Homeರಂಜನೆಕ್ರೀಡೆಏಕದಿನ ಪಂದ್ಯದಲ್ಲಿ ಸಚಿನ್‌ ದಾಖಲೆ ಮುರಿದ ಕೊಹ್ಲಿ

ಏಕದಿನ ಪಂದ್ಯದಲ್ಲಿ ಸಚಿನ್‌ ದಾಖಲೆ ಮುರಿದ ಕೊಹ್ಲಿ

- Advertisement -
- Advertisement -

ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಮಾದರಿಯಲ್ಲಿ ಸಾರ್ವಕಾಲಿಕ ಶ್ರೇಷ್ಠ ದಾಖಲೆ ಮಾಡಿದ್ದಾರೆ.

ಮುಂಬೈನ ವಾಂಖೇಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಯಲ್ಲಿ ನ್ಯೂಝಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಸಚಿನ್ ತೆಂಡುಲ್ಕರ್ ಅವರ 452 ಪಂದ್ಯಗಳಲ್ಲಿ 49 ಶತಕದ ದಾಖಲೆಯನ್ನು ಮುರಿದಿದ್ದಾರೆ.

ಸಚಿನ್ ತೆಂಡುಲ್ಕರ್ 452 ಪಂದ್ಯಗಳಲ್ಲಿ 49 ಶತಕದೊಂದಿಗೆ ಅತೀ ಹೆಚ್ಚು ಶತಕ ಬಾರಿಸಿದ ಕ್ರಿಕೆಟಿಗರಾಗಿದ್ದರು.  ಈ ದಾಖಲೆ ಮುರಿದ ವಿರಾಟ್ ಕೊಹ್ಲಿ 290 ಪಂದ್ಯಗಳಲ್ಲಿ 50 ಏಕದಿನ ಶತಕ ಸಿಡಿಸಿದ್ದಾರೆ.

2023ರ ವಿಶ್ವಕಪ್‌ನಲ್ಲಿ ಕೊಹ್ಲಿ 673ರನ್ ಗಳನ್ನು ಗಳಿಸಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ ಒಂದೇ ವಿಶ್ವಕಪ್ ಟೂರ್ನಿಯಲ್ಲಿ 600+ ರನ್‌ಗಳನ್ನು ಗಳಿಸಿದ 3ನೇ ಭಾರತೀಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಈಗ ವಿಶ್ವಕಪ್ ಟೂರ್ನಿಯಲ್ಲಿ, ಕೇವಲ 10 ಇನ್ನಿಂಗ್ಸ್ ನಲ್ಲಿ ಕೊಹ್ಲಿ ಗರಿಷ್ಠ ರನ್ ದಾಖಲಿಸಿರುವ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಸಚಿನ್ ತೆಂಡೂಲ್ಕರ್ 2003ರಲ್ಲಿ ಟೂರ್ನಿಯೊಂದರಲ್ಲಿ ಗರಿಷ್ಠ ಅರ್ಧ ಶತಕ ದಾಖಲಿಸಿದ್ದ ದಾಖಲೆಯನ್ನು ಈ ಹಿಂದೆ ಕೊಹ್ಲಿ ಮುರಿದಿದ್ದರು. ಸಚಿನ್ ತೆಂಡೂಲ್ಕರ್ 2003ರ ಟೂರ್ನಿಯಲ್ಲಿ 673ರನ್ ಗಳಿಸಿದ್ದರು. ವಿರಾಟ್ ಕೊಹ್ಲಿ ಸಾಧನೆಗೆ ಮೆಚ್ಚಿ ಸಚಿನ್ ತೆಂಡೂಲ್ಕರ್ ಅಭಿನಂದಿಸಿದ್ದಾರೆ.

ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಭಾರತ ತಂಡದಲ್ಲಿ ನಾಯಕ ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಪ್ರಾರಂಭಿಸಿದ್ದರು. ಭಾರತ ತಂಡ ನ್ಯೂಝಿಲ್ಯಾಂಡ್ ವಿರುದ್ದ 43.3 ಓವರ್ ಗಳಲ್ಲಿ 321 ರನ್ ಪೇರಿಸಿ ಒಂದು ವಿಕೆಟ್ ಕಳೆದುಕೊಂಡಿದೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹುಬ್ಬಳ್ಳಿ : ಕೈ ಕೈ ಮಿಲಾಯಿಸಿಕೊಂಡ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು

0
ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಖಾಸಗಿ ಹೋಟೆಲ್ ಮುಂಭಾಗ ಇಂದು (ಏ.30) ಮಧ್ಯಾಹ್ನ ನಡೆದಿದೆ. ಜೆಡಿಎಸ್‌ ಪಕ್ಷ ಖಾಸಗಿ ಹೋಟೆಲ್‌ನಲ್ಲಿ ಉತ್ತರ ಕರ್ನಾಟಕದ 14...