Homeಮುಖಪುಟಕೋಲ್ಕತ್ತಾ ಮೃತ ವೈದ್ಯೆ ಫೋಟೋ ಶೇರ್ ಮಾಡಿ ಮಮತಾಗೆ ಬೆದರಿಕೆ; ಒಬ್ಬನ ಬಂಧನ

ಕೋಲ್ಕತ್ತಾ ಮೃತ ವೈದ್ಯೆ ಫೋಟೋ ಶೇರ್ ಮಾಡಿ ಮಮತಾಗೆ ಬೆದರಿಕೆ; ಒಬ್ಬನ ಬಂಧನ

- Advertisement -
- Advertisement -

ಆರ್‌ಜಿ ಕರ್ ವೈದ್ಯಕೀಯ ಕಾಲೇಜು-ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ವೈದ್ಯರ ಗುರುತನ್ನು ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದ ಆರೋಪದ ಮೇಲೆ ಕೋಲ್ಕತ್ತಾದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಈತನೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ತಲತಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಮಾಹಿತಿ ಪೋಸ್ಟ್ ಮಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ” ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಹೇಳಿದ್ದಾರೆ.

“ಇನ್‌ಸ್ಟಾಗ್ರಾಮ್ ಬಳಕೆದಾರ ಹೆಸರು ‘ಕೀರ್ತಿಸೋಶಿಯಲ್’ ಹೊಂದಿರುವ ವ್ಯಕ್ತಿ ಇತ್ತೀಚೆಗೆ ಆರ್‌ಜಿ ಕರ್ ಎಂಸಿಎಚ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿದ ಮೂರು ಕಥೆಗಳನ್ನು ಅಪ್‌ಲೋಡ್ ಮಾಡಿದ್ದು, ಬಲಿಪಶುವಿನ ಚಿತ್ರ ಮತ್ತು ಗುರುತನ್ನು ಬಹಿರಂಗಪಡಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅದೇ ಸಮಯದಲ್ಲಿ, ಆರೋಪಿಯು ಸಿಎಂ ವಿರುದ್ಧ ಆಕ್ಷೇಪಾರ್ಹ ಕಾಮೆಂಟ್‌ಗಳು ಮತ್ತು ಜೀವ ಬೆದರಿಕೆಗಳನ್ನು ಒಳಗೊಂಡಿರುವ ಎರಡು ಪೋಸ್ಟ್‌ ಹಂಚಿಕೊಂಡಿದ್ದಾರೆ. ಅವು ಸ್ವಭಾವತಃ ತುಂಬಾ ಪ್ರಚೋದನಕಾರಿ ಮತ್ತು ಸಾಮಾಜಿಕ ಅಶಾಂತಿಯನ್ನು ಸೃಷ್ಟಿಸಿರಬಹುದು ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಬಹುದು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸತತ 4 ನೇ ದಿನವೂ ಮುಂದುವರಿದ ಮಾಜಿ ಪ್ರಾಂಶುಪಾಲರ ವಿಚಾರಣೆ

ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸತತ ನಾಲ್ಕನೇ ದಿನ ಸೋಮವಾರ ಕಾರ್ ಮೆಡಿಕಲ್ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಘೋಷ್ ಅವರು ಸೋಮವಾರ ಬೆಳಗ್ಗೆ ಸಿಜಿಒ ಕಾಂಪ್ಲೆಕ್ಸ್‌ನಲ್ಲಿರುವ ಸಿಬಿಐನ ನಗರ ಕಚೇರಿಯನ್ನು ತಲುಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವೈದ್ಯರ ಸಾವಿನ ಸುದ್ದಿ ತಿಳಿದ ನಂತರ ಅವರು ಯಾರನ್ನು ಸಂಪರ್ಕಿಸಿದರು ಮತ್ತು ಸುಮಾರು ಮೂರು ಗಂಟೆಗಳ ಕಾಲ ಪೋಷಕರನ್ನು ಏಕೆ ಕಾಯುವಂತೆ ಮಾಡಿದರು ಎಂದು ಘೋಷ್ ಅವರನ್ನು ಕೇಳಲಾಯಿತು.

ಘಟನೆಯ ನಂತರ ಆಸ್ಪತ್ರೆಯ ಸೆಮಿನಾರ್ ಹಾಲ್ ಬಳಿಯ ಕೊಠಡಿಗಳ ನವೀಕರಣಕ್ಕೆ ಆದೇಶಿಸಿದವರು ಯಾರು ಎಂದು ಸಹ ಮಾಜಿ ಪ್ರಾಂಶುಪಾಲರನ್ನು ಪ್ರಶ್ನಿಸಲಾಯಿತು.

ಶುಕ್ರವಾರದಿಂದ ಕಳೆದ ಮೂರು ದಿನಗಳಲ್ಲಿ ಸಿಬಿಐ ಅಧಿಕಾರಿಗಳು ಘೋಷ್ ಅವರನ್ನು ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಅವರ ಮೊಬೈಲ್ ಫೋನ್ ಕಾಲ್ ಲಿಸ್ಟ್ ವಿವರಗಳು ಹಾಗೂ ಅವರ ವಾಟ್ಸಾಪ್ ಚಾಟ್ ಪಟ್ಟಿಯನ್ನು ಸಹ ಪರಿಶೀಲಿಸುತ್ತಿದ್ದಾರೆ.

ಆರ್ಥೋಪೆಡಿಕ್ ವೈದ್ಯರಾಗಿದ್ದ ಘೋಷ್ ಅವರು ಆಗಸ್ಟ್ 9 ರಂದು ಮಹಿಳೆಯ ಶವ ಪತ್ತೆಯಾದ ಎರಡು ದಿನಗಳ ನಂತರ ಆರ್ ಜಿ ಕರ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಅವರು ದಾಳಿಯ ಭಯವನ್ನು ವ್ಯಕ್ತಪಡಿಸಿದ್ದರು, ಕಲ್ಕತ್ತಾ ಹೈಕೋರ್ಟ್‌ನಿಂದ ರಕ್ಷಣೆ ಪಡೆಯಲು ಅವರ ವಕೀಲರನ್ನು ಸಂಪರ್ಕಿಸಿದ್ದು, ಏಕ ಪೀಠದ ಮೊರೆ ಹೋಗುವಂತೆ ಕೋರ್ಟ್ ಸೂಚಿಸಿದೆ.

ಆಗಸ್ಟ್ 9 ರಂದು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯರ ಶವ ಪತ್ತೆಯಾಗಿತ್ತು. ಈ ಸಂಬಂಧ ಪೊಲೀಸರು ಮರುದಿನ ನಾಗರಿಕ ಸ್ವಯಂಸೇವಕನನ್ನು ಬಂಧಿಸಿದರು.

ಇದನ್ನೂ ಓದಿ; ಚಂಪೈ ಸೊರೇನ್ ಬಿಜೆಪಿ ಸೇರುವ ಸಾಧ್ಯತೆ; ಜಾರ್ಖಂಡ್ ರಾಜಕೀಯದ ಮೇಲೆ ಬೀರುವ ಪರಿಣಾಮವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...