Homeಕರ್ನಾಟಕಕೋಲಾರ | ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ಆರಂಭ

ಕೋಲಾರ | ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ಆರಂಭ

- Advertisement -
- Advertisement -

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಇಂದು (ನ.11, 2025) ಚುನಾವಣಾ ಆಯೋಗ ಮರು ಮತ ಎಣಿಕೆ ಕೈಗೊಂಡಿದೆ.

ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಹೀಗಾಗಿ, ಫಲಿತಾಂಶವನ್ನು ಪ್ರಕಟಿಸುವಂತಿಲ್ಲ. ಈ ಹಿನ್ನೆಲೆ ಮತ ಎಣಿಕೆ ಕೇಂದ್ರಕ್ಕೆ ಮಾಧ್ಯಮದವರಿಗೆ ನಿರ್ಬಂಧ ವಿಧಿಸಲಾಗಿದೆ ಮತ್ತು ಬಿಗಿ ಭದ್ರತೆ ಏರ್ಪಡಿಸಲಾಗಿದೆ ವರದಿಯಾಗಿದೆ.

ಕೋಲಾರ ನಗರದ ಹೊರವಲಯ ಟಮಕದಲ್ಲಿರುವ ತೋಟಗಾರಿಕೆ ಮಹಾವಿದ್ಯಾಲಯ ಆವರಣದಲ್ಲಿ ಮರು ಮತ ಎಣಿಕೆ ಕೇಂದ್ರ ಸ್ಥಾಪಿಸಲಾಗಿದೆ. ಭದ್ರತೆಗಾಗಿ ಎಣಿಕೆ ಕೇಂದ್ರದ ಸುತ್ತಲೂ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಿಸಿಟಿವಿ ಕಣ್ಗಾವಲು (360 ಡಿಗ್ರಿ ಕ್ಯಾಮರಾಗಳು ಸೇರಿದಂತೆ) ಅಳವಡಿಸಲಾಗಿದೆ ಮತ್ತು ಸಂಪೂರ್ಣ ಪ್ರಕ್ರಿಯೆಯ ವಿಡಿಯೋ ರೆಕಾರ್ಡ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ ನಂಜೇಗೌಡ 248 ಮತಗಳ ಅಲ್ಪ ಅಂತರದಿಂದ ಬಿಜೆಪಿಯ ಕೆ.ಎಸ್ ಮಂಜುನಾಥ್ ಗೌಡ ವಿರುದ್ದ ಗೆಲುವು ಸಾಧಿಸಿದ್ದರು.

ಇದನ್ನು ಪ್ರಶ್ನಿಸಿ ಮಂಜುನಾಥ್ ಗೌಡ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. “ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ. ಇತರ ಕ್ಷೇತ್ರಗಳಂತೆ ಎಣಿಕೆ ಪ್ರಕ್ರಿಯೆಯ ವಿಡಿಯೋ ರೆಕಾರ್ಡಿಂಗ್ ಮಾಡಿಲ್ಲ. ಎಣಿಕೆ ಹಾಲ್‌ನಲ್ಲಿ ಅನಧಿಕೃತ ವ್ಯಕ್ತಿಗಳು ಇದ್ದರು. ಮತಗಳ ಸಂಖ್ಯೆ ಹೊಂದಾಣಿಕೆಯಾಗಿಲ್ಲ ಇತ್ಯಾದಿ ಗಂಭೀರ ಆರೋಪಗಳನ್ನು ಮಂಜುನಾಥ ಗೌಡ ಮಾಡಿದ್ದರು.

ಈ ಸಂಬಂಧ ಸೆಪ್ಟೆಂಬರ್ 2025ರಲ್ಲಿ ಆದೇಶ ಹೊರಡಿಸಿ ಹೈಕೋರ್ಟ್, ಮತ ಎಣಿಕೆ ಪಾರದರ್ಶಕವಾಗಿ ನಡೆದಿಲ್ಲ ಎಂದು ನಂಜೇಗೌಡ ಅವರ ಆಯ್ಕೆಯನ್ನು ರದ್ದಗೊಳಿಸಿತ್ತು ಮತ್ತು ನಾಲ್ಕು ವಾರಗಳಲ್ಲಿ ಮರು ಮತ ಎಣಿಕೆಗೆ ಆದೇಶಿಸಿತ್ತು.

ತನ್ನ ಆಯ್ಕೆ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ನಂಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. 2025ರ ಅಕ್ಟೋಬರ್ 14ರಂದು ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್, ನಂಜೇಗೌಡ ಅವರ ಆಯ್ಕೆ ರದ್ದುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ತಡೆ ಕೊಟ್ಟಿದೆ. ಆದರೆ, ಮರು ಮತ ಎಣಿಕೆ ನಡೆಸಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಡಿಜಿಟಲ್ ಡ್ಯಾಶ್‌ಬೋರ್ಡ್‌, 24X7 ಆಸ್ಪತ್ರೆ ಬೆಂಬಲ : ಪೋಕ್ಸೋ ಸಂತ್ರಸ್ತರ ಪುನರ್ವಸತಿಗೆ ಮಾದರಿ ಎಸ್‌ಒಪಿ ಬಿಡುಗಡೆ ಮಾಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...