Homeಮುಖಪುಟಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಬಂಗಾಳದಲ್ಲಿ ಪ್ರತಿಭಟನೆ ಮುಂದುವರಿಸಿದ ವೈದ್ಯರು

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಬಂಗಾಳದಲ್ಲಿ ಪ್ರತಿಭಟನೆ ಮುಂದುವರಿಸಿದ ವೈದ್ಯರು

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಮಹಿಳಾ ವೈದ್ಯೆಗೆ ನ್ಯಾಯಕ್ಕಾಗಿ ಒತ್ತಾಯಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿ ಧರಣಿ ನಿರತ ಕಿರಿಯ ವೈದ್ಯರು ತಮ್ಮ ಹೋರಾಟ ಮುಂದುವರಿಸಿದ್ದರಿಂದ ಸತತ ಹತ್ತನೇ ದಿನವಾದ ಭಾನುವಾರ ಪಶ್ಚಿಮ ಬಂಗಾಳದಾದ್ಯಂತ ಆರೋಗ್ಯ ಸೇವೆಗಳ ಮೇಲೆ ಪರಿಣಾಮ ಬೀರಿದೆ.

ಭಾನುವಾರ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗಗಳು (ಒಪಿಡಿ) ಮುಚ್ಚಿರುವುದರಿಂದ ತುರ್ತು ಚಿಕಿತ್ಸಾ ವಿಭಾಗಕ್ಕೆ ಹಿರಿಯ ವೈದ್ಯರು ಹಾಜರಾಗಿ ಚಿಕಿತ್ಸೆ ನೀಡುತ್ತಿದ್ದರೂ ನೂಕುನುಗ್ಗಲು ಕಡಿಮೆಯಾಗಿತ್ತು.

“ನಾವು ಆರೋಗ್ಯ ಸೇವೆಗಳ ಮೇಲೆ ಪರಿಣಾಮ ಬೀರುವುದಿಲ್ಲ. ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಾವು ಅರ್ಥಮಾಡಿಕೊಳ್ಳಬಹುದು. ಆದರೆ, ಕರ್ತವ್ಯನಿರತ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆಯಾದ ಈ ಸಂದರ್ಭದಲ್ಲಿ ನಮ್ಮ ಪ್ರತಿಭಟನೆ ಬಹಳ ಪ್ರಸ್ತುತವಾಗಿದೆ. ನಾವು ಕೆಲಸಕ್ಕೆ ಬರುವಾಗ ಇದನ್ನು ನಿರೀಕ್ಷಿಸುತ್ತೇವೆಯೇ? ನಾವು ಹೋರಾಟ ಮಾಡುತ್ತೇವೆ. ನಮ್ಮ ಸಹೋದರಿಗೆ ನ್ಯಾಯ ಸಿಗುವವರೆಗೆ ಮತ್ತು ಸರ್ಕಾರ ನಮಗೆ ಸಂಪೂರ್ಣ ಭದ್ರತೆಯನ್ನು ಒದಗಿಸುವವರೆಗೆ ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ” ಎಂದು ಆಕ್ರೋಶಗೊಂಡ ವೈದ್ಯರೊಬ್ಬರು ತಿಳಿಸಿದರು.

ಮಹಿಳಾ ಸ್ನಾತಕೋತ್ತರ ತರಬೇತಿ ವೈದ್ಯೆಯ ಮೃತದೇಹವು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್ 9 ರಂದು ಪತ್ತೆಯಾಗಿದೆ. ಮರುದಿನ ಅಪರಾಧದಲ್ಲಿ ಭಾಗಿಯಾಗಿದ್ದಕ್ಕಾಗಿ ನಾಗರಿಕ ಸ್ವಯಂಸೇವಕನನ್ನು ಬಂಧಿಸಲಾಯಿತು. ಆದಷ್ಟು ಬೇಗ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ಸಂತ್ರಸ್ತೆಯ ಮರಣೋತ್ತರ ಪರೀಕ್ಷೆಯ ವರದಿಯನ್ನು ಬಹಿರಂಗಗೊಳಿಸಬೇಕು ಎಂದು ಕಿರಿಯ ವೈದ್ಯರು ಒತ್ತಾಯಿಸುತ್ತಿದ್ದಾರೆ.

ಆಗಸ್ಟ್ 13 ರಂದು ಕಲ್ಕತ್ತಾ ಹೈಕೋರ್ಟ್ ಈ ಪ್ರಕರಣದ ತನಿಖೆಯನ್ನು ಕೋಲ್ಕತ್ತಾ ಪೊಲೀಸರಿಂದ ಆಗಸ್ಟ್ 14 ರಂದು ತನಿಖೆ ಆರಂಭಿಸಿದ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಲು ಆದೇಶಿಸಿತು.

ಇದನ್ನೂ ಓದಿ; ಆರ್‌ಜಿ ಕರ್ ಹಾಸ್ಪಿಟಲ್ ಕ್ರೈಮ್ ಸ್ಪಾಟ್ ನವೀಕರಣ; ‘ಅವಸರ ಏನಿತ್ತು..?’ ಎಂದು ಪ್ರಶ್ನಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...