Homeಮುಖಪುಟಕೋಲ್ಕತ್ತಾ ಅತ್ಯಾಚಾರ ಪ್ರಕರಣ - ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಸಂಜಯ್ ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿ ಕೇಂದ್ರ ತನಿಖಾ ದಳ(ಸಿಬಿಐ)ವು ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಗುರುವಾರ ವರದಿ ಮಾಡಿದೆ. ಕೋಲ್ಕತ್ತಾ ಅತ್ಯಾಚಾರ ಪ್ರಕರಣ

ಸಿಪಿಐ ಇದನ್ನು “ಅಪರೂಪದಲ್ಲಿ ಅಪರೂಪದ” ಪ್ರಕರಣ ಎಂದು ಬಣ್ಣಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ. ನಗರದ ಸೀಲ್ಡಾ ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯಾಲಯವು ಶನಿವಾರ ಸಂಜಯ್‌ ರಾಯ್ ಅವರನ್ನು ಅಪರಾಧಿ ಎಂದು ಘೋಷಿಸಿತ್ತು. ಸೋಮವಾರ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.

ಕೇಂದ್ರ ತನಿಖಾ ದಳವು ಆರೋಪಿ ಸಂಜಯ್ ರಾಜ್‌ಗೆ ಮರಣದಂಡನೆ ವಿಧಿಸಲು ಕೋರಿತ್ತು, ಆದರೆ ನ್ಯಾಯಾಧೀಶ ಅನಿರ್ಬನ್ ದಾಸ್ ಅದಕ್ಕೆ ನಿರಾಕರಿಸಿದ್ದು, ಮರಣದಂಡನೆಗೆ ವಿಧಿಸಬೇಕಾದರೆ “ಅಪರೂಪದಲ್ಲಿ ಅಪರೂಪದ” ಪ್ರಕರಣ ನಡೆಯಬೇಕು, ಅಂತಹ ಮಾನದಂಡಗಳನ್ನು ಈ ಅಪರಾಧವು ಪೂರೈಸಲಿಲ್ಲ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶೇಷವಾಗಿ ಕ್ರೂರ, ಘೋರ ದುಷ್ಕೃತ್ಯದ ಪ್ರಕರಣಗಳಲ್ಲಿ ಮರಣದಂಡನೆಯನ್ನು ವಿಧಿಸಬೇಕೆಂದು ನಿರ್ಧರಿಸಲು “ಅಪರೂಪದಲ್ಲಿ ಅಪರೂಪದ” ಸಿದ್ಧಾಂತವನ್ನು ಭಾರತದಲ್ಲಿ ಬಳಸಲಾಗುತ್ತದೆ. ಕೊಲೆ, ಅತ್ಯಾಚಾರ ಮತ್ತು ಇತರ ಗಂಭೀರ ಅಪರಾಧಗಳ ಪ್ರಕರಣಗಳಲ್ಲಿ ಈ ಸಿದ್ಧಾಂತವನ್ನು ಹೆಚ್ಚಾಗಿ ಅನ್ವಯಿಸಲಾಗುತ್ತದೆ. ಕೋಲ್ಕತ್ತಾ ಅತ್ಯಾಚಾರ ಪ್ರಕರಣ

ಅಪರಾಧಿ ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿದ ಕೆಲವೇ ಗಂಟೆಗಳ ನಂತರ ವಿಚಾರಣಾ ನ್ಯಾಯಾಲಯದ ಶಿಕ್ಷೆಯನ್ನು ಪ್ರಶ್ನಿಸುವ ನಿರ್ಧಾರವನ್ನು ಸಿಬಿಐ ತೆಗೆದುಕೊಂಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಂತ್ರಸ್ತರ ಕುಟುಂಬ, ತನಿಖಾ ಪ್ರಾಧಿಕಾರ ಅಥವಾ ಅಪರಾಧಿ ಮಾತ್ರ ಮೇಲ್ಮನವಿ ಸಲ್ಲಿಸಬಹುದು ಎಂದು ಸಿಬಿಐ ವಾದಿಸಿತ್ತು. ಘಟನೆ ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯಲ್ಲಿ ನಡೆದಿರುವುದರಿಂದ ಮತ್ತು ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿರುವುದರಿಂದ, ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ವಾದಿಸಿತು.

ನ್ಯಾಯಮೂರ್ತಿ ದೇಬಾಂಗ್ಶು ಬಸಕ್ ಮತ್ತು ನ್ಯಾಯಮೂರ್ತಿ ಎಂಡಿ ಶಬ್ಬರ್ ರಶೀದಿ ಅವರ ಪೀಠವು, ರಾಜ್ಯ ಸರ್ಕಾರಕ್ಕೆ ಮರಣದಂಡನೆ ವಿಧಿಸಲು ಅವಕಾಶ ನೀಡಬೇಕೆ ಎಂದು ನಿರ್ಧರಿಸುವ ಮೊದಲು ನ್ಯಾಯಾಲಯವು ಬಲಿಪಶುವಿನ ಕುಟುಂಬ ಮತ್ತು ಅಪರಾಧಿಯ ವಾದಗಳನ್ನು ಆಲಿಸುತ್ತದೆ ಎಂದು ಹೇಳಿದೆ.

ಆಗಸ್ಟ್ 9 ರಂದು ಆಸ್ಪತ್ರೆಯ ಆವರಣದಲ್ಲಿ 31 ವರ್ಷದ ತರಬೇತಿ ವೈದ್ಯೆ ಶವವಾಗಿ ಪತ್ತೆಯಾಗಿದ್ದರು. ಈ ಘಟನೆ ದೇಶಾದ್ಯಂತ ಪ್ರತಿಭಟನೆಗಳನ್ನು ಹುಟ್ಟುಹಾಕಿತ್ತು.

ಸೋಮವಾರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಪರಾಧಿ ರಾಯ್‌ಗೆ ನೀಡಲಾದ ಶಿಕ್ಷೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು. “ಕೋಲ್ಕತ್ತಾ ಪೊಲೀಸರಿಂದ ಪ್ರಕರಣವನ್ನು ಬಲವಂತವಾಗಿ ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಪ್ರಕರಣ ಅವರ ಬಳಿ ಇದ್ದಿದ್ದರೆ, ಅದು ಮರಣದಂಡನೆಯನ್ನು ಖಚಿತಪಡಿಸುತ್ತಿತ್ತು” ಎಂದು ಅವರು ಹೇಳಿದ್ದಾರೆ.

ಈ ಪ್ರಕರಣವನ್ನು ಆರಂಭದಲ್ಲಿ ಪಶ್ಚಿಮ ಬಂಗಾಳ ಪೊಲೀಸರು ತನಿಖೆ ನಡೆಸಿದ್ದರು. ನಂತರ ಹೈಕೋರ್ಟ್ ಕೇಂದ್ರ ತನಿಖಾ ದಳಕ್ಕೆ ಅದನ್ನು ಹಸ್ತಾಂತರಿಸಿತ್ತು. ವಿಚಾರಣಾ ನ್ಯಾಯಾಲಯವು ಈ ಪ್ರಕರಣವು ಅಪರೂಪದಲ್ಲಿ ಅಪರೂಪದ ಸಿದ್ಧಾಂತವನ್ನು ಪೂರೈಸುವುದಿಲ್ಲ ಎಂದು ಕಂಡುಕೊಂಡಾಗ ತಾನು ಆಘಾತಕ್ಕೊಳಗಾಗಿದ್ದೇನೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂಓದಿ:  ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...