Homeಕರ್ನಾಟಕಕೊಡಗು: ಅಂಬೇಡ್ಕರ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಶಿಕ್ಷಕ ಅಮಾನತು

ಕೊಡಗು: ಅಂಬೇಡ್ಕರ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಶಿಕ್ಷಕ ಅಮಾನತು

ಅಂಬೇಡ್ಕರ್‌ರವರ ಜನ್ಮದಿನದಂದು ಮಾತನಾಡಿದ್ದ ವಿದ್ಯಾರ್ಥಿಗೆ ಶಿಕ್ಷಕ ಧರ್ಮರಾಜ್‌ ಕೊಲೆ ಬೆದರಿಕೆ ಹಾಕಿದ್ದ ಆಡಿಯೊ ವೈರಲ್ ಆಗಿದೆ.

- Advertisement -
- Advertisement -

ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿದ್ಯಾರ್ಥಿಗೆ ಕೊಲೆ ಬೆದರಿಕೆ ಹಾಕಿ ಅಂಬೇಡ್ಕರ್‌ರವರ ವಿಚಾರಗಳಿಗೆ ಅವಮಾನ ಮಾಡಿದ್ದ ಶಿಕ್ಷಕನನ್ನು ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಅಮಾನತು ಮಾಡಿದೆ.

ಕುಶಾಲನಗರದ ಅಂತಿಮ ವರ್ಷದ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜು ವಿದ್ಯಾರ್ಥಿ ಅಭಿಲಾಷ್ ಅವರು ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ನಡೆದ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರಪೇಟೆ ತಾಲ್ಲೂಕು ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಧರ್ಮರಾಜ್‌ ಕೊಲೆ ಬೆದರಿಕೆ ಹಾಕಿದ್ದು, ವೈರಲ್ ಆಗಿದೆ. ಬಳಿಕ ಶಿಕ್ಷಣ ಇಲಾಖೆ ಕ್ರಮ ಜರುಗಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಭಿಲಾಷ್ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಆಡಿಯೊ ವಾಟ್ಸ್‌ಆಪ್‌ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಜೀವ ಭಯದಲ್ಲಿ ಇರುವಂತಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸ್ಥಳ ಮಹಜರು ಮಾಡಿಸಿ ವಿದ್ಯಾರ್ಥಿಯೊಂದಿಗೆ ಮಾತನಾಡಿದ ಸಂದರ್ಭದಲ್ಲಿ ವಿದ್ಯಾರ್ಥಿಯು ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ದೂರು ನೀಡಲು ನಿರಾಕರಿಸಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಧರ್ಮರಾಜ್‌ ಸರ್ಕಾರಿ ನೌಕರರಾಗಿದ್ದು ಅನುಚಿತ ವರ್ತನೆ ತೋರಿರುವುದರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಧರ್ಮರಾಜ್‌ ಮಾತನಾಡಿರುವುದೇನು?

ಸುಮಾರು ಇಪ್ಪತ್ತು ನಿಮಿಷಗಳ ಕಾಲ ವಿದ್ಯಾರ್ಥಿ ಅಭಿಲಾಷ್‌ ಜೊತೆ ಮಾತನಾಡಿದ್ದ ಧರ್ಮರಾಜ್‌, ಗೌರಿ ಲಂಕೇಶ್‌, ನರೇಂದ್ರ ದಾಬೋಲ್ಕರ್‌, ಎಂ.ಎಂ.ಕಲ್ಬುರ್ಗಿ ಹಾಗೂ ಗೋವಿಂದ ಪಾನ್ಸರೆಯವರು ಹತ್ಯೆಯಾದಂತೆ ನಿನ್ನನ್ನೂ ಹತ್ಯೆ ಮಾಡಲಾಗುತ್ತದೆ ಎಂದು ಹೆದರಿಸಿದ್ದರು.

ಅನಾಮಧೇಯನಾಗಿ ಧಾರವಾಡದಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದ ಧರ್ಮರಾಜ್‌, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ವಿಚಾರಗಳನ್ನು ಮಾತನಾಡಬೇಡ ಎಂದು ವಿದ್ಯಾರ್ಥಿಗೆ ತಾಕೀತು ಮಾಡಿದ್ದರು. ಜೊತೆಗೆ ‘ನಾನೊಬ್ಬ ಆರ್‌ಎಸ್‌ಎಸ್ ಕಾರ್ಯಕರ್ತ’ ಎಂದು ಒಪ್ಪಿಕೊಂಡಿದ್ದರು.

ಇದನ್ನೂ ಓದಿರಿ: 2016-2020ರ ನಡುವೆ 3,400 ಕೋಮು ಗಲಭೆಗಳು ನಡೆದಿವೆ ಎಂದು ಒಪ್ಪಿಕೊಂಡಿದ್ದ ಮೋದಿ ಸರ್ಕಾರ

ಅಂಬೇಡ್ಕರ್‌ ಬೌದ್ಧಕ್ಕೆ ಹೋದರು. ಹಿಂದೂ ಧರ್ಮವನ್ನು ತ್ಯಜಿಸಿದರು. ಅವರ ಬಗ್ಗೆ ಮಾತನಾಡಬಾರದು. ಮುಸ್ಲಿಮರು ಮತ್ತು ದಲಿತರು ದೇಶಕ್ಕೆ ಅಪಾಯಕಾರಿ ಎಂದು ಬೆದರಿಸಿದ್ದರು. ವಿದ್ಯಾರ್ಥಿಯ ವೈಯಕ್ತಿಕ ವಿವರಗಳನ್ನು ಕಲೆಹಾಕಿಕೊಳ್ಳುವಂತೆ ಮಾತನಾಡಿ, ‘ತಾಕತ್ತಿದ್ದರೆ ನೀನು ಇರುವಲ್ಲಿ ನಾಲ್ಕು ಜನ ನಿನ್ನಂಥವರನ್ನು ಹುಟ್ಟಿ ಹಾಕು ನೋಡೋಣ, ಜೈ ಭೀಮ್ ಎಂದು ಕೂಗು ನೋಡೋಣ’ ಎಂದೆಲ್ಲ ಬೆದರಿಸಿದ್ದರು. ಅಭಿಲಾಷ್ ಧೈರ್ಯದಿಂದಲೇ ಮಾತನಾಡಿ, ಅಂಬೇಡ್ಕರ್‌ ಕುರಿತು ನಿಮಗೇಕೆ ಬೇಸರ ಎಂದು ಪ್ರಶ್ನಿಸಿದ್ದರು. ಆಡಿಯೊ ವೈರಲ್ ಆದ ಬಳಿಕ ಧರ್ಮರಾಜ್ ಸಿಕ್ಕಿ ಬಿದ್ದಿದ್ದಾರೆ.

ಎಸ್‌ಸಿ ಸಮುದಾಯಕ್ಕೆ ಸೇರಿದ ಧರ್ಮರಾಜ್‌

ದಲಿತ ಮುಖಂಡರು ಧರ್ಮರಾಜ್ ಅವರಿಂದ ಕ್ಷಮೆ ಯಾಚಿಸಿದ್ದಾರೆ. “ನನ್ನಿಂದ ತಪ್ಪಾಗಿದೆ. ಮತ್ತೆಂದೂ ಈ ರೀತಿಯ ತಪ್ಪು ಮಾಡುವುದಿಲ್ಲ. ನಾನು ಕೂಡ ಪರಿಶಿಷ್ಟ ಜಾತಿಗೆ ಸೇರಿದವನು. ವಿದ್ಯಾರ್ಥಿ ಅಭಿಲಾಷ್ ಅವರಲ್ಲೂ ಕ್ಷಮೆ ಕೋರುತ್ತೇನೆ” ಎಂದು ಧರ್ಮರಾಜ್ ಹೇಳಿದ್ದಾರೆ.

ದಲಿತ ಮುಖಂಡರು ಧರ್ಮರಾಜ್‌ಗೆ ಬುದ್ಧಿ ಹೇಳಿ ಕಳಿಸಿದ್ದಾರೆ. ಶಿಕ್ಷಕನಾಗಿ ಮಾಡಿದ ಅತಾರ್ಚುಕ್ಕೆ ಶಿಕ್ಷಣ ಇಲಾಖೆ ಈಗ ಕ್ರಮ ಜರುಗಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...