Homeಕರ್ನಾಟಕದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಕೊಡಗು ಪ್ರವಾಹ ಸಂತ್ರಸ್ತ ಮಹಿಳೆ

ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಕೊಡಗು ಪ್ರವಾಹ ಸಂತ್ರಸ್ತ ಮಹಿಳೆ

- Advertisement -
- Advertisement -

2019ರಲ್ಲಿ ಸಂಭವಿಸಿದ ಕೊಡಗು ಪ್ರವಾಹದಲ್ಲಿ ಮನೆ ಕಳೆದುಕೊಂಡು ನಿರ್ಗತಿಕಳಾಗಿರುವ ಜಿಲ್ಲೆಯ ವೃದ್ಧೆಯೊಬ್ಬರು ತನಗೆ ಮನೆ ನಿರ್ಮಿಸಿಕೊಡಿ ಇಲ್ಲವಾದರೆ ಆತ್ಮಹತ್ಯೆಗೆ ಅವಕಾಶ ಮಾಡಿಕೊಡಿ ಎಂದು ದಯಾಮರಣ ಕೋರಿ ರಾಷ್ಟ್ರಪತಿ ದೌಪತಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಕೊಡಗು ಜಿಲ್ಲೆಯ ನೆಲ್ಲಿಹುದಿಕೇರಿಯ ನಿವಾಸಿ ಶಾಂತಾ (66) ದಯಾಮರಣಕ್ಕಾಗಿ ಪತ್ರ ಬರೆದಿದ್ದಾರೆ. ಕೊಡಗು ಜಿಲ್ಲೆಯಲ್ಲಿ 2019ರಲ್ಲಿ ಸುರಿದ ಭಾರೀ ಮಳೆಯಿಂದಾಗಿ ಶಾಂತಾ ಅವರ ಮನೆ ಕುಸಿದು ಬಿದ್ದಿತ್ತು. ಪುನರ್ವಸತಿಗಾಗಿ ಅವರು ಹಲವಾರು ಅರ್ಜಿಗಳನ್ನು ಸಲ್ಲಿಸಿ, ಕಚೇರಿಗಳಿಗೆ ಅಲೆದಾಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಹಾಗಾಗಿ ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ತಮ್ಮ ದುಸ್ಥಿತಿಯನ್ನು ವಿವರಿಸಿದ್ದಾರೆ.

ಕಾವೇರಿ ನದಿ ಒಡೆದು 2019ರ ಪ್ರವಾಹದಲ್ಲಿ ತನ್ನ ಮನೆ ಸೇರಿದಂತೆ ಹಲವಾರು ಮನೆಗಳು ಕೊಚ್ಚಿಹೋಗಿವೆ. ನೆಲ್ಲಿಹುದಿಕೇರಿ, ಸಿದ್ದಾಪುರ, ಕರಡಿಗೋಡು, ಗುಹ್ಯ ಮತ್ತು ಸುತ್ತಮುತ್ತಲಿನ ತಗ್ಗು ಪ್ರದೇಶಗಳು ಪ್ರವಾಹಕ್ಕೆ ಸಿಲುಕಿವೆ ಎಂದು ಅವರು ಹೇಳಿದರು.

ಮನೆ ಕಳೆದುಕೊಂಡು ನಾಲ್ಕು ವರ್ಷಗಳಾದರು. ಪುನರ್ವಸತಿ ಪಡೆಯಲಾಗದೆ ಶಾಂತಾ ಬೇಸತ್ತಿದ್ದಾರೆ. ಹೀಗಾಗಿ, ತಮಗೆ ಮನೆ ಕಟ್ಟಿಸಿಕೊಡಿ, ಇಲ್ಲವೇ, ದಯಾಮರಣಕ್ಕೆ ಅನುಮತಿ ಕೊಡಿ ಎಂದು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಭರವಸೆ ಈಡೇರಿಸಲು ಯಡಿಯೂರಪ್ಪ ವಿಫಲ; ಆರೋಪ

”ಯಡಿಯೂರಪ್ಪ ನೇತೃತ್ವದ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಹೊಸ ಮನೆಗಳ ಭರವಸೆ ನೀಡಿತ್ತು. ಪ್ರವಾಹ ಸಂತ್ರಸ್ತರಿಗೆ ಹೊಸ ಮನೆಗಳ ನಿರ್ಮಾಣ ಪೂರ್ಣಗೊಳ್ಳುವವರೆಗೆ ಸಂತ್ರಸ್ತರು ಉಳಿದುಕೊಂಡಿರುವ ಮನೆಗಳಿಗೆ ಮಾಸಿಕ ಬಾಡಿಗೆ ನೀಡುವುದಾಗಿಯೂ ಸರ್ಕಾರ ಭರವಸೆ ನೀಡಿತ್ತು. ಆದರೆ, ಸರ್ಕಾರ ತನ್ನ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ” ಎಂದು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಶಾಂತಾ ಅವರು ಆರೋಪಿಸಿದ್ದಾರೆ.

”ತನಗೆ ಮನೆ ನೀಡುವಲ್ಲಿ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ. ಒಂದೋ ನನಗೆ ಮನೆ ನಿರ್ಮಿಸಲು ಸರ್ಕಾರ ಸಹಾಯ ಮಾಡಬೇಕು ಅಥವಾ ಸಾಯಲು ನನಗೆ ಅನುಮತಿ ನೀಡಬೇಕು” ಎಂದು ಪತ್ರದಲ್ಲಿ ಬರೆದಿದ್ದಾರೆ.

ಶಾಂತಾ ಮನೆಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಇದೀಗ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಾಸಿಕ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಹಣಕಾಸಿನ ಪರಿಸ್ಥಿತಿಯು ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಒಂದೋ ನನಗೆ ವಾಸಿಸಲು ಮನೆ ಕಟ್ಟಿಸಿ ಇಲ್ಲವೇ ನನಗೆ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ: ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಮುಖ್ಯ ದಾವೆದಾರರಾದ ರಾಖಿ ಸಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಡ್ಯ | ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ

0
ಮಂಡ್ಯ ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ರಾಮಕೃಷ್ಣ ಅಲಿಯಾಸ್...