Homeಮುಖಪುಟಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು 'ದೇಶದ್ರೋಹಿ' ಎಂದ...

ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದ ರಾಮಭದ್ರಾಚಾರ್ಯ

- Advertisement -
- Advertisement -

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಹಿಂದೂ ಆಧ್ಯಾತ್ಮಿಕ ನಾಯಕ ಎಂದು ಹೇಳಲಾಗುವ ಜಗದ್ಗುರು ರಾಮಭದ್ರಾಚಾರ್ಯ ಟೀಕಿಸಿದ್ದಾರೆ.

ನಾಗ್ಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಭದ್ರಾಚಾರ್ಯ, ಕೆಕೆಆರ್‌ ತಂಡದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ರಾಮಭದ್ರಾಚಾರ್ಯ, ಈ ಕ್ರಮವನ್ನು ತುಂಬಾ ದುರದೃಷ್ಟಕರ ಎಂದು ಕರೆದಿದ್ದಾರೆ. ಶಾರುಖ್ ಖಾನ್ ಅವರ ದೃಷ್ಟಿಕೋನವು ಯಾವಾಗಲೂ ದೇಶದ್ರೋಹಿಯಂತೆ ಇದೆ ಎಂದು ಆರೋಪಿಸಿದರು.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ವರದಿಯಾದ ದಾಳಿಗಳನ್ನು ಉಲ್ಲೇಖಿಸಿ, ಭಾರತ ಸರ್ಕಾರವು ಇಂತಹ ಘಟನೆಗಳನ್ನು ಸಹಿಸಬಾರದು. ನೆರೆಯ ದೇಶದಲ್ಲಿ ವಾಸಿಸುವ ಹಿಂದೂಗಳನ್ನು ರಕ್ಷಿಸಲು ದೃಢ ಮತ್ತು ಆಕ್ರಮಣಕಾರಿ ನಿಲುವನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಪ್ರಚೋಧನಾತ್ಮಕ ಹೇಳಿಕೆ ನೀಡಿದ್ದಾರೆ.

ದೇಶ ರಚನೆಯಲ್ಲಿ ಹಿಂದೂಗಳು ವಹಿಸಿದ ಪಾತ್ರವನ್ನು ಬಾಂಗ್ಲಾದೇಶಕ್ಕೆ ನೆನಪಿಸಬೇಕು, ದೇಶದ ಕೊಡುಗೆಯನ್ನು ಮರೆಯಬಾರದು ಎಂದು ಪ್ರತಿಪಾದಿಸಿದರು.

ಅವರ ಹೇಳಿಕೆಗಳು ರಾಜಕೀಯ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಶಾರುಖ್ ಖಾನ್ ವಿರುದ್ಧ ಬಳಸಿದ ದೇಶದ್ರೋಹಿ ಪದಕ್ಕೆ ಕಾಂಗ್ರೆಸ್ ಸಂಸದ ಮಾಣಿಕಮ್ ಟ್ಯಾಗೋರ್ ತೀವ್ರವಾಗಿ ಖಂಡಿಸಿದರು. ಇದು ಭಾರತದ ಬಹುತ್ವದ ಮೇಲಿನ ದಾಳಿ ಎಂದು ಕರೆದರು. ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವಿರುಧುನಗರ ಸಂಸದ, ದ್ವೇಷವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಸಾಧ್ಯವಿಲ್ಲ. ಆರ್‌ಎಸ್‌ಎಸ್‌ ಸಮಾಜವನ್ನು ವಿಷಪೂರಿತಗೊಳಿಸುತ್ತಿದೆ ಎಂದು ಆರೋಪಿಸಿದರು.

ಮುಸ್ತಾಫಿಜುರ್ ರೆಹಮಾನ್ ಅವರ ಜೊತೆಗಿನ ಒಪ್ಪಂದವು ಕೆಲವು ಹಿಂದೂ ಧಾರ್ಮಿಕ ಮುಖಂಡರು ಮತ್ತು ಬಿಜೆಪಿ ವ್ಯಕ್ತಿಗಳಿಂದ ಟೀಕೆಗೆ ಗುರಿಯಾಗಿದೆ. ಬಿಜೆಪಿ ನಾಯಕ ಸಂಗೀತ್ ಸೋಮ್ ಶಾರುಖ್ ಖಾನ್ ಅವರನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ಬಾಂಗ್ಲಾದೇಶದ ಆಟಗಾರರಲ್ಲಿ ಹೂಡಿಕೆ ಮಾಡುವುದು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಹೇಳಿಕೊಂಡರು, ದೇಶದಲ್ಲಿ ಹಿಂದೂಗಳ ಕಿರುಕುಳವನ್ನು ಆರೋಪಿಸಿದ್ದಾರೆ.

ಅಬುಧಾಬಿಯಲ್ಲಿ ನಡೆದ 2026 ರ ಐಪಿಎಲ್ ಮಿನಿ ಹರಾಜಿನಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಸ್ತಾಫಿಜುರ್ ರೆಹಮಾನ್ ಅವರನ್ನು ₹9.2 ಕೋಟಿಗೆ ಖರೀದಿಸಿತು. 30 ವರ್ಷದ ಎಡಗೈ ವೇಗಿ 2016 ರಲ್ಲಿ ಪಾದಾರ್ಪಣೆ ಮಾಡಿದ ನಂತರ 60 ಐಪಿಎಲ್ ಪಂದ್ಯಗಳಲ್ಲಿ 65 ವಿಕೆಟ್‌ಗಳನ್ನು ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...

ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ 'ಮಿಯಾ ಮತದಾರರ' ಹೆಸರುಗಳನ್ನು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ...

ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸೇರಿ ಐದು ಮಂದಿ ಸಾವು

ಪುಣೆ ಜಿಲ್ಲೆಯ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ...

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...