ಚನ್ನರಾಯಪಟ್ಟಣ ಪಿಎಸ್ಐ ಕಿರಣ್ ಕುಮಾರ್‌ ಅಸಹಜ ಸಾವು

ಚನ್ನರಾಯಪಟ್ಟಣದಲ್ಲಿ ಕಳೆದ ಎರಡು ದಿನಗಳಿಂದ 2 ಕೊಲೆ ಸಂಭವಿಸಿದ್ದು, ಬೆಳಗ್ಗೆಯಷ್ಟೇ ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದ ಪಿಎಸ್‌ಐ ನಂತರ ಮನೆಗೆ ತೆರಳಿದ್ದರು ಎನ್ನಲಾಗಿದೆ.

0
37
ಚನ್ನರಾಯಪಟ್ಟಣ ಪಿಎಸ್ಐ ಕಿರಣ್ ಕುಮಾರ್‌ ಅಸಹಜ ಸಾವು
ಫೋಟೋ ಕೃಪೆ: ಇಂಟರ್ನೆಟ್

ಚನ್ನರಾಯಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪಿಎಸ್ಐ ಆಗಿದ್ದ ಕಿರಣ್ ಕುಮಾರ್ ಎಂಬವರು ಅಸಹಜ ಸಾವಿಗೀಡಾಗಿದ್ದಾರೆ.

ಅವರು ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಿರಣ್ ಕುಮಾರ್ ಅವರನ್ನು ನಂತರ ಆಸ್ಪತ್ರಗೆ ಕೊಂಡೊಯ್ಯಲಾಯಿತಾದರೂ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಪಿಎಸ್‌ಐ ಆಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಕಳೆದ ಎರಡು ದಿನಗಳಿಂದ 2 ಕೊಲೆ ಸಂಭವಿಸಿದ್ದು, ಬೆಳಗ್ಗೆಯಷ್ಟೇ ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದ ಪಿಎಸ್‌ಐ ನಂತರ ಮನೆಗೆ ತೆರಳಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ


ಚನ್ನರಾಯಪಟ್ಟಣದಲ್ಲಿ ನಡೆದ ಎರಡು ಕೊಲೆಗಳ ಆರೋಪಿಗಳನ್ನು ಹಿಡಿಯಲು ಜಾಡು ಹಿಡಿದು ಪತ್ತೆಗಾಗಿ ಬಲೆ ಬೀಸಿದ್ದರು ಎನ್ನಲಾಗಿದೆ. ಆದರೆ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದರು. ಕೊಲೆ ನಡೆದ ಹಿನ್ನಲೆಯಲ್ಲಿ ಚನ್ನರಾಯಪಟ್ಟಣಕ್ಕೆ ಐಜಿ ಹಾಗೂ ಎಸ್ಪಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ತಮ್ಮನ್ನು ಸಸ್ಪೆಂಡ್‌ ಮಾಡಬಹುದು ಎಂದು ಅವರು ತೀರಾ ಒತ್ತಡದಲ್ಲಿ ಇದ್ದರು ಎನ್ನಲಾಗಿದೆ.

ಜೀವ ಅಮೂಲ್ಯವಾಗಿದೆ ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಓದಿ: ’ಅವಳನ್ನು ಕಡಿದು ಕೊಲೆ ಮಾಡಬೇಕು ಎಂದು ದ. ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ


 

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here