Homeಮುಖಪುಟವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ: ಕೋಲಾರದಲ್ಲಿ ಮತ್ತೊಂದು ಪ್ರಕರಣ ಬಯಲು

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ: ಕೋಲಾರದಲ್ಲಿ ಮತ್ತೊಂದು ಪ್ರಕರಣ ಬಯಲು

- Advertisement -
- Advertisement -

ಕೋಲಾರದಲ್ಲಿ ವಿದ್ಯಾರ್ಥಿಗಳನ್ನು ಶೌಚ ಗುಂಡಿಗಿಳಿಸಿ ಸ್ವಚ್ಛತೆ ಮಾಡಿಸಿದ ಪ್ರಕರಣ ಭಾರೀ ಸುದ್ದಿಯಾಗಿತ್ತು. ಇದೀಗ ಘಟನೆಯ ನೆನಪು ಮಾಸುವ ಮುನ್ನ ಕೋಲಾರದಲ್ಲಿ ಮತ್ತೊಂದು ಪ್ರಕರಣ ನಡೆದಿದ್ದು, ಕೋಲಾರ ಜಿಲ್ಲೆಯ ಬೈನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಲಾಗಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜನವರಿ 30ರಂದು ಸರ್ಕಾರಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವುದು ಕ್ಯಾಮರಾದಲ್ಲಿ ದಾಖಲಾಗಿದೆ. ಶಾಲಾ ಬಾಲಕಿ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೋವನ್ನು ಸ್ಥಳೀಯರು ಸೆರೆ ಹಿಡಿದಿದ್ದು, ಶಾಲಾ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ತೊಡಗಿಸದಂತೆ ಎಚ್ಚರಿಕೆ ನೀಡಿದ್ದರು. ಇದಲ್ಲದೆ ಶಿಕ್ಷಣ ಇಲಾಖೆ ಈ ಕುರಿತು ಸುತ್ತೋಲೆಯನ್ನು ಹೊರಡಿಸಿ ಕಠಿಣ ಕ್ರಮದ ಎಚ್ಚರಿಕೆಯನ್ನು ಕೂಡ ನೀಡಿತ್ತು. ಈ ಆದೇಶವನ್ನು ಗಾಳಿಗೆ ತೂರಿ ಶಿಕ್ಷಕರು ವಿದ್ಯಾರ್ಥಿನಿಯ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿನಿ ತಾನೇ ಶೌಚಾಲಯ ಕ್ಲೀನ್ ಮಾಡಿರುವುದಾಗಿ ಹೇಳಿಕೆ ನೀಡಿದ್ದು, ವಿದ್ಯಾರ್ಥಿನಿಯನ್ನು ಬೆದರಿಸಿ ಶಿಕ್ಷಕ ಆಂಜಿನೇಯ ರೆಡ್ಡಿ ಈ ರೀತಿ ಹೇಳಿಕೆ ಕೊಡಿಸಿದ್ದಾರೆ. ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

2023ರ ಡಿಸೆಂಬರ್‌ 17ರಂದು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಯ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದರು.

ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳ ಕೈಯಿಂದ ಶಿಕ್ಷಕರು ಶೌಚಾಲಯ ಕ್ಲೀನ್ ಮಾಡಿಸಿಕೊಂಡಿರುವ ಘಟನೆ ಬಯಲಾಗಿತ್ತು. ಕಲಿಯುವುದಕ್ಕೆಂದು ಶಾಲೆಗೆ ಬರುವ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವುದು ಹೇಯ ಕೃತ್ಯ ಎಂದು ಸಾರ್ವಜನಿಕರು ಶಾಲಾ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಾದ ಬಳಿಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದ ಭದ್ರಾವತಿಯ ನೇರಲೆಕೆರೆ ಶಾಲೆಯಲ್ಲಿ ಮಕ್ಕಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹರಡಿತ್ತು. ವಿಡಿಯೋ ನೋಡಿ ಆಕ್ರೋಶಗೊಂಡ ಪೋಷಕರು ಪ್ರತಿಭಟನೆ ನಡೆಸಿದ್ದರು.

ಶಿಕ್ಷಣ ಇಲಾಖೆ ಸುತ್ತೋಲೆ: 

ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯ ಸ್ವಚ್ಛತೆಗೆ ಬಳಸಿಕೊಂಡಲ್ಲಿ ಎಫ್‍ಐಆರ್ ದಾಖಲಿಸುವುದಾಗಿ ಹೇಳಿದ್ದಾರೆ.

ಇಲಾಖೆಯಿಂದ ಹೊರಡಿಸಲಾಗುವ ಸೂಚನೆ, ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು.  ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುವಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಲ್ಲಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರವಿರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ, ಸಿಬ್ಬಂದಿಯ ಕರ್ತವ್ಯ. ಸರ್ಕಾರಿ ಮಾತ್ರವಲ್ಲದೆ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಸಹ ಇಂತಹ ಯಾವುದೇ ಪ್ರಕರಣಗಳು ನಡೆಯಬಾರದು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

ಶಾಲೆಗೆ ನೀಡುತ್ತಿರುವ ಅನುದಾನವನ್ನು ಪ್ರಥಮ ಪ್ರಾಶಸ್ತ್ರದಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್‌ಡಿಎಂಸಿ) ಸಹಕಾರದೊಂದಿಗೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಶೌಚಾಲಯಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು .ಶಾಲೆಗಳಿಗೆ ಕಾಲ-ಕಾಲಕ್ಕೆ ಖುದ್ದು ಭೇಟಿ ನೀಡಿ ಶಾಲೆಗಳಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕವಾದ ಬಳಕೆಗೆ ಯೋಗ್ಯವಾದ ಶೌಚಾಲಯಗಳು ಲಭ್ಯವಿರುವುದನ್ನು ಪರಿಶೀಲಿಸಬೇಕು. ಶಾಲಾ ಅವಧಿಯಲ್ಲಿ  ಶೌಚಾಲಯಗಳಿಗೆ ಬೀಗ ಹಾಕದೆ ವಿದ್ಯಾರ್ಥಿಗಳ ಉಪಯೋಗಕ್ಕೆ ಅವಕಾಶ ಕಲ್ಪಿಸಿರುವುದನ್ನು ಖುದ್ದಾಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳಿ ಎಂದು ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಕೂಡ ಸೂಚಿಸಲಾಗಿದೆ.

ಶಾಲೆಯಲ್ಲಿ ಪರಿಶೀಲನೆ ವೇಳೆ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ಬಳಸಿಕೊಂಡಿರುವುದು ಗಮನಕ್ಕೆ ಬಂದಲ್ಲಿ ತಕ್ಷಣವೇ ಕ್ರಮವಹಿಸಲು ಅನುವಾಗುವಂತೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಉಪನಿರ್ದೇಶಕರಿಗೆ(ಆಡಳಿತ) ತಕ್ಷಣ ವರದಿ ಮಾಡಲು ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಿಳಿಸಲಾಗಿದೆ.

ಇದನ್ನು ಓದಿ: ಕೇರಳದಲ್ಲಿ ‘ಪೌರತ್ವ ತಿದ್ದುಪಡಿ ಕಾಯ್ದೆ’ ಜಾರಿಗೊಳಿಸುವುದಿಲ್ಲ: ಪಿಣರಾಯ್‌ ವಿಜಯನ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....