Homeಚಳವಳಿಮಾನ್ಸೂನ್ ಅಧಿವೇಶನ: ಇಂದಿನಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ಆರಂಭ

ಮಾನ್ಸೂನ್ ಅಧಿವೇಶನ: ಇಂದಿನಿಂದ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ಆರಂಭ

ಕಾಂಗ್ರೆಸ್, ಶಿರೋಮಣಿ ಅಕಾಲಿ ದಳ ಸಂಸದರು ಸಂಸತ್ತಿನ ಆವರಣದಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಕಳೆದ ನವೆಂಬರ್‌ನಿಂದ ಒಕ್ಕೂಟ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು (ಜುಲೈ 22) ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್ ಪ್ರಾರಂಭಿಸಲಿದ್ದಾರೆ. ಮಾನ್ಸೂನ್ ಅಧಿವೇಶನ ನಡೆಯುವ ಪ್ರತಿದಿನ 200 ಜನರ ರೈತರ ಗುಂಪು ಆಂದೋಲನ ನಡೆಸಲಿದೆ ಎಂದು ರೈತ ನಾಯಕರು ಹೇಳಿದ್ದಾರೆ.

ಇಂದಿನಿಂದ (ಜುಲೈ 22) ಆಗಸ್ಟ್ 9 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 5 ರವರೆಗೆ ಜಂತರ್ ಮಂತರ್ ನಲ್ಲಿ ಕಿಸಾನ್ ಸಂಸತ್ ನಡೆಸಲು ದೆಹಲಿ ಸರ್ಕಾರ ಮತ್ತು ಪೊಲೀಸರು ಒಪ್ಪಿಗೆ ನೀಡಿದ್ದಾರೆ. ಇದಕ್ಕಾಗಿ ಕೋವಿಡ್ ಪ್ರೋಟೋಕಾಲ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂಬ ಷರತ್ತು ಹಾಕಲಾಗಿದೆ. ಷರತ್ತುಗಳ ಪ್ರಕಾರ ಪ್ರತಿದಿನ 206 ಜನರಿಗೆ ಮಾತ್ರ ಪ್ರತಿಭಟನೆ ನಡೆಸಲು ಅವಕಾಶವಿದೆ.

ಸಿಂಘು ಗಡಿಯಿಂದ ಜಂತರ್‌ ಮಂತರ್‌ಗೆ ಹೋಗುತ್ತಿದ್ದ ಸುಮಾರು 200 ರೈತರಿದ್ದ ಬಸ್‌ಗಳನ್ನು ಜಿಟಿ ಕರ್ನಾಲ್ ರಸ್ತೆಯಲ್ಲಿ ಪೊಲೀಸರು ತಡೆದಿದ್ದರು. 206 ಜನರಿಗಷ್ಟೇ ಅವಕಾಶ ನೀಡಲಾಗಿದ್ದು, ಉಳಿದವರನ್ನು ಬೇರೆ ಮಾರ್ಗಗಳ ಮೂಲಕ ಹೋಗಲು ತಿಳಿಸಿದ್ದಾರೆ.

ಇದನ್ನೂ ಓದಿ: ನರಗುಂದ ಹೋರಾಟ ಮುಗಿಸಿ ತೆರಳುತ್ತಿದ್ದಾಗ ಅಪಘಾತ: ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ, ರಾಮಣ್ಣ ನಿಧನ

“ಸಂಸತ್ತನ್ನು ಹೇಗೆ ನಡೆಸಬೇಕು ಎಂಬುದನ್ನು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ” ಎಂದು ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಕಿಸಾನ್ ಪಾರ್ಲಿಮೆಂಟ್ ಪ್ರತಿ ದಿನವೂ ನಡೆಯಲಿದೆ. ನಾವು ಒಬ್ಬ ಸ್ಪೀಕರ್ ಮತ್ತು ಉಪ ಸ್ಪೀಕರ್ ಅನ್ನು ಆಯ್ಕೆ ಮಾಡುತ್ತೇವೆ. ಆರಂಭದ ಎರಡು ದಿನ ಎಪಿಎಂಸಿ ಕಾಯ್ದೆಯ ಬಗ್ಗೆ ಚರ್ಚೆಗಳು ನಡೆಯಲಿವೆ. ನಂತರ ಉಳಿದ ಕಾಯ್ದೆಗಳ ಬಗ್ಗೆ ಚರ್ಚಿಸುತ್ತೇವೆ ಎಂದು ರೈತರು ತಿಳಿಸಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ಸಂಸತ್ ಭವನ ಆವರಣದ ಗಾಂಧಿ ಪ್ರತಿಮೆ ಬಳಿ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದರು. ಇಂದು ಸಂಸತ್ತು ಕಾರ್ಯನಿರ್ವಹಿಸಲು ಬಿಡುವುದಿಲ್ಲ ಎಂದು ಪಕ್ಷದ ನಾಯಕ ಮನೀಶ್ ತಿವಾರಿ ಹೇಳಿದ್ದಾರೆ.

ಶಿರೋಮಣಿ ಅಕಾಲಿ ದಳದ ಸಂಸದರು ಸಂಸತ್ತಿನ ಮುಂದೆ ವಿವಾದಿತ ಕೃಷಿ ಕಾನೂನುಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಮುಮದೆ ಭಿತ್ತಿಪತ್ರಗಳನ್ನು ತೋರಿಸಿ ಕಾನೂನುಗಳನ್ನು ಹಿಂಪಡೆಯಲು ಆಗ್ರಹಿಸಿದ್ದಾರೆ.

ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ರೈತ ಪ್ರತಿಭಟನೆಯಲ್ಲಿ ಭಾಗವಹಿಸುವವರು ಗುರುತಿನ ಚೀಟಿಗಳನ್ನು  ಹಾಕಿಕೊಳ್ಳಲಿದ್ದಾರೆ.

ಜಂತರ್‌ ಮಂತರ್ ಹೊರಗೆ ಭಾರಿ ಪೊಲೀಸ್ ಭದ್ರತೆ ವಹಿಸಲಾಗಿದೆ. ಬ್ಯಾರಿಕೇಡ್‌ಗಳ ಜೊತೆಗೆ ನೂರಾರು ಸಂಖ್ಯೆಯಲ್ಲಿ ಪೊಲೀಸರು ಜಮಾಯಿಸಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ ವರ್ಷ ನವೆಂಬರ್‌ನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಸಂಘಟನೆಗಳ ಮುಖಂಡರು ಮತ್ತು ಸರ್ಕಾರದ ನಡುವೆ ಹತ್ತಕ್ಕೂ ಹೆಚ್ಚು ಸುತ್ತಿನ ಚರ್ಚೆಗಳು ನಡೆದಿವೆ, ಆದರೆ ಇಲ್ಲಿಯವರೆಗೂ ಸರ್ಕಾರದ ಯಾವುದೇ ಷರತ್ತುಗಳಿಗೂ ರೈತರು ಒಪ್ಪಿಲ್ಲ. ಇಂದಿನಿಂದ ಆಗಸ್ಟ್  9 ರವರೆಗೆ ಜಂತರ್ ಮಂತರ್‌ನಲ್ಲಿ ಕಿಸಾನ್ ಸಂಸತ್‌ ನಡೆಸಲು ರೈತರು ನಿರ್ಧರಿಸಿದ್ದಾರೆ.


ಇದನ್ನೂ ಓದಿ: ಹುತಾತ್ಮರ ದಿನಾಚರಣೆ: ಬಂಡಾಯದ ನೆಲ ನರಗುಂದದಲ್ಲಿ ಹೋರಾಟದ ಕಿಚ್ಚು ಹೆಚ್ಚಿಸಿದ ರೈತರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಭಾಷಣ: ಮೋದಿಗೆ ಕಳುಹಿಸುವ ಬದಲು ‘ಜೆ.ಪಿ.ನಡ್ಡಾ’ಗೆ ನೊಟೀಸ್‌ ನೀಡಿದ ಚುನಾವಣಾ ಆಯೋಗ!

0
ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ದೂರುಗಳ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ನೋಟಿಸ್ ನೀಡಿದೆ. ಆದರೆ, ಈ ನೊಟೀಸ್‌ನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕಳುಹಿಸಲಾಗಿದ್ದು,...