ಕೋಲ್ಕತ್ತಾ ಆರ್‌ಜಿ ಕರ್ ಆಸ್ಪತ್ರೆಯ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಲು ವಿಳಂಬ ಮಾಡಿರುವುದನ್ನು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರಿಯಾನ್ ಶುಕ್ರವಾರ ಪ್ರಶ್ನಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಆರ್‌ಜಿ ಕಾರ್ ಸಂತ್ರಸ್ತೆಯ ಕುಟುಂಬವು ನ್ಯಾಯಕ್ಕಾಗಿ ಎಷ್ಟು ದಿನ ಕಾಯಬೇಕು” ಎಂದು ಅವರು ಪ್ರಶ್ನಿಸಿದ್ದು, ಪ್ರಕರಣದಲ್ಲಿ “ತ್ವರಿತ ನ್ಯಾಯ” ನೀಡುವಂತೆ ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಪ್ರಕರಣದ ಮೇಲ್ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ ಎಂದು ಹೇಳಿರುವ ಅವರು, “ಸಿಬಿಐ ಆರೋಪಿಗಳು ಮತ್ತು ಎಲ್ಲಾ ಸಾಕ್ಷ್ಯಗಳನ್ನು ಹೊಂದಿದೆ. ಅದು ಏಕೆ ಆರೋಪಪಟ್ಟಿ ಸಲ್ಲಿಸುತ್ತಿಲ್ಲ ಮತ್ತು ವಿಚಾರಣೆಯನ್ನು ಪ್ರಾರಂಭಿಸುತ್ತಿಲ್ಲ?” ಎಂದು ಕೇಳಿದ್ದಾರೆ.
“ನಾವೆಲ್ಲರೂ ತ್ವರಿತ ನ್ಯಾಯವನ್ನು ಬಯಸುತ್ತೇವೆ. ಸಿಬಿಐ ಏಕೆ ವಿಚಾರಣೆಯನ್ನು ವಿಳಂಬಗೊಳಿಸುತ್ತಿದೆ? ನಮಗೆ ಉತ್ತರಗಳು ಬೇಕಾಗಿವೆ” ಒ’ಬ್ರಿಯಾನ್ ಹೇಳಿದ್ದಾರೆ.
How long will the RG Kar victim’s family have to wait for justice?
A) Supreme C is monitoring the case
B) CBI has the accused & all the evidence. Why is it not filing a chargesheet & starting trial?
We all want swift justice
Why is CBI delaying the trial? We need answers
— Derek O'Brien | ডেরেক ও'ব্রায়েন (@derekobrienmp) September 13, 2024
ಈ ನಡುವೆ ಧರಣಿ ನಿರತ ಕಿರಿಯ ವೈದ್ಯರು ಮತ್ತು ಬಂಗಾಳ ಸರ್ಕಾರದ ನಡುವಿನ ಆರ್‌ಜಿ ಕರ್ ಆಸ್ಪತ್ರೆ ಬಿಕ್ಕಟ್ಟನ್ನು ಪರಿಹರಿಸುವ ಉದ್ದೇಶಿತ ಮಾತುಕತೆ ವಿಫಲವಾಗಿದೆ. ಪಶ್ಚಿಮ ಬಂಗಾಳದ ಆರೋಗ್ಯ ಇಲಾಖೆಯ ಪ್ರಧಾನ ಕಚೇರಿಯ ಹೊರಗೆ ಕಿರಿಯ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಸತತ ಮೂರನೇ ದಿನ ಶುಕ್ರವಾರ ಕೂಡಾ ಮುಂದುವರೆದಿದೆ.
ಇದನ್ನೂಓದಿ: ಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 26 ವೈದ್ಯಕೀಯ ಕಾಲೇಜುಗಳನ್ನು ಪ್ರತಿನಿಧಿಸುವ ಸುಮಾರು 30 ವೈದ್ಯಾಧಿಕಾರಿಗಳ ತಂಡ, ಮುಖ್ಯಮಂತ್ರಿಯ ಭೇಟಿ ಮತ್ತು ಮಾತುಕತೆಯನ್ನು ನೇರ ಪ್ರಸಾರ ಮಾಡುವಂತೆ ಬೇಡಿಕೆ ಇಟ್ಟಿತ್ತು. ಆದರೆ ಸರ್ಕರವು ಈ ಬೇಡಿಕೆಯನ್ನು ನಿರಾಕರಿಸಿತ್ತು. ಪ್ರಕರಣವು ನ್ಯಾಯಾಧಿಕರಣ ಮತ್ತು ಸುಪ್ರೀಂ ಕೋರ್ಟ್‌ನಲ್ಲಿರುವುದರಿಂದ ಕಿರಿಯ ವೈದ್ಯರೊಂದಿಗಿನ ಸಭೆಯನ್ನು ಅವರ ಬೇಡಿಕೆಯಂತೆ ಲೈವ್ ಸ್ಟ್ರೀಮ್ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದರು.
ಸಭೆಯನ್ನು ರೆಕಾರ್ಡ್ ಮಾಡಲು ಮತ್ತು ಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ನ ಅನುಮತಿಯೊಂದಿಗೆ ರೆಕಾರ್ಡಿಂಗ್ ಅನ್ನು ಅವರಿಗೆ ಹಸ್ತಾಂತರಿಸಲು ತನ್ನ ಸರ್ಕಾರವು ವ್ಯವಸ್ಥೆ ಮಾಡಿದೆ ಎಂದು ಅವರು ತಿಳಿಸಿದ್ದರು. ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರು ಪೊಲೀಸ್ ಆಯುಕ್ತರು, ಆರೋಗ್ಯ ಕಾರ್ಯದರ್ಶಿ, ಆರೋಗ್ಯ ಸೇವೆಗಳ ನಿರ್ದೇಶಕರು ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕರನ್ನು ಅಮಾನತುಗೊಳಿಸುವುದು ಸೇರಿದಂತೆ ಕೆಲವು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.
ಕಳೆದ ತಿಂಗಳು ಪಶ್ಚಿಮ ಬಂಗಾಳ ಸರ್ಕಾರ ನಡೆಸುತ್ತಿರುವ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಕರ್ತವ್ಯ ನಿರತ ಸ್ನಾತಕೋತ್ತರ ತರಬೇತಿ ವೈದ್ಯೆಯ ಶವ ಪತ್ತೆಯಾಗಿತ್ತು. ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿತ್ತು. ಕಲ್ಕತ್ತಾ ಹೈಕೋರ್ಟ್ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಿದ್ದು, ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.
ವಿಡಿಯೊ ನೋಡಿ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಾಮಕುಮಾರ್ ಅವರ ಮಾತುಗಳು


