Homeಕರ್ನಾಟಕಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ: ತಜ್ಞರು ಹೇಳುವುದೇನು?

ಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ: ತಜ್ಞರು ಹೇಳುವುದೇನು?

- Advertisement -
- Advertisement -

“ಅಮುಲ್‌ ಈಗ ಗುಜರಾತ್ ಸಹಕಾರಿ ಸಂಸ್ಥೆಯಾಗಿ ಉಳಿದಿಲ್ಲ. ಅಂತಹ ಸಂಸ್ಥೆಯೊಂದಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದರ ಒಕ್ಕೂಟ (ಕೆಎಂಎಫ್) ವಿಲೀನಗೊಳಿಸುವುದು ಒಕ್ಕೂಟ ವ್ಯವಸ್ಥೆಗೆ ಮಾರಕ. ಅಮುಲ್‌ನಿಂದ ಕೆಎಂಎಫ್‌ ಕಲಿಯುವಂತದ್ದು ಏನೂ ಇಲ್ಲ” ಎನ್ನುತ್ತಾರೆ ಐಐಎಂಬಿ ಪ್ರೊಫೆಸರ್ ಎಂ.ಎಸ್.ಶ್ರೀರಾಮ್.

ʼನಂದಿನಿʼ ಹಾಲು ಉತ್ಪನ್ನಗಳ ಹೆಸರಾದ ಕೆಎಂಎಫ್‌ಅನ್ನು ಗುಜರಾತಿನ ʼಅಮುಲ್‌ʼ ಬ್ರಾಂಡಿನ ಹಾಲು ಉತ್ಪಾದಕ ಸಂಸ್ಥೆಯಾದ ಗುಜರಾತ್‌ ಸಹಕಾರ ಹಾಲು ಮಾರಾಟ ಒಕ್ಕೂಟ(ಜಿಸಿಎಂಎಂಎಫ್)ದೊಂದಿಗೆ ವಿಲೀನಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾಡಿರುವುದಕ್ಕೆ ವಿರೋಧಗಳು ವ್ಯಕ್ತವಾಗುತ್ತಿವೆ.

ಕಳೆದ ಅಕ್ಟೋಬರ್‌ 9ರಂದು ಅಸ್ಸಾಂನ ಗುವಾಹಟಿಯಲ್ಲಿ ಈಶಾನ್ಯ ರಾಜ್ಯಗಳ ಕೌನ್ಸಿಲ್‌ ಸಭೆಯಲ್ಲಿ ಅಮಿತ್‌ ಶಾ ಅವರು ಮೊದಲ ಬಾರಿಗೆ ಈ ಕುರಿತು ಮಾತನಾಡಿದ್ದರು. “ದೇಶದ ನೈಸರ್ಗಿಕ ಉತ್ಪನ್ನಗಳಿಗೆ ವಿದೇಶಗಳಲ್ಲಿ ಮಾನ್ಯತೆ ಪಡೆಯಲು ಕೆಎಂಎಫ್‌ ಸೇರಿದಂತೆ ದೇಶದ ಪ್ರಮುಖ ಐದು ಸಹಕಾರ ಹಾಲು ಒಕ್ಕೂಟಗಳನ್ನು ವಿಲೀನಗೊಳಿಸಿ ರಾಷ್ಟ್ರಮಟ್ಟದಲ್ಲಿ ಬಹುರಾಜ್ಯ ಸಹಕಾರ ಒಕ್ಕೂಟ ರಚಿಸಲು ಉದ್ದೇಶಿಸಲಾಗಿದೆ” ಎಂದಿದ್ದರು.

ಇತ್ತೀಚೆಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದ ಮೆಗಾ ಡೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅಮಿತ್‌ ಶಾ, “ಗುಜರಾತಿನ ಅಮುಲ್‌ ಸಹಕಾರ ಒಕ್ಕೂಟ ಪ್ರಗತಿಯ ಹಾದಿಯಲ್ಲಿದೆ. ಕರ್ನಾಟಕದ ನಂದಿನಿಯ ಕೆಎಂಎಫ್‌ ಕೂಡ ಅಭಿವೃದ್ಧಿ ಹೊಂದುತ್ತಿದೆ. ಅಮುಲ್‌ ಮತ್ತು ನಂದಿನಿ ಒಂದಾದರೆ ಕರ್ನಾಟಕದ ಹಾಲು ಉತ್ಪಾದಕರಿಗೆ ಇನ್ನಷ್ಟು ಅನುಕೂಲವಾಗಲಿದೆ. ಆ ಹಿನ್ನೆಲೆಯಲ್ಲಿ ಅಮುಲ್‌ ಜೊತೆ ನಂದಿನಿಯನ್ನು ವಿಲೀನ ಮಾಡಲು ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ಷೇಪಗಳು ವ್ಯಕ್ತವಾಗುತ್ತಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪ್ರೊ.ಎಂ.ಎಸ್.ಶ್ರೀರಾಮ್‌, “ಅಮುಲ್‌ ನಂತರದಲ್ಲಿ ನಂದಿನಿ ಅತಿದೊಡ್ಡ ಬ್ರಾಂಡ್ ಆಗಿ ಬೆಳೆದಿದೆ. ಎರಡು ಸೇರಿದರೆ ಮಾರ್ಕೆಟ್ ಶೇರ್‌ ಹೆಚ್ಚುತ್ತದೆ ಎಂಬುದು ನಿಜ. ಆದರೆ ವಿಲೀನ ಮಾಡುವುದು ಸರಿಯಲ್ಲ. ‘ಸಹಕಾರ’ ಎಂಬುವುದು ಸ್ಥಳೀಯರಿಗೆ ಸಂಬಂಧ ಪಟ್ಟ ಸಂಸ್ಥೆ. ಅದು ವಿಲೀನವಾಗುತ್ತಾ ಹೋದಷ್ಟು ಸ್ಥಳೀಯರಿಂದ ದೂರವಾಗುತ್ತದೆ. ಕೆಎಂಎಫ್‌ಗಿಂತ ದೊಡ್ಡದಾದ ಅಮುಲ್‌ ಜೊತೆ ಸೇರಿಕೊಂಡರೆ, ಅಮುಲ್‌ ಹೇಳಿದಂತೆ ಕೇಳಿಕೊಂಡು ಇರಬೇಕಾಗುತ್ತದೆ” ಎಂದು ಎಚ್ಚರಿಸಿದರು.

“ದೊಡ್ಡವರ ಬಳಿ ಚಿಕ್ಕವರು ಸೇರಿಕೊಂಡರೆ ದೊಡ್ಡವರ ಮಾತೇ ಹೆಚ್ಚು ನಡೆಯುತ್ತದೆ. ಕಿರಾಣಿ ಅಂಗಣಿ ಚೆನ್ನಾಗಿಯೇ ನಡೆಯುತ್ತಿರುವಾಗ, ಸೂಪರ್‌ ಮಾರ್ಕೆಟ್‌ನಲ್ಲಿ ಹೋಗಿ ಸಿಕ್ಕಿಕೊಳ್ಳುವ ಅಗತ್ಯವಿಲ್ಲ. ಅಮುಲ್‌ನಿಂದ ನಂದಿನಿ ಕಲಿಯಬೇಕಾದ ಯಾವುದೇ ಪಾಠವಿಲ್ಲ. ಮೊದಲೆಲ್ಲ ಅಮುಲ್ ರಾಜಕೀಯದಿಂದ ಸ್ವಲ್ಪ ದೂರವಿತ್ತು. ಆದರೀಗ ಸಂಪೂರ್ಣವಾಗಿ ರಾಜಕೀಯ ನಡೆಯುತ್ತಿದೆ. ಕೆಎಂಎಫ್‌ನಲ್ಲಿ ಮೊದಲಿನಿಂದಲೂ ರಾಜಕೀಯವಿತ್ತು. ಆದರೆ ಅಮುಲ್‌ನಿಂದ ಇವರು ಕಲಿಯುವಂತಹದ್ದು ಏನೂ ಇಲ್ಲ” ಎಂದರು.

“ಅಮುಲ್ ಈಗ ಸಹಕಾರಿ ಸಂಸ್ಥೆಯಾಗಿ ಉಳಿದಿಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಘಟಕಗಳನ್ನು ತೆರೆದು ವ್ಯವಹರಿಸುತ್ತಿದೆ. ಯುಪಿ, ಹರಿಯಾಣ, ಪಂಜಾಬ್, ಬಿಹಾರದಲ್ಲಿ ಅಮುಲ್‌ ಘಟಕಗಳನ್ನು ತೆರೆಯಲಾಗಿದೆ. ಅದೀಗ ಅಮುಲ್‌ ಗುಜರಾತಿನ ಸಂಸ್ಥೆಯಾಗಿ ಉಳಿದಿಲ್ಲ. ಗುಜರಾತ್‌ ರೈತರಿಂದ ಮಾತ್ರ ಹಾಲು ಖರೀದಿಸುವಂತಿದ್ದರೆ ಅದು ಗುಜರಾತ್ ಸಂಸ್ಥೆಯಾಗಿ ಉಳಿಯುತ್ತಿತ್ತು. ಮಾರಾಟ ಎಲ್ಲಿ ಬೇಕಾದರೂ ಮಾಡಬಹುದು, ಆದರೆ ಎಲ್ಲಿಂದ ಹಾಲನ್ನು ಖರೀದಿಸುತ್ತೀರಿ ಎಂಬುದು ಮುಖ್ಯವಾಗುತ್ತದೆ” ಎಂದು ಹೇಳಿದರು.

“ಸರ್ಕಾರ ಕೈಗೊಳ್ಳುತ್ತಿರುವ ಎಲ್ಲಾ ಕಾರ್ಯಕ್ರಮಗಳು ಕೇಂದ್ರೀಕರಣಕ್ಕೆ ಒತ್ತು ನೀಡುತ್ತಿವೆ. ಇದು ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ” ಎಂದು ಅಭಿಪ್ರಾಯಪಟ್ಟರು.

ಚಿಂತಕರಾದ ಶಿವಸಂದರ್‌ ಅವರು ಪ್ರತಿಕ್ರಿಯಿಸಿ, “ಸಹಕಾರಿ ಹಾಲು ಉತ್ಪನ್ನಗಳ ಮಾರುಕಟ್ಟೆ ದೊಡ್ಡ ಮಟ್ಟದಲ್ಲಿದೆ. ಸಹಕಾರಿ ಕ್ಷೇತ್ರವನ್ನು ಕಾರ್ಪೊರೇಟೀಕರಣ ಮಾಡಲು ಇಟ್ಟಿರುವ ಮೊದಲ ಹೆಜ್ಜೆ ಇದು. ಗುಜರಾತ್‌ ಬಿಟ್ಟರೆ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸಹಕಾರಿ ಹಾಲು ಒಕ್ಕೂಟ ಬಲವಾಗಿದೆ. ಹೀಗಾಗಿ ಕಾರ್ಪೊರೇಟ್ ಶಕ್ತಿಗಳ ಕಣ್ಣು ಬಿದ್ದಿದೆ” ಎಂದರು.

ಇದನ್ನೂ ಓದಿರಿ: ಗೋವು ಸಾಕಣೆಯ ಗೋಳು ಕೇಳುವವರ್‍ಯಾರು? ಇದು ಹೈನುಗಾರಿಕೆಯ ಕಥೆ-ವ್ಯಥೆ!

ಅಮಿತ್‌ ಶಾ ಅವರ ಈ ಹೇಳಿಕೆಗೆ ಹಾಲು ಉತ್ಪಾದಕರು, ಮಾರಾಟಗಾರರು ಮತ್ತು ಕನ್ನಡಪರ ಸಂಘಸಂಸ್ಥೆಗಳಿಂದಲೂ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಲಾಭದಲ್ಲಿರುವ ಮತ್ತು ಅದಕ್ಕಿಂತ ಮುಖ್ಯವಾಗಿ ಗುಣಮಟ್ಟಕ್ಕೆ ಹೆಸರಾಗಿರುವ ನಂದಿನಿ ಬ್ರಾಂಡಿನ ಕೆಎಂಎಫ್‌ ಒಕ್ಕೂಟವನ್ನು ಯಾವ ಕಾರಣಕ್ಕೂ ಗುಜರಾತ್‌ನ ಅಮುಲ್‌ ಬ್ರಾಂಡಿನೊಂದಿಗೆ ವಿಲೀನ ಮಾಡಬಾರದು.

ದೇಶದ ರೈಲ್ವೆ, ವಿಮಾನ, ಹೆದ್ದಾರಿಗಳು, ಟೆಲಿಕಾಂ ವಲಯ ಸೇರಿದಂತೆ ಪ್ರತಿ ವಲಯದಲ್ಲಿ ಗುಜರಾತಿನ ಅಂಬಾನಿ ಮತ್ತು ಅದಾನಿ ಕಂಪನಿಗಳ ಏಕಸ್ವಾಮ್ಯಕ್ಕೆ ಅವಕಾಶ ಮಾಡಿಕೊಟ್ಟು, ಇಡೀ ದೇಶವನ್ನು ಗುಜರಾತಿನ ವಸಾಹತು ಮಾಡಿರುವವರು, ಇದೀಗ ಸಹಕಾರ ವಲಯವನ್ನೂ ಗುಜರಾತಿನ ಕೈವಶ ಮಾಡಲು ಹೊರಟಿದ್ದಾರೆ. ಕನ್ನಡಿಗರ ದಶಕಗಳ ಬದ್ಧತೆ ಮತ್ತು ಕಾಳಜಿಯಿಂದ ಕಟ್ಟಿದ ಕೆಎಂಎಫ್‌ ಲಾಭದಲ್ಲಿರುವಾಗಲೇ ಅದನ್ನು ವಶಪಡಿಸಿಕೊಳ್ಳುವ ಗುಜರಾತಿ ಹುನ್ನಾರ ಇದು ಎಂದು ಆಕ್ರೋಶ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...