Homeಮುಖಪುಟಕೋಲ್ಕತ್ತಾ ಅತ್ಯಾಚಾರ - ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣ | ವಿಚಾರಣೆಯನ್ನು ಪ.ಬಂಗಾಳದಿಂದ ವರ್ಗಾಯಿಸಲು ಸುಪ್ರೀಂ ನಕಾರ

- Advertisement -
- Advertisement -

ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಯನ್ನು ಪಶ್ಚಿಮ ಬಂಗಾಳದಿಂದ ಹೊರಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನಂತರ ಮತ್ತೊಂದು ತನಿಖೆಗೆ ಆದೇಶಿಸಲು ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರಿಗೆ ಅಧಿಕಾರವಿದೆ ಎಂದು ಹೇಳಿದ್ದಾರೆ. ಕೋಲ್ಕತ್ತಾ ಅತ್ಯಾಚಾರ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಸಿಬಿಐ ಸಲ್ಲಿಸಿದ ಆರನೇ ಸ್ಥಿತಿ ವರದಿಯನ್ನು ಸಹ ಸುಪ್ರೀಂ ಕೋರ್ಟ್ ಪರಿಶೀಲಿಸಿದ್ದು, ಆದರೆ ತನಿಖೆ ನಡೆಯುತ್ತಿರುವುದರಿಂದ ಪ್ರಕರಣದ ಬಗ್ಗೆ ಅವಲೋಕನ ಮಾಡುವುದನ್ನು ತಪ್ಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೋಲ್ಕತ್ತಾ ನ್ಯಾಯಾಲಯವು ಪ್ರಧಾನ ಆರೋಪಿ ಸಂಜಯ್ ರಾಯ್ ವಿರುದ್ಧ ನವೆಂಬರ್ 4 ರಂದು ಆರೋಪಗಳನ್ನು ರೂಪಿಸಲಾಗಿದ್ದು, ಪ್ರಕರಣದ ದೈನಂದಿನ ವಿಚಾರಣೆ ನವೆಂಬರ್ 11 ರಿಂದ ಪ್ರಾರಂಭವಾಗಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿಚಾರಣೆಯ ಸಂದರ್ಭದಲ್ಲಿ, ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರ ಸುರಕ್ಷತೆಗಾಗಿ ಪ್ರೋಟೋಕಾಲ್ ಸಿದ್ಧಪಡಿಲು ರಚಿಸಲಾದ ರಾಷ್ಟ್ರೀಯ ಕಾರ್ಯಪಡೆ (ಎನ್‌ಟಿಎಫ್) ತನ್ನ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ.

ಎನ್‌ಟಿಎಫ್‌ನ ವರದಿಯನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಹಂಚಿಕೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದ್ದು, ನಾಲ್ಕು ವಾರಗಳ ನಂತರ ವಿಚಾರಣೆ ನಡೆಸುವುದಾಗಿ ವಿಚಾರಣೆಯನ್ನು ಮುಂದೂಡಿದೆ. ಕೋಲ್ಕತ್ತಾ ಅತ್ಯಾಚಾರ

ರಾಜ್ಯದಲ್ಲಿ ನಾಗರಿಕ ಸ್ವಯಂಸೇವಕರನ್ನು ನೇಮಿಸಿಕೊಳ್ಳುವ ಕುರಿತು ಅಕ್ಟೋಬರ್ 15 ರಂದು ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರಶ್ನಿಸಿತ್ತು, ಅವರ ನೇಮಕಾತಿ ಹಾಗೂ ಮತ್ತು ನೇಮಕಾತಿ ಪ್ರಕ್ರಿಯೆಯ ಅಂಕಿ ಅಂಶವನ್ನು ಕೇಳಿದೆ.

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತ್ಯೇಕ ವಿಶ್ರಾಂತಿ ಕೊಠಡಿಗಳನ್ನು ಹೊರತುಪಡಿಸಿ ಸಿಸಿಟಿವಿಗಳನ್ನು ಅಳವಡಿಸುವುದು ಮತ್ತು ಶೌಚಾಲಯಗಳನ್ನು ನಿರ್ಮಿಸುವಲ್ಲಿ ರಾಜ್ಯವು “ವಿಳಂಬ” ಮಾಡುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 30 ರಂದು ಅಸಮಾಧಾನ ವ್ಯಕ್ತಪಡಿಸಿತು ಮತ್ತು ಅಕ್ಟೋಬರ್ 15 ರೊಳಗೆ ಅದನ್ನು ಪೂರ್ಣಗೊಳಿಸಲು ಆದೇಶಿಸಿತ್ತು.

ಇದನ್ನೂ ಓದಿ: ಗಡಿಯಾರ ಚಿಹ್ನೆ ಬಳಕೆ ಕುರಿತು ‘ಸೂಚನೆ’ ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ

ಗಡಿಯಾರ ಚಿಹ್ನೆ ಬಳಕೆ ಕುರಿತು ‘ಸೂಚನೆ’ ಪ್ರಕಟಿಸುತ್ತೇವೆ: ಎನ್‌ಸಿಪಿ ಅಜಿತ್ ಪವಾರ್ ಬಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...