Homeಮುಖಪುಟಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

- Advertisement -
- Advertisement -

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಕೋಲ್ಕತ್ತಾದ ಗಿರೀಶ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಶಾರದಾ ಪಾರ್ಕ್‌ನ ಚೋರ್‌ಬಗಾನ್ ಸಾರ್ವಜನಿಕ ದುರ್ಗೋತ್ಸವ ಸಮಿತಿಯ ಪೆಂಡಾಲ್‌ನಲ್ಲಿ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಪೊಲೀಸರು ಭಾನುವಾರ (ಅ.18) ಏಳು ಮಂದಿಯನ್ನು ಬಂಧಿಸಿದ್ದಾರೆ.

ಪೂಜಾ ಸಮಿತಿಯ ಕಾರ್ಯದರ್ಶಿ ರಾಜ್ ಕುಮಾರ್ ಸೆವ್ಡಾ ಅಲಿಯಾಸ್ ರಾಜಾ (48), ಉಪಾಧ್ಯಕ್ಷ ಶಾಂತನು ದುಬೆ (55) ಹಾಗೂ ಬಿದಿರಿನ ರಚನೆಯ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ಬಿಪ್ಲಬ್ ಮುಖರ್ಜಿ ಅಲಿಯಾಸ್ ಜಾಯ್ (48), ಜನಸಂದಣಿ ನಿರ್ವಹಣೆ ಹಾಗೂ ವಿಐಪಿ ಪಾಸ್‌ಗಳನ್ನು ಪರಿಶೀಲಿಸುವ ಜವಾಬ್ದಾರಿಯನ್ನು ಹೊಂದಿದ್ದ ಕೌಶಿಕ್ ಸಹಾ (53), ಜನಸಂದಣಿ ನಿರ್ವಹಣೆಯಲ್ಲಿ ತೊಡಗಿದ್ದ ಪಿಂಟು ಡೇ (51), ಖಾಸಗಿ ಭದ್ರತಾ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದ ಸುಮನ್ ಚಕ್ರವರ್ತಿ (30) ಮತ್ತು ರಾಜೇಶ್ ಪಾಲ್ (29) ಬಂಧಿತರು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ newindianexpress.com ವರದಿ ಮಾಡಿದೆ.

ಪೊಲೀಸರು, ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್‌ಗಳಾದ 105, 110 ಮತ್ತು 3(5) ರ ಅಡಿಯಲ್ಲಿ ಸಂಘಟಕರು ಹಾಗೂ ಇತರರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಶನಿವಾರ ಸಂಜೆ ಇದ್ದಕ್ಕಿದ್ದಂತೆ ಮಳೆ ಸುರಿದಿದ್ದರಿಂದ, ಪೆಂಡಾಲ್‌ನ ಹೊರಗೆ ಕಾಯುತ್ತಿದ್ದ ನೂರಾರು ಜನರು ಆಶ್ರಯ ಪಡೆಯಲು ಏಕಕಾಲದಲ್ಲಿ ಕಿರಿದಾದ ಪ್ರವೇಶ ದ್ವಾರದ ಮೂಲಕ ಪೆಂಡಾಲ್ ಒಳಗೆ ನುಗ್ಗಲು ಯತ್ನಿಸಿದ್ದು, ಈ ಸಂದರ್ಭದಲ್ಲಿ ಉಂಟಾದ ಭಾರಿ ನೂಕುನುಗ್ಗಲು ಕಾಲ್ತುಳಿತಕ್ಕೆ ಕಾರಣವಾಗಿದೆ. ಕೆಲವೆಡೆ ಪೆಂಡಾಲ್‌ ಭಾಗಶಃ ಕುಸಿದಿದೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಶನಿವಾರ ರಾತ್ರಿ ಘಟನಾ ಸ್ಥಳದ ಸಮೀಪವಿರುವ ಬೋಧನಾ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ, ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಮಧ್ಯರಾತ್ರಿಯ ಸುಮಾರಿಗೆ, ಈ ಘಟನೆಯ ತನಿಖೆ ನಡೆಸಲು ಕಲ್ಕತ್ತಾ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಜನಸಂದಣಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದು ಕಂಡುಬಂದರೆ, ‘ಚೋರ್‌ಬಗಾನ್ ಸಾರ್ವಜನಿಕ ದುರ್ಗೋತ್ಸವ ಸಮಿತಿ’ಯವರಾಗಲಿ ಅಥವಾ ಕೋಲ್ಕತ್ತಾ ಪೊಲೀಸರಾಗಲಿ, ಯಾರನ್ನೂ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕೋಲ್ಕತ್ತಾ ಪೊಲೀಸ್ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಪಶ್ಚಿಮ ಬಂಗಾಳ ಪೊಲೀಸ್‌ನ ಅಪರಾಧ ತನಿಖಾ ಇಲಾಖೆಯ (ಸಿಐಡಿ) ಹಿರಿಯ ಅಧಿಕಾರಿಗಳು ಕೂಡ ಈ ಎಸ್‌ಐಟಿ ಭಾಗವಾಗಿರುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈ ತಂಡದ ನೇತೃತ್ವ ವಹಿಸಲು ಹಾಲಿ ನ್ಯಾಯಾಧೀಶರೊಬ್ಬರನ್ನು ನೇಮಿಸುವಂತೆ ಕೋರಿ, ಮುಖ್ಯ ನ್ಯಾಯಮೂರ್ತಿ ಆರ್. ವಿ. ಘುಗೆ ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ನೀಡಲಿದ್ದು, ಮೃತರ ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ.

 





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...