Homeಕರ್ನಾಟಕವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

- Advertisement -
- Advertisement -

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಮತ್ತು ಹಣಕಾಸಿನ ಅವ್ಯವಹಾರಗಳ ಬಗ್ಗೆ ತನಿಖೆಗೆ ಐಪಿಎಸ್‌ ಅಧಿಕಾರಿ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿ ಆದೇಶವನ್ನು ನೀಡಿದೆ.

ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ  ಸಂಜೆ ಡೆತ್‌ನೋಟ್ ಬರೆದಿಟ್ಟು ಚಂದ್ರಶೇಖರನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್‌ ನೋಟ್‌ನಲ್ಲಿ ತಮ್ಮ ಸಾವಿಗೆ ಕಾರಣ ತಿಳಿಸಿ ಮೂವರು ಉನ್ನತ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದರು. ಈ ಆಧಾರದ ಮೇಲೆ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

ಮೂವರು ಅಧಿಕಾರಿಗಳು ವಿವಿಧ ಠೇವಣಿಗಳ ಮೂಲಕ ವೈಯಕ್ತಿಕ ಲಾಭಕ್ಕಾಗಿ ಸುಮಾರು 87 ಕೋಟಿ ರೂಪಾಯಿ ದುರುಪಯೋಗ ಪಡಿಸಿಕೊಂಡಿದ್ದು, ಮಾತ್ರವಲ್ಲದೇ ತನಗೆ ಕಿರುಕುಳ ನೀಡಿದ್ದಾರೆ. ನಿಗಮದ ಪ್ರಾಥಮಿಕ ಖಾತೆಯಿಂದ ಲೆಕ್ಕಕ್ಕೆ ಸಿಗದ ಹಣವನ್ನು ಬೇರೆಡೆಗೆ ತಿರುಗಿಸಲು ಸಮಾನಾಂತರ ಬ್ಯಾಂಕ್ ಖಾತೆ ತೆರೆಯುವಂತೆ ಹಿರಿಯ ಅಧಿಕಾರಿಗಳು ಒತ್ತಾಯಿಸಿದ್ದಾರೆ ಎಂದು ಚಂದ್ರಶೇಖರನ್ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣವರ, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮತಾ ರವುಲ್‌ ನನ್ನ ಸಾವಿಗೆ ಕಾರಣ ಎಂದು ಅವರು ಡೆತ್‌ ನೋಟ್‌ನಲ್ಲಿ ಬರೆದಿದ್ದರು. ಮಾನ್ಯ ಸಚಿವರು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಹಣ ವರ್ಗಾಯಿಸಲು ಲೆಕ್ಕಾಧಿಕಾರಿ ಹೇಳಿದ ಹಿನ್ನೆಲೆಯಲ್ಲಿ ನಿಗಮದ 87 ಕೋಟಿ ಅನುದಾನವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರು ಒತ್ತಾಯಪೂರ್ವಕ ಅನುದಾನ ವರ್ಗಾಯಿಸುತ್ತಿದ್ದರು. ನಮಗೆ ಅವರ ಒಳಸಂಚು ಅರ್ಥವೇ ಆಗಿಲ್ಲ. ಬ್ಯಾಂಕ್‌ನವರು ಚೆಕ್‌ ಬುಕ್‌ ಮತ್ತು ಪಾಸ್ ಬುಕ್‌ ಈವರೆಗೂ ನೀಡಿಲ್ಲ. 87 ಕೋಟಿ ಅವ್ಯವಹಾರ ಆಗಿದೆ. ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿದ್ದಾರೆ. ನಾನು ನಿಗಮಕ್ಕೆ ಮೋಸ ಮಾಡಿಲ್ಲ. ಅವ್ಯವಹಾರದಲ್ಲಿ ಭಾಗಿ ಆಗಿಲ್ಲ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು.

ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ, ಪ್ರಕರಣಕ್ಕೆ ಸಂಬಂಧಿಸಿ ಕೆಎಂವಿಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಜೆ.ಜೆ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್ ಮತ್ತು ಬ್ಯಾಂಕ್ ವ್ಯವಸ್ಥಾಪಕಿ ಸುಚಿಸ್ಮಿತಾ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಮತ್ತು ಅವರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ನಾವು ಬಿಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೇಳಿದ್ದರು.

ಇದನ್ನು ಓದಿ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಬಂಧನ ಸಾಧ್ಯತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...