Homeಕರ್ನಾಟಕವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರು ಉನ್ನತಾಧಿಕಾರಿಗಳ ವಿರುದ್ದ ಎಫ್‌ಐಆರ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರು ಉನ್ನತಾಧಿಕಾರಿಗಳ ವಿರುದ್ದ ಎಫ್‌ಐಆರ್

- Advertisement -
- Advertisement -

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರನ್ (48) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮೂವರು ಉನ್ನತಾಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ (ಮೇ 27) ಸಂಜೆ ಡೆತ್‌ನೋಟ್ ಬರೆದಿಟ್ಟು ಚಂದ್ರಶೇಖರನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್‌ ನೋಟ್‌ನಲ್ಲಿ ತಮ್ಮ ಸಾವಿಗೆ ಕಾರಣ ತಿಳಿಸಿ ಮೂವರು ಉನ್ನತ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದರು. ಈ ಆಧಾರದ ಮೇಲೆ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

“ಮೂವರು ಅಧಿಕಾರಿಗಳು ವಿವಿಧ ಠೇವಣಿಗಳ ಮೂಲಕ ವೈಯಕ್ತಿಕ ಲಾಭಕ್ಕಾಗಿ ಸುಮಾರು 87 ಕೋಟಿ ರೂಪಾಯಿ ದುರುಪಯೋಗ ಪಡಿಸಿಕೊಂಡಿದ್ದು, ಮಾತ್ರವಲ್ಲದೇ ತನಗೆ ಕಿರುಕುಳ ನೀಡಿದ್ದಾರೆ. ನಿಗಮದ ಪ್ರಾಥಮಿಕ ಖಾತೆಯಿಂದ ಲೆಕ್ಕಕ್ಕೆ ಸಿಗದ ಹಣವನ್ನು ಬೇರೆಡೆಗೆ ತಿರುಗಿಸಲು ಸಮಾನಾಂತರ ಬ್ಯಾಂಕ್ ಖಾತೆ ತೆರೆಯುವಂತೆ ಹಿರಿಯ ಅಧಿಕಾರಿಗಳು ಒತ್ತಾಯಿಸಿದ್ದಾರೆ” ಎಂದು ಚಂದ್ರಶೇಖರನ್ ತನ್ನ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವುದಾಗಿ ವರದಿಯಾಗಿದೆ.

“ಚಂದ್ರಶೇಖರನ್ ಆತ್ಮಹತ್ಯೆ ಸಂಬಂಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಮೊದಲು ಅಸಹಜ ಸಾವಿನ ಪ್ರಕರಣ ದಾಖಲಾಗಿತ್ತು. ನಂತರ ಡೆತ್ ನೋಟ್ ಪತ್ತೆಯಾದ ಹಿನ್ನೆಲೆ ಮೂವರು ಸರ್ಕಾರಿ ಅಧಿಕಾರಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ” ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಆರೋಪಿಗಳು ನಾಪತ್ತೆ

ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿಗಳಾದ ಸರ್ಕಾರಿ ನೌಕರರು ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವರ ಸ್ಪಷ್ಟನೆ ಏನು?

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ, “ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು, ಕೆಎಂವಿಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್ ಮತ್ತು ಬ್ಯಾಂಕ್ ವ್ಯವಸ್ಥಾಪಕಿ ಸುಚಿಸ್ಮಿತಾ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಮತ್ತು ಅವರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ನಾವು ಬಿಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಚಂದ್ರಶೇಖರನ್ ನಿವಾಸಕ್ಕೆ ಸಿಐಡಿ ತಂಡ ಭೇಟಿ

ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಚಂದ್ರಶೇಖರನ್ ನಿವಾಸಕ್ಕೆ ಡಿವೈಎಸ್‌ಪಿ ರಫೀಕ್ ನೇತೃತ್ವದ ಸಿಐಡಿ ಅಧಿಕಾರಿಗಳ ತಂಡ ಮಂಗಳವಾರ ಸಂಜೆ ಭೇಟಿ ನೀಡಿದೆ. ಚಂದ್ರಶೇಖರನ್ ಪತ್ನಿ ಕವಿತಾ ಅವರೊಂದಿಗೆ ಸುಮಾರು 45 ನಿಮಿಷಗಳ ಕಾಲ ಚರ್ಚಿಸಿದ ಅಧಿಕಾರಿಗಳು, ಚಂದ್ರಶೇಖರನ್ ಸಾವಿನ ಕುರಿತು ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಮುರುಘಾಶ್ರೀ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತೆಗೆ ಕಿರುಕುಳ: ಚಿಕ್ಕಪ್ಪನ ವಿರುದ್ಧ ಎಫ್‌ಐಆರ್ 

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777 ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...