Homeಮುಖಪುಟಕೊಚ್ಚಿ: ಸರಣಿ ಸ್ಪೋಟ ಪ್ರಕರಣ; ಮೃತರ ಸಂಖ್ಯೆ 5ಕ್ಕೆ ಏರಿಕೆ

ಕೊಚ್ಚಿ: ಸರಣಿ ಸ್ಪೋಟ ಪ್ರಕರಣ; ಮೃತರ ಸಂಖ್ಯೆ 5ಕ್ಕೆ ಏರಿಕೆ

- Advertisement -
- Advertisement -

ಕೇರಳದ ಕಲಮಸ್ಸೆರಿ ಯೆಹೋವನ ಸಾಕ್ಷಿಗಳ ಸಭೆಯಲ್ಲಿ ನಡೆದ ಬಾಂಬ್‌ ಸ್ಪೋಟ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯೋರ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಸ್ಯಾಲಿ ಪ್ರದೀಪನ್(45)ಮೃತ ಮಹಿಳೆ. ಇವರಿಗೆ ಸ್ಪೋಟದಲ್ಲಿ 60%ಕ್ಕಿಂತ ಹೆಚ್ಚು ಸುಟ್ಟಗಾಯಗಳಾಗಿತ್ತು. ಸ್ಯಾಲಿ ಪ್ರದೀಪನ್ ಅವರ ಪುತ್ರಿ 12 ವರ್ಷದ ಲಿಬಿನಾ ಘಟನೆಯಲ್ಲಿ 95% ಕ್ಕಿಂತ ಹೆಚ್ಚು ಸುಟ್ಟಗಾಯಗಳಾದ ಕಾರಣ ಅ.30ರಂದು ಮೃತಪಟ್ಟಿದ್ದರು.

ಸ್ಯಾಲಿ ಪ್ರದೀಪನ್ ಅವರ ಪುತ್ರರಾದ 24 ವರ್ಷ ವಯಸ್ಸಿನ ಪ್ರವೀಣ್ ಮತ್ತು 21 ವರ್ಷ ವಯಸ್ಸಿನ ರಾಹುಲ್ ಅವರು ಕೂಡ ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಯೆಹೋವನ ಸಾಕ್ಷಿಗಳ ಸಭೆಯಲ್ಲಿ ಕನಿಷ್ಠ 2,000 ಮಂದಿ ಭಾಗವಹಿಸಿದ್ದರು. ಇಬ್ಬರು ಮಹಿಳೆಯರು ಸ್ಫೋಟದ ದಿನವೇ ಸಾವನ್ನಪ್ಪಿದ್ದರು. ಕೊಚ್ಚಿಯ ಕುರುಪ್ಪಂಪಾಡಿಯ 60 ವರ್ಷದ ಲಯೋನಾ ಪೌಲೋಸ್ ಮತ್ತು ಇಡುಕ್ಕಿಯ ತೊಡುಪುಳ ಮೂಲದ ಕುಮಾರಿ ಅವರು ಮೃತಪಟ್ಟಿದ್ದರು. ನ.6ರಂದು 3ನೇ ಮಹಿಳೆ ಕಲಮಸ್ಸೆರಿಯ ಮೋಲಿ ಜಾಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಸ್ಫೋಟ ನಡೆದ ಕೆಲವು ಗಂಟೆಗಳ ನಂತರ ವಿಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿದ್ದ ಡೊಮಿನಿಕ್ ಮಾರ್ಟಿನ್ ಎಂಬ ಆರೋಪಿ ಸ್ಫೋಟಕ್ಕೆ ಹೊಣೆ ಹೊತ್ತುಕೊಂಡು ಪೊಲೀಸರಿಗೆ ಶರಣಾಗಿದ್ದ. ಪೊಲೀಸರು ಈತನಿಗೆ ವಿಚಾರಣೆಗೆ ಒಳಪಡಿಸಿದ್ದಾರೆ.

ಸ್ಪೋಟಕ್ಕೆ ಐಇಡಿ ಬಳಕೆ ಮಾಡಿರುವುದು ಪತ್ತೆಯಾಗಿತ್ತು. ಟಿಫಿನ್‌ ಬಾಕ್ಸ್‌ನಲ್ಲಿ ಸ್ಪೋಟಕ ಇಟ್ಟಿರುವುದು ತನಿಖೆಯ ವೇಳೆ ಕಂಡು ಬಂದಿತ್ತು. ಸಮಾವೇಶದ ಸ್ಥಳದಲ್ಲಿ ಸ್ಪೋಟಕ್ಕೆ ಕೆಲವೇ ನಿಮಿಷಗಳ ಮೊದಲು ಕಾರೊಂದು ವೇಗವಾಗಿ ಸ್ಥಳದಿಂದ ತೆರಳಿದ್ದು, ಈ ಕುರಿತ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಇದಲ್ಲದೆ ಕೊಚ್ಚಿ ಸ್ಪೋಟದ ನಂತರ ಸಾಮಾಜಿಕ ಮಾದ್ಯಮಗಳ ಮೂಲಕ ಕೋಮು ಪ್ರಚೋದನಕಾರಿ ವಿಷಯಗಳನ್ನು ಪ್ರಚಾರ ಮಾಡಿದ್ದಕ್ಕಾಗಿ 54 ಪ್ರಕರಣಗಳನ್ನು ದಾಖಲಿಸಲಾಗಿದೆ. ಮಲಪ್ಪುರಂ ಜಿಲ್ಲೆಯೊಂದರಲ್ಲಿ 26 ಪ್ರಕರಣಗಳು ದಾಖಲಾಗಿದ್ದರೆ, ಎರ್ನಾಕುಲಂನಲ್ಲಿ 15 ಮತ್ತು ತಿರುವನಂತಪುರಂನಲ್ಲಿ 5 ಪ್ರಕರಣಗಳು ದಾಖಲಾಗಿವೆ. ತ್ರಿಶೂರ್ ನಗರ ಮತ್ತು ಕೊಟ್ಟಾಯಂನಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿದ್ದು, ಪತ್ತನಂತಿಟ್ಟ, ಅಲಪ್ಪುಝ, ಪಾಲಕ್ಕಾಡ್ ಮತ್ತು ಕೋಝಿಕ್ಕೋಡ್ ಗ್ರಾಮಾಂತರ ಠಾಣೆಗಳಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿದೆ.

ಸಮಾವೇಷದಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್‌ಗೆ ಸಂಬಂಧಿಸಿ ಈ ಮೊದಲು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಎರಡು ಪ್ರಕರಣ ದಾಖಲಾಗಿತ್ತು.

ಇದನ್ನು ಓದಿ: ಛತ್ತೀಸ್‌ಗಢ: ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 15,000ರೂ. ಘೋಷಿಸಿದ ಕಾಂಗ್ರೆಸ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...