Homeಕರ್ನಾಟಕಕೊಡಗು: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ?

ಕೊಡಗು: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ?

ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್‌ಗನ್‌ ತರಬೇತಿ ನೀಡಿರುವ ಕುರಿತು ವರದಿಯಾಗಿದೆ.

- Advertisement -
- Advertisement -

ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್‌ಗನ್‌ ತರಬೇತಿ ನೀಡಿರುವ ಕುರಿತು ವರದಿಯಾಗಿದ್ದು, ಈ ಅಸಂವಿಧಾನಿಕ ನಡೆಗೆ ಆಕ್ರೋಶ ವ್ಯಕ್ತಪವಾಗಿದೆ.

ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯಲ್ಲಿ ನಡೆದ ‘ಶೌರ್ಯ ಪ್ರಶಿಕ್ಷಣ ವರ್ಗ’ದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ, ತ್ರಿಶೂಲ ದೀಕ್ಷೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನೆ ಎತ್ತಿರುವ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆಯವರು, “ಶಾಲೆಯ ವಿರುದ್ಧ ಕ್ರಮ ಜರುಗಿಸಿ” ಎಂದು ಶಿಕ್ಷಣ ಸಂಸ್ಥೆಯನ್ನು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರೇ, ಶಾಲೆಗಳಲ್ಲಿ ಹಿಜಾಬ್‌ ನಿರ್ಬಂಧ ವಿಧಿಸಿರುವ ನಿಮ್ಮ ಸರ್ಕಾರ, ಬಜರಂಗದಳಕ್ಕೆ ಒಂದು ವಾರ ಅಕ್ರಮ ಶಸ್ತ್ರಾಸ್ತ್ರ ತರಬೇತಿ ಶಿಬಿರ ನಡೆಸಲು ಅನುಮತಿ ಕೊಟ್ಟ ಪೊನ್ನಂಪೇಟೆಯ ಸಾಯಿ ಶಂಕರ ಶಿಕ್ಷಣ ಸಂಸ್ಥೆಯ ವಿರುದ್ಧ ಯಾವ ಕ್ರಮ ಕೈಗೊಂಡಿದೆ” ಎಂದು ಅಫ್ಸರ್‌ ಪ್ರಶ್ನಿಸಿದ್ದಾರೆ.

ಸುಮಾರು ಹತ್ತು ದಿನಗಳ ಕಾಲ ನಡೆದ ತರಬೇತಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್‌ ಸದಸ್ಯ ಸುಜಾ ಕುಶಾಲಪ್ಪ ಅವರೂ ಪಾಲ್ಗೊಂಡಿದ್ದರೆಂದು ಮೂಲಗಳು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಶಾಲಾ ಆವರಣದಲ್ಲಿ ಬಂದೂಕು ಹಿಡಿದು ತರಬೇತಿ ಪಡೆಯುತ್ತಿರುವುದು, ಸಂಸ್ಥೆಯ ಸಭಾಂಗಣ ಮತ್ತು ಆವರಣದಲ್ಲಿ ತ್ರಿಶೂಲ ಹಿಡಿದು ದೀಕ್ಷೆ ಪಡೆಯುತ್ತಿರುವುದು, ತ್ರಿಶೂಲಕ್ಕೆ ಪೂಜೆ ಸಲ್ಲಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಟೀಕೆಗಳು ವ್ಯಕ್ತವಾಗಿವೆ.

ವಿವಿಧ ಜಿಲ್ಲೆಯಿಂದ ಆಗಮಿಸಿದ ಬಜರಂಗದಳ, ವಿಶ್ವ ಹಿಂದೂ ಪರಿಷತ್‌ನ 119 ಶಿಕ್ಷಣಾರ್ಥಿಗಳು ಸೇರಿ 140 ಮಂದಿ ತರಬೇತಿಯಲ್ಲಿ ಹಾಜರಿದ್ದರೆಂದು ವರದಿಯಾಗಿದೆ.

ಇದನ್ನೂ ಓದಿರಿ: ಜಹಾಂಗೀರ್‌ಪುರಿ ಹಿಂಸಾಚಾರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆ ವಿಎಚ್‌ಪಿ, ಬಜರಂಗದಳ ಭಾಗಿ ಎಂದ ದೆಹಲಿ ಪೊಲೀಸರು; ಕೆಲವೇ ಗಂಟೆಗಳಲ್ಲಿ ಹೇಳಿಕೆ…

ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಜರು ಗಣಪತಿ ಮಾತನಾಡಿದ್ದು, “ಬಂದೂಕು ತರಬೇತಿ ನೀಡಿರುವ ಕುರಿತು ಮಾಹಿತಿ ಇಲ್ಲ. ಆಯೋಜಕರೇ ಊಟ, ಮತ್ತಿತರ ವ್ಯವಸ್ಥೆ ಮಾಡಿಕೊಂಡಿದ್ದರು. ಇದಕ್ಕೂ ವಿದ್ಯಾಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ರಜೆಯಿದ್ದ ಕಾರಣ ಶಿಕ್ಷಕರೂ ಇರಲಿಲ್ಲ. ಈ ಹಿಂದೆ ರಾಷ್ಟ್ರಮಟ್ಟದ ತರಬೇತಿಯೂ ನಡೆದಿತ್ತು. ಹೊರ ರಾಜ್ಯದಿಂದ ಶಿಕ್ಷಣಾರ್ಥಿಗಳುಬಂದಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಯೋಗ ಕಲಿಸಿ, ಆತ್ಮಸ್ಥೈರ್ಯ ತುಂಬಿದ್ದೇವೆ” ಎಂದು ವಿಶ್ವ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಪಿ.ಕೃಷ್ಣಮೂರ್ತಿ ಹೇಳಿದ್ದಾರೆ. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಫೋಟೋಗಳು ಬೇರೆಯೇ ಕಥೆಯನ್ನು ಹೇಳುತ್ತಿವೆ. ಈ ಶಸ್ತ್ರಾಸ್ತ್ರ ತರಬೇತಿಯಲ್ಲಿ ಎಷ್ಟು ಮಂದಿ ರಾಜಕಾರಣಿಗಳ ಮಕ್ಕಳು, ಸಂಘ ಪರಿವಾರದ ನಾಯಕರ ಮಕ್ಕಳು ಭಾಗವಹಿಸಿದ್ದರೆಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಹೆಚ್ಚಿನ ವಿವರ ಸಂಗ್ರಹಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸುತ್ತಿದೆ.

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ ಅವರನ್ನು ಸಂಪರ್ಕಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ಆದರೆ ಅವರು ಕರೆ ಸ್ವೀಕರಿಸಿಲ್ಲ. ಘಟನೆಯ ಕುರಿತು ಎದ್ದಿರುವ ಹಲವು ಪ್ರಶ್ನೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಕ್ರಿಯೆ ನೀಡಿದ ತಕ್ಷಣ ಅಪ್‌ಡೇಟ್ ಮಾಡಲಾಗುವುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...