Homeಮುಖಪುಟಕೊಡಗು: 4 ವರ್ಷ ಕಳೆದರೂ ಸಿಗದ ಸೌಲಭ್ಯ; ಪುನರ್‌ ವಸತಿ ಬಿಟ್ಟು ಕಾಡಿಗೆ ಬಂದ ಆದಿವಾಸಿಗಳು

ಕೊಡಗು: 4 ವರ್ಷ ಕಳೆದರೂ ಸಿಗದ ಸೌಲಭ್ಯ; ಪುನರ್‌ ವಸತಿ ಬಿಟ್ಟು ಕಾಡಿಗೆ ಬಂದ ಆದಿವಾಸಿಗಳು

- Advertisement -
- Advertisement -

ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಮಾಸ್ತಿಗುಡಿಯಲ್ಲಿ ಕಲ್ಪಿಸಲಾಗಿದ್ದ ಪುನರ್‌ವಸತಿ ಕೇಂದ್ರವನ್ನು ತೊರೆದ ಆದಿವಾಸಿಗಳು ಮತ್ತೆ ಕೊಡಗು ಜಿಲ್ಲೆಯಲ್ಲಿನ ತಮ್ಮ ಮೂಲಸ್ಥಳಕ್ಕೆ ತೆರಳಿ ಪ್ರತಿಭಟಿಸಿದ್ದಾರೆ.

ಕಾಡಿನಲ್ಲಿ ನೆಮ್ಮದಿಯಾಗಿದ್ದ ನಮ್ಮನ್ನು ಪುನರ್‌ ವಸತಿ ಕೇಂದ್ರಕ್ಕೆ ಕರೆದೊಯ್ಯುವಾಗ ನೀಡಿದ ಭರವಸೆಗಳು ಈಡೇರಿಲ್ಲ ಎಂದು ಆರೋಪಿಸಿರುವ ಆದಿವಾಸಿಗಳು ಮತ್ತೆ ತಮ್ಮ ತವರಿಗೆ ಮರಳಲು ಯತ್ನಿಸಿದ್ದಾರೆ.

ಎಚ್.ಡಿ.ಕೋಟೆ ತಾಲ್ಲೂಕಿನ ಕಸಬಾ ಹೋಬಳಿಯ ಮಾಸ್ತಿಗುಡಿ ಪುನರ್‌ ವಸತಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದ್ದ ನೂರಾರು ಜೇಬುಕುರುಬ ಹಾಗೂ ಯರವ ಸಮುದಾಯದ ಆದಿವಾಸಿ ಕುಟುಂಬಗಳು ಪುನರ್‌ ವಸತಿ ಕೇಂದ್ರದಲ್ಲಿನ ಅವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಡಗಿನ ಬಾಳಲೆಗೆ ಗ್ರಾಮ ಪಂಚಾಯಿತಿಯ ರಾಜಪುರ ಸಮೀಪದ ಅಡುಗುಂಡಿ ಅರಣ್ಯ ಗೇಟ್‌ ಬಳಿ  ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆಯ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ಕೊಡಗಿನ ಸ್ಥಳೀಯ ಪತ್ರಿಕೆ ‘ಶಕ್ತಿ’ ಮುಖಪುಟದಲ್ಲಿ ವರದಿ ಮಾಡಿದೆ.

ಅಡುಗುಂಡಿಯಲ್ಲಿ ವಾಸವಿದ್ದ ನೂರಾರು ಆದಿವಾಸಿ ಕುಟುಂಬಗಳನ್ನು ಮನವೊಲಿಸುವ ಮೂಲಕ ಇಲ್ಲಿನ ಅರಣ್ಯ ಪ್ರದೇಶದಿಂದ ಮೈಸೂರು ಜಿಲ್ಲೆಯ ಕಸಬಾ ಹೋಬಳಿಯ ರಾಜೇಗೌಡನ ಹುಂಡಿ ಗ್ರಾಮದ ಸರ್ವೇ ನಂ. 37ರ ಮಾಸ್ತಿಗುಡಿ ಪುನರ್ವಸತಿ ಕೇಂದ್ರಕ್ಕೆ ಕರೆ ತರಲಾಗಿತ್ತು. ಪ್ರತಿಕುಟುಂಬಕ್ಕೆ 15 ಲಕ್ಷ ರೂ. ಪ್ಯಾಕೇಜಿನಲ್ಲಿ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಲಾಗಿತ್ತು. ಸರ್ಕಾರದ ಮಾತು ನಂಬಿದ ಆದಿವಾಸಿಗಳು ಕಾಡು ತೊರೆದು ಬಂದಿದ್ದರು.

ಇದನ್ನೂ ಓದಿರಿ: ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?

ಕೇಂದ್ರ ಸರ್ಕಾರದ ಪುನರ್‌ ವಸತಿ ಯೋಜನೆಯಡಿಯಲ್ಲಿ ಅರಣ್ಯ ಮತ್ತು ಪರಿಸರ ಮಂತ್ರಾಲಯವು ಇವರಿಗೆ ಜಮೀನು ಹಾಗೂ ನಿವೇಶನದ ಸ್ವಾಧೀನ ಪತ್ರಗಳನ್ನು ನೀಡಿತ್ತು. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ ಈ ಕುಟುಂಬಗಳನ್ನು ಪುನರ್ವಸತಿ ಕೇಂದ್ರಕ್ಕೆ ತರುವಾಗ ಗುಣಮಟ್ಟದ ಆರ್‌ಸಿಸಿ ಮನೆ, ಮೂರು ಎಕರೆ ಜಮೀನು, ಆರಂಭದಲ್ಲಿ 75 ಸಾವಿರ ನಗದು ಹಾಗೂ ಬ್ಯಾಂಕ್ ಖಾತೆಯಲ್ಲಿ 2.50 ಲಕ್ಷ ಹಣವನ್ನು ಪ್ಯಾಕೇಜಿನಡಿ ಘೋಷಿಸಿ ಇವುಗಳಿಗೆ ಒಪ್ಪಿಗೆ ಸೂಚಿಸಿದ ಕುಟುಂಬಗಳನ್ನು ವನ್ಯಜೀವಿ ಸಂರಕ್ಷಣಾ ಸಂಸ್ಥೆಯ ಮೂಲಕ ಕಳುಹಿಸಿಕೊಡಲಾಯಿತು.

ಅರಣ್ಯ ಇಲಾಖೆಯ ವಿವಿಧ ಅಧಿಕಾರಿಗಳು ಪುನರ್ವಸತಿ ಕೇಂದ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಜೀವನ ಸಾಗಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ಭೂಮಿಯನ್ನು ಖಾತೆ ಮಾಡಿಕೊಡದೆ, ಕೃಷಿಗೆ ಭೂಮಿ ನೀಡದೆ ಅನ್ಯಾಯವೆಸಗಿದ್ದಾರೆ. ಹೀಗಾಗಿ ಅಧಿಕಾರಿಗಳೊಂದಿಗೆ ಆದಿವಾಸಿಗಳು ಸಂಘರ್ಷ ನಡೆಸುತ್ತಲೇ ಇದ್ದಾರೆ. ಅಧಿಕಾರಿಗಳು ಪುನರ್ವಸತಿ  ಕೇಂದ್ರಕ್ಕೆ ಆಗಮಿಸಿ ಸೌಲಭ್ಯ ಒದಗಿಸುವ ಬಗ್ಗೆ ಭರವಸೆ ನೀಡುತ್ತಾರೆ. ಆರು ತಿಂಗಳಲ್ಲಿ ಬೇರೆಡೆಗೆ ವರ್ಗಾವಣೆಯಾಗುತ್ತಾರೆ. ಹೊಸ ಅಧಿಕಾರಿ ಬಂದಾಗಲೂ ಇದೇ ರೀತಿಯ ಭರವಸೆ ನೀಡುತ್ತಾರೆ. ಆದರೆ ಪರಿಹಾರ ಮಾತ್ರ ಸಿಕ್ಕಿಲ್ಲ ಎಂಬುದು ಆದಿವಾಸಿಗಳ ಕೂಗು.

ಸಿಟ್ಟಿಗೆದ್ದ ಆದಿವಾಸಿಗಳು ಹಾಡಿ ಮುಖಂಡರಾದ ಜೇನು ಕುರುಬರ ಟಿ.ಅಯ್ಯಪ್ಪ ಹಾಗೂ ಜೇಬು ಕುರುಬರ ಎಂ.ಸಣ್ಣಯ್ಯ ನೇತೃತ್ವದಲ್ಲಿ ಹೊರಟು ಅಡಗುಂಡಿ ಅರಣ್ಯಕ್ಕೆ ಆಗಮಿಸಿದರು. ವಿಷಯ ತಿಳಿದ ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅಡುಗುಂಡಿಗೇಟ್ ಬಳಿಯೇ ಆದಿವಾಸಿಗಳನ್ನು ತಡೆದಿದ್ದಾರೆ. ಗೇಟ್‌ ಬಳಿಯೇ ಪ್ರತಿಭಟನೆಯನ್ನು ನಡೆಸಿದಾಗ, ಅಧಿಕಾರಿಗಳು ಮನವೊಲಿಸಲು ಯತ್ನಿಸಿದ್ದಾರೆ.

“ಆರು ತಿಂಗಳಿಗೊಮ್ಮೆ ಅರಣ್ಯ ಅಧಿಕಾರಿಗಳು ಬದಲಾಗುತ್ತಾರೆ. ಆಶ್ವಾಸನಗೆಗಳು ಹಾಗೆಯೇ ಉಳಿಯುತ್ತವೆ. ಮೂರು ಎಕರೆ ಜಮೀನಿಗೆ ಯಾವುದೇ ಆರ್‌ಟಿಸಿ ಇಲ್ಲಿಯತನಕ ನೀಡಿಲ್ಲ. ಇದರಿಂದ ಯಾವುದೇ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಕೃಷಿ ಭೂಮಿಗೆ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದ್ದ ಮಾತು ಉಳಿಸಿಕೊಂಡಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪುನರ್‌ ವಸತಿಗೆ ತೆರಳುವ ವೇಳೆ 15 ಲಕ್ಷ ರೂ. ಪ್ಯಾಕೇಜಿನೊಂದಿಗೆ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹತ್ತು ಲಕ್ಷ ಪ್ಯಾಕೇಜನ್ನು ನೀಡುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಇದೀಗ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ಪ್ಯಾಕೇಜನ್ನು ನೀಡಿಲ್ಲ. ನಮ್ಮ ಮಕ್ಕಳ ವಿದ್ಯಾಭ್ಯಾಸ ಸಾಧ್ಯವಾಗುತ್ತಿಲ್ಲ. ಕೊಡಗಿನ ಅರಣ್ಯದ ಗುಡಿಸಲುಗಳಲ್ಲಿ ನೆಮ್ಮದಿಯಾಗಿದ್ದೆವು. ಇದೀಗ ನಾಡಿಗೆ ಕರೆದೊಯ್ದು ನಮ್ಮ ಜೀವನವನ್ನು ಅತಂತ್ರ ಮಾಡಿದ್ದೀರಿ. ಯಾರೂ ಕೂಡ ಈಗ ನಮ್ಮ ಬಗ್ಗೆ ವಿಚಾರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 ಇದನ್ನೂ ಓದಿರಿ: ಸಿನಿಮಾ ವಿಮರ್ಶೆ: ಆದಿವಾಸಿ ಭೂ ಹಕ್ಕಿನ ನಿಜ ಕಥನ ‘ಪಡ’

ಸ್ಥಳಕ್ಕೆ ಭೇಟಿ ನೀಡಿದ ಹುಣಸೂರು ಉಪವಿಭಾಗಾಧಿಕಾರಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದು, “ಆದಿವಾಸಿಗಳಿಗೆ ನೀಡಬೇಕಿದ್ದ ಸವಲತ್ತುಗಳನ್ನು ಈಡೇರಿಸುವ ಕೆಲಸವು ಪ್ರಗತಿಯಲ್ಲಿದೆ. ಅರಣ್ಯಾಧಿಕಾರಿಗಳು ಕ್ರಮ ಜರುಗಿಸುತ್ತಿದ್ದಾರೆ” ಎಂದರು.

ಬುಡಕಟ್ಟು ಸಮುದಾಯಗಳ ಪರ ಕೆಲಸ ಮಾಡುತ್ತಿರುವ ಪ್ರೊ.ಎ.ಎಸ್.ಪ್ರಭಾಕರ್‌ ಪ್ರತಿಕ್ರಿಯಿಸಿ, “ಅಧಿಕಾರಿಗಳು ಭರವಸೆಗಳನ್ನು ನೀಡುತ್ತಾರೆ. ಆದರೆ ಅವುಗಳು ಭರವಸೆಯಾಗಿದೆಯೇ ಉಳಿದರೆ ವಂಚನೆ ಮಾಡಿದಂತೆ. ರಾಷ್ಟ್ರೀಯ ಉದ್ಯಾನ ಹಾಗೂ ವನ್ಯಜೀವಿ ಕಾಯ್ದೆ ಕಾರವೊಡ್ಡಿ ಆದಿವಾಸಿಗಳನ್ನು ಪುನರ್ವಸತಿಗೆ ತರಲಾಯಿತು. 15 ಲಕ್ಷ ರೂ.ಗಳ ಪ್ಯಾಕೇಜ್‌ ಹಾಗೂ ಜಮೀನು ನೀಡುವುದಾಗಿ ಹೇಳಲಾಗಿತ್ತು. ಈ ಭರವಸೆಗಳನ್ನು ಈಡೇರಿಸಿಲ್ಲ. ಇಷ್ಟು ಜನ ಮಾತ್ರವಲ್ಲ; ಊರು ಊರುಗಳನ್ನೇ ಎತ್ತಂಗಡಿ ಮಾಡಲಾಗಿದೆ. ಸಾವಿರಾರು ಕುಟುಂಬಗಳು ಅತಂತ್ರವಾಗಿವೆ” ಎಂದು ವಿಷಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is true..
    We sd give support, help for their human rights ruined by forest departments and environmentalists, green tribunal wrong orders,,ngo etc…
    Farmers only are the real protectors of land ,forest,peoples leaving around.
    Farmers plantations are more green maintained in most of kodagu ,chickmangloor, areas than reserved forests looks baren. Without trees and water tables ..
    Only money is spent on forest developments

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....