ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ. ಉತ್ತರ ಕೋಲ್ಕತ್ತಾದ ಗಿರೀಶ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಶಾರದಾ ಪಾರ್ಕ್‌ನ ಚೋರ್‌ಬಗಾನ್ ಸಾರ್ವಜನಿಕ ದುರ್ಗೋತ್ಸವ ಸಮಿತಿಯ ಪೆಂಡಾಲ್‌ನಲ್ಲಿ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಪೊಲೀಸರು ಭಾನುವಾರ (ಅ.18) ಏಳು … Continue reading ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ