Homeಕರ್ನಾಟಕಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

- Advertisement -
- Advertisement -

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು,  ಕೆ.ವಿ.ಗೌತಮ್ ಅವರಿಗೆ ಟಿಕೆಟ್‌ ನೀಡಿದೆ.

ಈ ಕುರಿತು ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು,  ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸಚಿವ ಕೆ.ಎಚ್ ಮುನಿಯಪ್ಪ ಮತ್ತು ಕೋಲಾರ ಜಿಲ್ಲೆಯ ಶಾಸಕರ ನಡುವೆ ಜಟಾಪಟಿ ನಡೆದಿತ್ತು. ಸಚಿವ ಕೆ.ಹೆಚ್‌ ಮುನಿಯಪ್ಪ ಮತ್ತು ಮಾಜಿ ಸಚಿವ ಕೆ.ಆರ್‌ ರಮೇಶ್ ಕುಮಾರ್ ಬಣಗಳ ನಡುವೆ ಕಿತ್ತಾಟ ನಡೆದಿದೆ. ಮುನಿಯಪ್ಪ ಸಂಬಂಧಿಕರಿಗೆ ಟಿಕೆಟ್ ನೀಡುವುದಕ್ಕೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತಪಡಿಸಿ ರಾಜೀನಾಮೆ ಬೆದರಿಕೆ ಹಾಕಿದ್ದರು. ಅತ್ತ ಮುನಿಯಪ್ಪ ಬಣ ತಮ್ಮವರಿಗೇ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದರು. ಈ ಕುರಿತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಸಂಧಾನ ಸಭೆಯೂ ನಡೆದಿತ್ತು. ಇದೀಗ ಎಲ್ಲಾ ಗೊಂದಲಗಳಿಗೆ ತೆರೆಬಿದ್ದಿದ್ದು, ಕೋಲಾರದ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿದೆ.

ನಿನ್ನೆ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಬಾಕಿ ಇದ್ದ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಬಳ್ಳಾರಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು.

ಚಿಕ್ಕಬಳ್ಳಾಪುರದಲ್ಲಿ ರಕ್ಷಾ ರಾಮಯ್ಯ ಅವರಿಗೆ ನೀಡಲಾಗಿದೆ. ಈ ಕ್ಷೇತ್ರದ ಟಿಕೆಟ್ ತಮಗೇ ನೀಡಬೇಕೆಂದು ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ ಎನ್‌.ಹೆಚ್‌ ಶಿವಶಂಕರ ರೆಡ್ಡಿ ಮತ್ತು ಬಾಗೇಪಲ್ಲಿ ಶಾಸಕ ಎಸ್‌.ಎನ್‌ ಸುಬ್ಬಾರೆಡ್ಡಿ ಪಟ್ಟು ಹಿಡಿದಿದ್ದರು. ಅವರನ್ನು ಮನವೊಲಿಸಿದ ಕೈ ನಾಯಕರು, ರಕ್ಷಾ ರಾಮಯ್ಯಗೆ ಟಿಕೆಟ್ ನೀಡಿದ್ದಾರೆ.

ಚಾಮರಾಜನಗರದಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಹೆಚ್‌.ಸಿ ಮಹದೇವಪ್ಪ ಅವರ ಮಗ ಸುನಿಲ್ ಬೋಸ್‌ಗೆ ಟಿಕೆಟ್ ನೀಡಲಾಗಿದೆ. ಸುನಿಲ್ ಬೋಸ್‌ಗೆ ಟಿಕೆಟ್ ನೀಡುವುದಕ್ಕೆ ಕ್ಷೇತ್ರದ ಕೆಲ ಕೈ ಶಾಸಕರು ವಿರೋಧ ವ್ಯಕ್ತಪಡಿಸಿದ್ದರು. ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ನಾಯಕರು, ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಂಡೂರು ಶಾಸಕ ಇ. ತುಕರಾಂ ಅವರಿಗೆ ನೀಡಲಾಗಿದೆ.

ಇದನ್ನು ಓದಿ: ಅಬಕಾರಿ ನೀತಿ ಹಗರಣ: ದೆಹಲಿಯ ಮತ್ತೋರ್ವ ಸಚಿವರಿಗೆ ED ಸಮನ್ಸ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಬಡವರೂ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಮುಸ್ಲಿಮರ ಬಗ್ಗೆ ಮಾತ್ರ ಏಕೆ ಮಾತನಾಡುತ್ತಾರೆ..’; ಪ್ರಧಾನಿ ಮೋದಿ...

0
'ದೇಶದ ಬಡವರು ಅವರ ಆರ್ಥಿಕ ಪರಿಸ್ಥಿತಿಯಿಂದಾಗಿ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಮುಸ್ಲಿಮರ ಬಗ್ಗೆ ಮಾತನಾಡುತ್ತಿದ್ದಾರೆ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಟೀಕಿಸಿದ್ದಾರೆ. 'ಪ್ರತಿಪಕ್ಷಗಳ ಇಂಡಿಯಾ...