವರನ್ನು ಕಲಬುರಗಿಗೆ ಕರೆತರುತ್ತಿದೆ ಎಂದು ಸಿಐಡಿ ಮೂಲಗಳನ್ನು ಉಲ್ಲೇಖಿಸಿ ಪ್ರಜಾವಾಣಿ ವರದಿ ಮಾಡಿದೆ.

ದಿವ್ಯಾ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ 18ನೇ ಆರೋಪಿಯಾಗಿದ್ದಾರೆ. ದಿವ್ಯಾ ಪತಿ ರಾಜೇಶ ಹಾಗರಗಿಯನ್ನು ಈ ಹಿಂದೆ ಬಂಧಿಸಲಾಗಿದ್ದು, ಆದರೆ ದಿವ್ಯ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದರು. ದಿವ್ಯಾ ಜೊತೆಗೆ ಬಂಧಿತರಾದವರನ್ನು, ದಿವ್ಯಾ ಒಡೆತನದ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶೀನಾಥ, ಅದೇ ಶಾಲೆಯ ಶಿಕ್ಷಕಿಯರಾದ ಅರ್ಚನಾ, ಸುನಂದಾ ಹಾಗೂ ಅಭ್ಯರ್ಥಿ ಶಾಂತಿಬಾಯಿ ಎಂದು ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಿವ್ಯಾ ಕಲಬುರಗಿಯಲ್ಲಿ ಜ್ಞಾನ ಜ್ಯೋತಿ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದು, ಕಲಬುರಗಿ ಬಿಜೆಪಿಯ ಮಹಿಳಾ ಘಟಕದ ಅಧ್ಯಕ್ಷರಾಗಿದ್ದರು. ಘಟನೆ ಬೆಳಕಿಗೆ ಬಂದ ನಂತರ ಪಕ್ಷ ಅವರಿಂದ ಅಂತರ ಕಾಪಾಡಿಕೊಂಡು, ಆಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: ಕ್ಷೇತ್ರ ಮರು ವಿಂಗಡಣೆ: ಹಿಂದೂಗಳು ಹೆಚ್ಚಿರುವ ಜಮ್ಮುವಿನಲ್ಲಿ 6 ಹೆಚ್ಚು ಕ್ಷೇತ್ರ ಸೃಷ್ಟಿ, ಮುಸ್ಲಿಮರು ಹೆಚ್ಚಿರುವ ಕಾಶ್ಮೀರಕ್ಕೆ ಕೇವಲ ಒಂದು!

ಆದಾಗ್ಯೂ, ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಅವರು ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು ಮತ್ತು ಪಕ್ಷದಲ್ಲಿ ಸ್ಥಾನಗಳನ್ನು ಹೊಂದಿದ್ದಾರೆ ಎಂದು ಖಚಿತಪಡಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ನೇಮಕಾತಿ ಫಲಿತಾಂಶಗಳನ್ನು ಪ್ರಕಟಿಸಿದ ನಂತರ ಫೆಬ್ರವರಿಯಲ್ಲಿ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದಿವ್ಯಾ ಅವರನ್ನು ಭೇಟಿ ಮಾಡಿದ್ದರು.

ವೀರೇಶ್ ಎಂಬ ಅಭ್ಯರ್ಥಿಯು ನೇಮಕಾತಿ ಪರೀಕ್ಷೆಯಲ್ಲಿ ಕೇವಲ 21 ಪ್ರಶ್ನೆಗಳಿಗೆ ಉತ್ತರಿಸಿದ್ದರೂ 121 ಅಂಕಗಳನ್ನು ಪಡೆದಿದ್ದು ಬೆಳಕಿಗೆ ಬಂದ ನಂತರ ಸಿಐಡಿ ತನಿಖೆಯಲ್ಲಿ ದಿವ್ಯಾ ಹೆಸರು ಕೇಳಿ ಬಂದಿತ್ತು. ಅವರ ಪರೀಕ್ಷಾ ಕೇಂದ್ರ ಜ್ಞಾನ ಜ್ಯೋತಿ ಸಂಸ್ಥೆಯಾಗಿತ್ತು. ಪರೀಕ್ಷೆಯಲ್ಲಿ ವೀರೇಶ್ 7ನೇ ರ್‍ಯಾಂಕ್‌ ಪಡೆದಿದ್ದರು, ಆದರೆ ತನಿಖೆ ವೇಳೆ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿತ್ತು. ದಿವ್ಯಾ ಅವರ ಸಂಸ್ಥೆಯಲ್ಲಿ ಹಲವಾರು ಅಭ್ಯರ್ಥಿಗಳು ದುಷ್ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದ ಮಾಡಿದೆ.

ವಾಸ್ತವವಾಗಿ, ಸ್ಥಳೀಯ ಸಾರ್ವಜನಿಕ ಶಿಕ್ಷಣ ನಿರ್ದೇಶಕರು ದಿವ್ಯಾ ಅವರ ಸಂಸ್ಥೆಯಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದಾಗಿ ಪರೀಕ್ಷೆಗಳನ್ನು ನಡೆಸದಂತೆ ಶಿಫಾರಸು ಮಾಡಿದ್ದರು. ಅದಾಗಿಯೂ ಪೊಲೀಸ್ ನೇಮಕಾತಿ ವಿಭಾಗವು ಅದೇ ಶಾಲೆಯನ್ನು ಪರೀಕ್ಷಾ ಕೇಂದ್ರವಾಗಿ ಆಯ್ಕೆ ಮಾಡಿತ್ತು. ಜೊತೆಗೆ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕೂಡಾ ಕಾರ್ಯನಿರ್ವಹಿಸಿರಲಿಲ್ಲ ಎಂದು ವರದಿಯಾಗಿದೆ.

ಇದನ್ನೂ ಓದಿ:  ದಲಿತ ಇತಿಹಾಸ ತಿಂಗಳು: ಗತದ ನೆನಪುಗಳು ಮತ್ತು ವರ್ತಮಾನದ ಅವಮಾನ, ಹಲ್ಲೆ- ಕೊಲೆಗಳು

ಪಿಎಸ್‌ಐ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗುತ್ತಿದ್ದಂತೆ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಕೇಳಿ ಬಂದಿತ್ತು. ಒತ್ತಡ ಹೆಚ್ಚುತ್ತಿದ್ದಂತೆ ರಾಜ್ಯ ಸರ್ಕಾರವು ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಪ್ರಕರಣ ದಾಖಲಿಸುತ್ತಿದ್ದಂತೆ ದಿವ್ಯಾ ನಾಪತ್ತೆಯಾಗಿದ್ದರು.

ಈ ಮಧ್ಯೆ, ಸ್ಥಳೀಯ ನ್ಯಾಯಾಲಯ ದಿವ್ಯಾ ಹಾಗೂ ಇತರ ಆರು ಆರೋಪಿಗಳ ವಿರುದ್ಧ ಬಂಧನ ವಾರೆಂಟ್‌ ಹೊರಡಿಸಿ, ವಾರದಲ್ಲಿ ಶರಣಾಗಲು ಸೂಚಿಸಿತ್ತು. ಒಂದು ವೇಳೆ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವನ್ನೂ ನೀಡಿತ್ತು.

ಹಗರಣದ ಮತ್ತೊಬ್ಬ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ, ಅವರ ಸಹೋದರ ಕಾಂಗ್ರೆಸ್ ಮುಖಂಡ ಮಹಾಂತೇಶ ಪಾಟೀಲ, ದಿವ್ಯಾ ಪತಿ ರಾಜೇಶ ಹಾಗರಗಿ ಸೇರಿದಂತೆ ಅಭ್ಯರ್ಥಿಗಳು, ಮೇಲ್ವಿಚಾರಕಿಯರು, ಸರ್ಕಾರಿ ಮಹಿಳಾ ಸಿಬ್ಬಂದಿ ಸೇರಿದಂತೆ 17 ಜನರನ್ನು ಸಿಐಡಿ ಪೊಲೀಸರು ಈ ವರೆಗೆ ಬಂಧಿಸಿದ್ದರು. ಆ ಪೈಕಿ ಏಳು ಅಭ್ಯರ್ಥಿಗಳು ಸಿಐಡಿ ವಶದಲ್ಲಿದ್ದಾರೆ ಎಂದು ಪ್ರಜಾವಾಣಿ ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ: ಹಿಂದಿ ರಾಷ್ಟ್ರೀಯ ಭಾಷೆ ಎಂದ ಅಜಯ್‌ ದೇವಗನ್‌ಗೆ ಕನ್ನಡ ಕಲಾವಿದರ ಖಡಕ್‌ ಪ್ರತಿಕ್ರಿಯೆ  

545 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆ ಕಳೆದ ಅಕ್ಟೋಬರ್‌ನಲ್ಲಿ ನಡೆದಿತ್ತು. ಪರೀಕ್ಷೆಗೆ ರಾಜ್ಯಾದ್ಯಂತ 54,041 ವಿದ್ಯಾರ್ಥಿಗಳು ಹಾಜರಾಗಿದ್ದು, ಜನವರಿಯಲ್ಲಿ ಫಲಿತಾಂಶ ಪ್ರಕಟಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪಿಎಸ್‌ಐ ಹಗರಣದಲ್ಲಿ ಹೊರಬೀಳುತ್ತಿರುವ ವಿವರಗಳು ನಾಡಿನ ನಾಗರಿಕ ಸಮಾಜವನ್ನು ದಿಘ್ಬ್ರಾಂತಗೊಳಿಸಿದೆ. ಇದು ಒಂದು ಪರೀಕ್ಷಾ ಕೇಂದ್ರಕ್ಕೆ ಮಾತ್ರ ಸೀಮಿತವಾದ ವಿಷಯ ಎನ್ನಿಸುವುದಿಲ್ಲ! ಬದಲಿಗೆ, ದೊಡ್ಡ ಮಟ್ಟದ, ಹಿರಿಯ ವಲಯ ಶಾಮೀಲಾಗಿ ಮಾಡಿದ ದುಸ್ಸಾಹಸ ಎನ್ನಿಸುತ್ತದೆ. ಇಂತಹ ಅಭ್ಯರ್ಥಿಗಳಿಂದ ಸಮಾಜ ಏನನ್ನು ನಿರೀಕ್ಷೆ ಮಾಡಬಹುದು? ನಿಜಕ್ಕೂ ದಿಗಿಲಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...