Homeಕರ್ನಾಟಕಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

ಕೊಡಗು: ನೆರಮನೆಯವರ ಕೃತ್ಯಕ್ಕೆ ಮನೆ ಕಳೆದುಕೊಂಡು ಬೀದಿಗೆ ಬಿದ್ದ ಯರವ ಸಮುದಾಯದ ಕುಟುಂಬ

- Advertisement -
- Advertisement -

50 ವರ್ಷಗಳ ಹಿಂದೆ ಆಂಗ್ಲೋ-ಇಂಡಿಯನ್ ಕುಟುಂಬದಿಂದ ಉಡುಗೊರೆಯಾಗಿ ಬಂದ ಚಿಕ್ಕ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದ 8 ಮಂದಿಯ ಕುಟುಂಬ ಈಗ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದೆ. ಪಕ್ಕದ ಮನೆಯವರ ಕೃತ್ಯಕ್ಕೆ ಕೊಡಗಿನ ಯರವ ಸಮುದಾಯದ ಮಹಿಳೆಯ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

ಕೊಡಗಿನ ಯರವ ಸಮುದಾಯದ ಮಹಿಳೆ ಪಂಜಿರಿ ಯರವರ ಕುಂಜಿ, ರಸ್ತೆಯಲ್ಲಿ ಕುಳಿತು ತನ್ನ ಮನೆ ನೆಲಸಮಗೊಳ್ಳುವುದನ್ನು ನೋಡುತ್ತಾ, ಅಳುತ್ತಾ ಕುಳಿತಿದ್ದರು. ಆಕೆ, ತನ್ನ ಮನೆಯನ್ನು ಉರುಳಿಸುವ ಪ್ರಕ್ರಿಯೆ ಮುಗಿಯುವವರೆಗೂ ಒಂದಿಂಚೂ ಕದಲದೆ, ಸುರಿವ ಮಳೆಯ ಮಧ್ಯೆಯೂ ಅಳುತ್ತಾ ರಸ್ತೆಯಲ್ಲೇ ಕುಳಿತ್ತಿದ್ದರು. ಆಕೆ ಹುಟ್ಟಿದಾಗಿನಿಂದ ಆಕೆಗೆ ಇದ್ದದ್ದು ಅದೊಂದೇ ಮನೆ. ತನ್ನ ಮನೆ ನೆಲಸಮಗೊಳ್ಳುತ್ತಿರುವುದನ್ನು ನೋಡಿ ಬಿಕ್ಕಿ-ಬಿಕ್ಕಿ ಅಳುತ್ತಿದ್ದರು.

ಪಂಜಿರಿ ಯರವರ ಕುಂಜಿ ದಕ್ಷಿಣ ಕೊಡಗಿನ ದೇವರಪುರ ಗ್ರಾಮದ ಕನ್ನಂಬಾಡಿ ನಿವಾಸಿ. ಅವರು ಹಲವಾರು ಎಸ್ಟೇಟ್‌ಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಆಕೆ ಮತ್ತು ಆಕೆಯ ಕುಟುಂಬದ ಇತರ ಏಳು ಸದಸ್ಯರು ಕನ್ನಂಬಾಡಿಯಲ್ಲಿರುವ ಸರ್ವೇ ನಂಬರ್ 215/8 ರಲ್ಲಿ ಶೀಟ್ ಮನೆಯಲ್ಲಿ ವಾಸಿಸುತ್ತಿದ್ದರು.

ಇವರು ವಾಸಿಸುತ್ತಿದ್ದ ಚಿಕ್ಕ ಭೂಮಿಯನ್ನು ಸುಮಾರು 50 ವರ್ಷಗಳ ಹಿಂದೆ ಆಕೆಯ ಅಜ್ಜನಿಗೆ ಆಂಗ್ಲೋ-ಇಂಡಿಯನ್ ಕುಟುಂಬವಾದ ವಾರಿಂಗ್ ಕುಟುಂಬ ಉಡುಗೊರೆಯಾಗಿ ನೀಡಿತ್ತು.

ಇದನ್ನೂ ಓದಿ:  ರಾಮಗೊಂಡನಹಳ್ಳಿ: ತಮ್ಮ ನೆಲವನ್ನು ಕಸಿಯುತ್ತಿರುವ ಸರ್ಕಾರದ ವಿರುದ್ಧ ಪ್ರತಿಭಟಿಸಿದ ದನಗಳು!

“ಕುಂಜಿಯ ಅಜ್ಜ ನಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಆಕೆಯ ಕುಟುಂಬದವರಿಗೆ ನಮ್ಮ ಕುಟುಂಬಕ್ಕೆ ಸೇರಿದ 215/8 ಸರ್ವೇ ನಂಬರ್ ಭೂಮಿಯನ್ನು ಉಡುಗೊರೆಯಾಗಿ ನೀಡಲಾಗಿತ್ತು. 215/8 ರಲ್ಲಿನ ಭೂಮಿಯು ಇನ್ನೂ ವಾರಿಂಗ್ ಕುಟುಂಬದ ನಮ್ಮ ಒಡೆತನದಲ್ಲಿದೆ. ಆದರೆ, ಕುಂಜಿಯ ಕುಟುಂಬದವರಿಗೆ ಆ ಸ್ಥಳವನ್ನು ಖಾಲಿ ಮಾಡುವಂತೆ ನಾವು ಎಂದಿಗೂ ಕೇಳಲಿಲ್ಲ” ಎಂದು ಈಗ ಚೆನ್ನೈನಲ್ಲಿ ನೆಲೆಸಿರುವ ವಾರಿಂಗ್ ಕುಟುಂಬದ ಸದಸ್ಯರಲ್ಲಿ ಒಬ್ಬರಾದ ಅವ್ರಿಲ್ ಹೇಳಿದ್ದಾರೆ. ಅಲ್ಲದೆ,ಸರ್ವೇ ನಂಬರ್ 215/8 ರ ತೆರವುಗೊಳಿಸಲು ಕುಟುಂಬಕ್ಕೆ ನ್ಯಾಯಾಲಯದಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಅವರು ದೃಢಪಡಿಸಿದ್ದಾರೆ.

ಆದರೆ, ಆಗಸ್ಟ್ 20 ರಂದು ನೆರೆಯ ನಿವಾಸಿ ಸುಷ್ಮಾ ಸುಬ್ಬಯ್ಯ ಅವರು ಕುಂಜಿ ಮತ್ತು ಆಕೆಯ ಕುಟುಂಬವನ್ನು ಆ ಸ್ಥಳದಿಂದ ಹೊರಹಾಕಲು ಅವರ ಮನೆಯನ್ನು ನೆಲಸಮಗೊಳಿಸಿದ್ದಾರೆ. “ನಮಗೆ ಇಂಗ್ಲಿಷ್ ಓದಲು ಬರುವುದಿಲ್ಲ. ನಮಗೆ ಕೋರ್ಟ್ ನೋಟಿಸ್ ತೋರಿಸಲಾಯಿತು ಮತ್ತು ನಮ್ಮನ್ನು ನಮ್ಮ ಮನೆಯಿಂದ ಹೊರಹಾಕಲಾಯಿತು” ಎಂದು ಕುಂಜಿ ಕುಟುಂಬದ ಸದಸ್ಯರೊಬ್ಬರು ತಮ್ಮ ಅಸಹಾಯಕತೆಯನ್ನು ಹೇಳಿಕೊಂಡಿದ್ದಾರೆ.

ಹಲವು ವರ್ಷಗಳಿಂದ ನೆರೆಯವರ ಹಿಂಸೆಗೆ ಬಳಲುತ್ತಿದ್ದೇವೆ ಎಂದು ಯರವ ಸಮುದಾಯದ ಈ ಕುಟುಂಬ ಆರೋಪಿಸಿದ್ದಾರೆ. ಸುಬ್ಬಯ್ಯ ನಮಗೆ ಸ್ಥಳವನ್ನು ಖಾಲಿ ಮಾಡುವಂತೆ ಅನೇಕ ಬಾರಿ ಒತ್ತಾಯಿಸಿದ್ದಾರೆ. ಆದಾಗ್ಯೂ, ಸುಬ್ಬಯ್ಯನ ಮರಣದ ನಂತರ ಶೋಷಣೆ ದುಪ್ಪಟ್ಟಾಯಿತು. ಅವರ ಮಗಳು ಸುಷ್ಮಾ ನಮ್ಮ ಸಮುದಾಯದ ವಿರುದ್ಧ ಹಲವು ಬಾರಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತ, ನ್ಯಾಯಾಲಯದ ಆದೇಶದಲ್ಲಿ ಸರ್ವೇ ನಂ. 218/8 ಅನ್ನು ತೆರವುಒಳಿಸಲು ಆದೇಶಿಸಲಾಗಿದೆ. ಆದಾಗ್ಯೂ, ಕುಂಜಿಯವರು ಆರ್‌ಟಿಸಿ ಸರ್ವೇ ನಂ. 215/8ರಲ್ಲಿ ವಾಸಿಸುತ್ತಿದ್ದರು ಎಂದು ದೃಢಪಡಿಸಿದೆ. ಅದು ವೇರಿಂಗ್ ಕುಟುಂಬಕ್ಕೆ ಸೇರಿದ್ದಾಗಿದ್ದು, ಆ ಸ್ಥಳದಲ್ಲಿ ತೆರವುಗೊಳಿಸಲು ಯಾವುದೇ ರೀತಿಯಲ್ಲೂ ಆದೇಶಿಸಲಾಗಿಲ್ಲ.

ಮನೆ ನೆಲಸಮದ ಬಗ್ಗೆ ಯರವ ಕುಟುಂಬದವರು ಗೋಣಿಕೊಪ್ಪಲು ಪೊಲೀಸರನ್ನು ಸಂಪರ್ಕಿಸಿದಾಗ, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ. ಆದಾಗ್ಯೂ, ಕುಟುಂಬವು ನ್ಯಾಯವನ್ನು ಕಂಡುಕೊಳ್ಳುವ ನಿರೀಕ್ಷೆಯಲ್ಲಿದ್ದು, ಶೀಘ್ರದಲ್ಲೇ ಎಸ್‌ಪಿಯನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...