Homeಮುಖಪುಟಇಮ್ತಿಯಾಜ್ ಅಲಿ ವೆಬ್‍ಸರಣಿಯಲ್ಲಿ ಕಿಶೋರ್ ಖಳ ನಾಯಕ್

ಇಮ್ತಿಯಾಜ್ ಅಲಿ ವೆಬ್‍ಸರಣಿಯಲ್ಲಿ ಕಿಶೋರ್ ಖಳ ನಾಯಕ್

- Advertisement -
- Advertisement -

ಜಬ್ ವಿ ಮೆಟ್ ಖ್ಯಾತಿಯ ಇಮ್ತಿಯಾಜ್ ಅಲಿ, ಭಿನ್ನ ಕಥೆಗಳನ್ನು ಬಾಲಿವುಡ್‍ಗೆ ಪರಿಚಯಿಸಿದ ನಿರ್ದೇಶಕ. ಕಳೆದ ಫೆಬ್ರವರಿಯಲ್ಲಿ ಪ್ರೇಮಕಥೆಯೊಂದನ್ನು ತೆರೆಗೆ ತಂದ ಅಲಿ, ಲಾಕ್‍ಡೌನ್ ಇಡೀ ಬಾಲಿವುಡ್‍ಅನ್ನು ಕಟ್ಟಿ ಹಾಕುವುದರೊಳಗೆ ಏಳು ಕಂತುಗಳ ವೆಬ್ ಸರಣಿಯೊಂದನ್ನು ನೆಟ್‍ಫ್ಲಿಕ್ಸ್‍ನಲ್ಲಿ ಬಿಡುಗಡೆ ಮಾಡಿದ್ದಾರೆ.

ಇದರಲ್ಲಿ ಕನ್ನಡ ಜನಪ್ರಿಯ ನಟ ಕಿಶೋರ್ ನಟಿಸಿದ್ದಾರೆ. ‘ಶೀ’ ಹೆಸರಿನ ಈ ಸರಣಿ ಸಾಮಾನ್ಯ ಪೇದೆಯೊಬ್ಬಳ ಸುತ್ತ ಹೆಣೆದ ಕತೆ. ಪೊಲೀಸ್ ಇಲಾಖೆಯ ತನಿಖಾ ದಳದಲ್ಲಿ ಉಗ್ರನೊಬ್ಬನನ್ನು ಬಲೆಗೆ ಬೀಳಿಸಲು ಹೆಣೆಯುವ ಬಲೆಯಲ್ಲಿ ಪೇದೆ ಒಂದುಮುಖ್ಯ ದಾಳ. ಹಾಗೆ ಬಲೆ ಬೀಳಬೇಕಾಗಿರುವ ಉಗ್ರನ ಹೆಸರು `ನಾಯಕ್’. ಈ ನಾಯಕ್ ಪಾತ್ರದಲ್ಲಿಯೇ ಕನ್ನಡದ ಜನಪ್ರಿಯ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ. ಸರಣಿಯ ಆರಂಭದ ಕಂತುಗಳಿಂದಲೂ ನಾಯಕ್ ಹೆಸರು ಕೇಳಿಬರುತ್ತದೆಯಾದರೂ ಕಾಣಿಸಿಕೊಳ್ಳುವುದು ಕಡೆಯ ಎರಡು ಕಂತುಗಳಲ್ಲಿ. ಮುಂಬೈ ನಗರದಲ್ಲಿ ದಾಳಿ ನಡೆಸಲು ಸಂಚು ರೂಪಿಸುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ಜಮೀನ್‍ದಾರಿ ವಂಶದ ಹಿನ್ನೆಲೆಯ ನಾಯಕ್ ಅಲಿಯಾಸ್ ನಾಯಕಡು, ಪ್ರೀತಿಗೆ ಹಾತೊರೆಯುವ, ಹೆಚ್ಚು ಯಾರೊಂದಿಗೂ ಮಾತನಾಡದ, ಹೆಣ್ಣಿನೊಂದಿಗೆ ಸಭ್ಯವಾಗಿ ವ್ಯವಹರಿಸುವ ವ್ಯಕ್ತಿ. ಈತನಿಂದ ಮಾಹಿತಿ ಕಲೆಹಾಕಲು ಬರುವ ಪೇದೆ, ಕಡೆಗೆ ಆತನೊಂದಿಗೆ ಸ್ನೇಹ ಬೆಸೆದುಕೊಳ್ಳುವ ಮೂಲಕ ಸರಣಿ ಕೊನೆಯಾಗುತ್ತದೆ. ಇನ್ನೊಂದು ಸೀಸನ್ ಸುಳಿವು ನೀಡಿರುವ ಈ ಸರಣಿಯಲ್ಲಿ ಕಿಶೋರ್ ಕಾಣಿಸಿಕೊಂಡಿರುವ ರೀತಿಯೇ ವಿಶೇಷ. ಯಾವುದೇ ಅಬ್ಬರವಿಲ್ಲದ, ಆಕ್ಷನ್‍ಗಳಿಲ್ಲದ ತಣ್ಣನೆಯ ವ್ಯಕ್ತಿಯಾಗಿ ನಟಿಸಿದ್ದಾರೆ. ಹೆಚ್ಚು ಡೈಲಾಗ್‍ಗಳಿಲ್ಲದ ಪಾತ್ರ. ನೋಟದಲ್ಲೇ ಭಾವಗಳನ್ನು ಅಭಿವ್ಯಕ್ತಿಸುವ ಪಾತ್ರ. ಹಾಗೆ ನೋಡಿದರೆ `ಶೀ’ ಅಲಿಯವರ ಸಮರ್ಥ ಪ್ರಯೋಗವೇನಲ್ಲ. ಆದರೆ ಪೇದೆ ಪಾತ್ರದಲ್ಲಿ ಕಾಣಿಸಿಕೊಂಡ ಅದಿತಿ ಪೋಹನ್‍ಕರ್, ಸಸ್ಯ ಆಗಿ ಕಾಣಿಸಿಕೊಂಡ ವಿಜಯ್ ಶರ್ಮಾ ಮತ್ತು ಕಿಶೋರ್ ಆಕರ್ಷಿಸುತ್ತಾರೆ.

ವಿಭಿನ್ನ ಪಾತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿರುವ ಕಿಶೋರ್ ದಕ್ಷಿಣ ಭಾರತದ ಬಹುಬೇಡಿಕೆಯ ನಟ. ನಟರಾಗಿ ತಮ್ಮನ್ನು ಪ್ರಯೋಗಕ್ಕೆ ಒಡ್ಡಿಕೊಳ್ಳುತ್ತಲೇ ಬಂದಿರುವ ಇವರು, ಹೊಸ ವೀಕ್ಷಕ ವರ್ಗವನ್ನು ಸೆಳೆಯುತ್ತಿದ್ದಾರೆ. ಈ ಹಿಂದೆ ಎರಡು ವೆಬ್‍ಸರಣಿಯಲ್ಲಿ ಕಿಶೋರ್ ನಟಿಸಿ ಗಮನಸೆಳೆದಿದ್ದರು. ಝೀ5 ನೆಟ್‍ವರ್ಕ್ ನಿರ್ಮಿಸಿದ ಪುಷ್ಪಾ ಇಗ್ನೇಶಿಯಸ್ ನಿರ್ದೇಶನದ ‘ಹೈ ಪ್ರೀಸ್ಟ್’ ಮತ್ತು ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆಯಾದ ರಾಜ್ ನಿಡಿಮೋರು ಮತ್ತು ಕೃಷ್ಣ ನಿರ್ದೇಶನದ ‘ದಿ ಫ್ಯಾಮಿಲಿ ಮ್ಯಾನ್’ ನಲ್ಲಿ ತನಿಖಾಧಿಕಾರಿಯಾಗಿ ನಟಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...