Homeಕರ್ನಾಟಕಕಿಯೋನಿಕ್ಸ್ ಅವ್ಯವಸ್ಥೆಗೆ ಬಿಜೆಪಿ ಕಾರಣ - ಸಚಿವ ಪ್ರಿಯಾಂಕ್ ಖರ್ಗೆ

ಕಿಯೋನಿಕ್ಸ್ ಅವ್ಯವಸ್ಥೆಗೆ ಬಿಜೆಪಿ ಕಾರಣ – ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ದಯೆಯಿಂದ ಕಿಯೋನಿಕ್ಸ್ ಸರಬರಾಜುದಾರರು ದಯಾಮರಣ ಕೋರುವಂತಾಗಿದೆಯೇ ಹೊರತು ನಮ್ಮಿಂದಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬುಧವಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಿಯೋನಿಕ್ಸ್ ಅಧ್ಯಕ್ಷ, ಶಾಸಕ ಶರತ್ ಬಚ್ಚೇಗೌಡ ಅವರೊಂದಿಗೆ ಪ್ರಿಯಾಂಕ್ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದೆಡೆಗಿನ ನಮ್ಮ ಸರ್ಕಾರದ ಕಠಿಣ ನಿಲುವಿಗೆ ಹಾಗೂ ಜನರ ತೆರೆಗೆ ಹಣದ ದುರ್ಬಳಕೆಯನ್ನು ತಡೆಯುವ ನಮ್ಮ ಪ್ರಯತ್ನಕ್ಕೆ ಬಿಜೆಪಿಯವರು ‘ಕಿರುಕುಳ’ ಎಂದು ಹೆಸರು ಕೊಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ. ಪಾರದರ್ಶಕತೆಯು ಭ್ರಷ್ಟರಿಗೆ ಕಿರುಕುಳದಂತೆ ಭಾಸವಾಗುವುದು ಸಹಜವೇ ಆಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಂದು ಕಿಯೋನಿಕ್ಸ್ ಸರಬರಾಜುದಾರರ ಬಿಲ್ ಬಾಕಿ ಉಳಿದಿದೆ ಎಂದರೆ ಅದಕ್ಕೆ ಹಿಂದಿನ ಭ್ರಷ್ಟ ಬಿಜೆಪಿ ಸರ್ಕಾರ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು, ಬೊಮ್ಮಯಿಯವರು ಹಾಗೂ ಮಾಜಿ ಸಚಿವ ಅಶ್ವಥ್ ನಾರಾಯಣ್ ಅವರೇ ನೇರ ಕಾರಣ. ಜನಸಾಮಾನ್ಯರ ಬೆವರಿನ ನೂರಾರು ಕೋಟಿ ತೆರಿಗೆ ಹಣದ ಪ್ರತಿ ರೂಪಾಯಿಗೂ ಸಮರ್ಪಕ ಲೆಕ್ಕ ಇಡುವುದು ನಮ್ಮ ಹೊಣೆ ಮತ್ತು ಅತ್ಯಗತ್ಯದ ಕರ್ತವ್ಯ, ಆ ಕರ್ತವ್ಯವನ್ನು ನಮ್ಮ ಸರ್ಕಾರ ಮಾಡುತ್ತಿದೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

2018-2023ರ ನಡುವೆ ನಡೆದ ವಹಿವಾಟುಗಳು ಮತ್ತು ಸಂಗ್ರಹಣೆಗಳಿಗೆ ಸಂಬಂಧಿಸಿದಂತೆ ಅಕೌಂಟೆಂಟ್ ಜನರಲ್ ಕಚೇರಿಯು ನಡೆಸಿದ ಟೆಸ್ಟ್ ಆಡಿಟ್ ತಪಾಸಣೆ ವರದಿಯಲ್ಲೆ ಭಾರಿ ಮೌಲ್ಯದ ಉಲ್ಲಂಘನೆಗಳು ಬೆಳಕಿಗೆ ಬಂದಿವೆ ಎಂದು ಅವರು ಆರೋಪಿಸಿದ್ದಾರೆ.

ಕಿಯೊನಿಕ್ಸ್‌ ಸಂಸ್ಥೆಯಲ್ಲಿ 2018-2023ರ ನಡುವೆ ನಡೆದ ವಹಿವಾಟುಗಳು ಮತ್ತು ಸಂಗ್ರಹಣೆಗಳಿಗೆ ಸಂಬಂಧಿಸಿದಂತೆ ಅಕೌಂಟೆಂಟ್ ಜನರಲ್ ಕಚೇರಿಯು ನಡೆಸಿದ ವಿವರವಾದ ಆಡಿಟ್ ತಪಾಸಣೆ ವರದಿಯಂತೆ ಭಾರಿ ಮೌಲ್ಯದ ಉಲ್ಲಂಘನೆಗಳು ಬೆಳಕಿಗೆ ಬಂದಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಕಿಯೊನಿಕ್ಸ್‌ ಸಂಸ್ಥೆಯ ಅಧ್ಯಕ್ಷ ಶರತ್‌ ಬಚ್ಚೇಗೌಡ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಿಯೊನಿಕ್ಸ್‌ ಸಂಸ್ಥೆ ಆದೇಶ ನೀಡಿದ್ದ 1544 ಕೋಟಿ ರೂ. ಗಳಿಗೆ ಸಂಬಂಧಿಸಿದಂತೆ ಸುಮಾರು 1200 ಸಂಗ್ರಹಣೆಗಳಲ್ಲಿ ಅಕೌಂಟೆಂಟ್ ಜನರಲ್ ಕಚೇರಿಯು 45 ಸಂಗ್ರಹಣೆಗಳನ್ನು ಪ್ರಾಯೋಗಿಕವಾಗಿ ಆಡಿಟ್‌ ತಪಾಸಣೆಗೆ ಒಳಪಡಿಸಿದ್ದು, 455 ಕೋಟಿ ರೂ. ಮೌಲ್ಯದ ಉಲ್ಲಂಘನೆಗಳು ಕಂಡು ಬಂದಿವೆ ಎಂದು ಅವರು ಹೇಳಿದ್ದಾರೆ.

2018-2023ರ ನಡುವೆ ನಡೆದ ವಹಿವಾಟುಗಳನ್ನು ಸಮಗ್ರ ತನಿಖೆಗೆ ಒಳಪಡಿಸುವ ಸಲುವಾಗಿ ಬೆಂಗಳೂರು ಮೆಟ್ರೋ ರೈಲ್‌ ಕಾರ್ಪೋರೇಷನ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರರಾವ್‌ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರತಿ ರೂಪಾಯಿಯನ್ನೂ ಪ್ರಾಮಾಣಿಕವಾಗಿ ವಿನಿಯೋಗಿಸುತ್ತೇವೆ ಎಂಬ ಭರವಸೆಯಿಂದ ನಾಡಿನ ಜನತೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆಯೇ ಹೊರತು ಬಿಜೆಪಿಯವರ ತಾಳಕ್ಕೆ ತಕ್ಕಂತೆ ಕುಣಿಯುವುದಕ್ಕಲ್ಲ,
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವ್ಯವಹಾರ ನಡೆದಿರುವುದಾಗಿ ಆಡಿಟ್ ಪರಿಶೀಲನೆಯಲ್ಲಿ ಆಕ್ಷೇಪಣೆ ಕಂಡುಬಂದಿರುವುದರಿಂದ ಸಮಗ್ರ ತನಿಖೆಯಾಗಬೇಕಿದೆ. ಕಿಯೋನಿಕ್ಸ್ ವೆಂಡರ್ ಗಳಿಗೆ ಏನಾದರೂ ತೊಂದರೆ ಆಗಿದ್ದರೆ ಅದಕ್ಕೆ ಬಿಜೆಪಿಯ ಭ್ರಷ್ಟಾಚಾರ ಕಾರಣವೇ ಹೊರತು ನಾವಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇದನ್ನೂಓದಿ:  ಲೈಂಗಿಕ ದೌರ್ಜನ್ಯ ಪ್ರಕರಣ | ಆಸಾರಾಮ್‌ ಬಾಪುಗೆ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು

ಲೈಂಗಿಕ ದೌರ್ಜನ್ಯ ಪ್ರಕರಣ | ಆಸಾರಾಮ್‌ ಬಾಪುಗೆ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...