Homeಮುಖಪುಟಕೋಲ್ಕತ್ತಾ: ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಉಪಾಸನಾ ಚೌಧರಿ ಮನೆ ಮೇಲೆ ಕಲ್ಲುತೂರಾಟ, ಮಾಜಿ ಶಾಸಕ...

ಕೋಲ್ಕತ್ತಾ: ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಉಪಾಸನಾ ಚೌಧರಿ ಮನೆ ಮೇಲೆ ಕಲ್ಲುತೂರಾಟ, ಮಾಜಿ ಶಾಸಕ ಹುಮಾಯೂನ್ ಕಬೀರ್ ಮೇಲೂ ಹಲ್ಲೆ!

- Advertisement -
- Advertisement -

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮುಕುಂದಪುರದಲ್ಲಿ ಮಂಗಳವಾರ (ಸೆ. 22) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಘರ್ಷಣೆ ನಡೆದಿದೆ. ಘಟನೆಯಲ್ಲಿ ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಹಾಗೂ ವಕ್ತಾರೆ ಉಪಾಸನಾ ಚೌಧರಿ ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಾಜಿ ಟಿಎಂಸಿ ಶಾಸಕ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಹುಮಾಯೂನ್ ಕಬೀರ್ ಕೂಡ ಹಲ್ಲೆಗೊಳಗಾಗಿರುವುದಾಗಿ ಆರೋಪಿಸಿದ್ದಾರೆ. ಈ ಕುರಿತು ಟಿಎಂಸಿ ಮತ್ತು ಬಿಜೆಪಿ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿವೆ.

ಮುಕುಂದಪುರದಲ್ಲಿರುವ ಟಿಎಂಸಿ ಕಚೇರಿಯನ್ನು ಬಿಜೆಪಿ ಬೆಂಬಲಿಗರು ಬಲವಂತವಾಗಿ ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ, ಪಕ್ಷದ ಕಾರ್ಯಕರ್ತರು ಶಾಂತಿಯುತ ಮೆರವಣಿಗೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಏಕಾಏಕಿ ದಾಳಿ ನಡೆಸಿ ಹಿಂಸಾಚಾರ ಸೃಷ್ಟಿಸಿದ್ದಾರೆ ಎಂದು ಟಿಎಂಸಿ ಗಂಭೀರವಾಗಿ ಆರೋಪಿಸಿದೆ.

ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಉಪಾಸನಾ ಚೌಧರಿ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಕಲ್ಲು ಹಾಗೂ ಮೊಟ್ಟೆಗಳನ್ನು ತೂರಿ ಅರಾಜಕತೆ ಸೃಷ್ಟಿಸಿದ್ದಾರೆ. ಅವರ ವೈಯಕ್ತಿಕ ಕಾರಿನ ಗಾಜುಗಳನ್ನು ಸಂಪೂರ್ಣವಾಗಿ ಪುಡಿ ಮಾಡಲಾಗಿದೆ. “ತಮ್ಮ ಮೇಲೆ ಹಾಗೂ ತಮ್ಮ ಕುಟುಂಬದ ಸದಸ್ಯರ ಮೇಲೆ ಕೋಲುಗಳಿಂದ ಹಲ್ಲೆ ನಡೆಸಲಾಗಿದ್ದು, ಅನುಚಿತವಾಗಿ ವರ್ತಿಸಲಾಗಿದೆ” ಎಂದು ಉಪಾಸನಾ ಚೌಧರಿ ಆರೋಪಿಸಿದ್ದಾರೆ.

ಘರ್ಷಣೆಯ ಬಳಿಕ ಪೂರ್ವ ಜಾದವ್‌ಪುರ ಪೊಲೀಸ್ ಠಾಣೆಗೆ ತೆರಳುತ್ತಿದ್ದ ಮಾಜಿ ಶಾಸಕ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಹುಮಾಯೂನ್ ಕಬೀರ್ ಅವರ ಮೇಲೂ ಬಿಜೆಪಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಪೊಲೀಸ್ ಠಾಣೆಯ ಗೇಟ್‌ನ ಹೊರಗಡೆ ಸುಮಾರು 50ಕ್ಕೂ ಹೆಚ್ಚು ಪೊಲೀಸರು ಮೂಕಪ್ರೇಕ್ಷಕರಾಗಿ ನಿಂತಿದ್ದರೂ, ತನ್ನ ಮೇಲೆ ಹಲ್ಲೆ ನಡೆಸಿ ಕನ್ನಡಕ ಒಡೆದು, ಹಣ ಕಿತ್ತುಕೊಳ್ಳಲಾಗಿದೆ ಎಂದು ಕಬೀರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ವಿರುದ್ಧ ಮುಗಿಬಿದ್ದ ಟಿಎಂಸಿ ನಾಯಕರು:

ರಾಜ್ಯದಲ್ಲಿ ಬಿಜೆಪಿ “ಭಯ ಮತ್ತು ಹಿಂಸಾಚಾರದ ರಾಜಕಾರಣ” ಮಾಡುತ್ತಿದೆ ಎಂದು ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್ ತೀವ್ರವಾಗಿ ಕಿಡಿಕಾರಿದ್ದಾರೆ. “ನಮ್ಮ ಪಕ್ಷದ ಸಹೋದ್ಯೋಗಿಗಳ ಮೇಲೆ ಕುಡಿತದ ಅಮಲಿನಲ್ಲಿರುವ ಬಿಜೆಪಿ ಗೂಂಡಾಗಳು ಮೃಗೀಯವಾಗಿ ದಾಳಿ ನಡೆಸಿದ್ದಾರೆ. ಉಪಾಸನಾ ಅವರ ಮೇಲೆ ಹಲ್ಲೆಯಾಗಿದೆ, ಹುಮಾಯೂನ್ ಕಬೀರ್ ಗಾಯಗೊಂಡಿದ್ದಾರೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಪೊಲೀಸರು ಏನು ಮಾಡುತ್ತಿದ್ದಾರೆ? ಎಲ್ಲಿದೆ ಪೊಲೀಸ್ ವ್ಯವಸ್ಥೆ?” ಎಂದು ಅವರು ಪ್ರಶ್ನಿಸಿದ್ದಾರೆ. ಸಂಸದೆ ಮಹುವಾ ಮೊಯಿತ್ರಾ ಕೂಡ ಪೊಲೀಸರ ನಿರ್ಲಕ್ಷ್ಯ ಮತ್ತು ಸರ್ಕಾರದ ವೈಫಲ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಮತ್ತೊಂದೆಡೆ, ಟಿಎಂಸಿ ಮಾಡುತ್ತಿರುವ ಎಲ್ಲಾ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ. ಇದು ಬಿಜೆಪಿಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿರುವ ಬಿಜೆಪಿ ನಾಯಕರು, “ಇದು ಟಿಎಂಸಿ ಪಕ್ಷದೊಳಗಿನ ಎರಡು ಬಣಗಳ ಆಂತರಿಕ ಕಲಹದ ಫಲಿತಾಂಶವೇ ಹೊರತು ಬೇರೇನೂ ಅಲ್ಲ” ಎಂದು ತಿರುಗೇಟು ನೀಡಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ಈ ಸಂದರ್ಭದಲ್ಲಿ, ನಾಯಕರ ಮೇಲಿನ ಹಲ್ಲೆ ಮತ್ತು ಪರಸ್ಪರ ಆರೋಪಗಳು ರಾಜ್ಯದ ಕಾನೂನು-ಸುವ್ಯವಸ್ಥೆಯ ಕುರಿತು ಮತ್ತೊಮ್ಮೆ ಚರ್ಚೆಗೆ ದಾರಿ ಮಾಡಿಕೊಟ್ಟಿವೆ. ಪೊಲೀಸರ ಅಧಿಕೃತ ತನಿಖೆಯ ವರದಿ ಬಂದ ಬಳಿಕವಷ್ಟೇ ಘಟನೆಯ ನೈಜ ಸಂಗತಿಗಳು ಹೊರಬರಬೇಕಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಅಂತಿಮ ಪಟ್ಟಿ 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್ ಕಾಂಗ್ರೆಸ್- 115, ಬಿಜೆಪಿ-58 ಹಾಗೂ ಜೆಡಿ(ಎಸ್)ನ 19 ಕ್ಷೇತ್ರಗಳಲ್ಲಿ ಭಾರೀ ವ್ಯತ್ಯಾಸ

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. ದಿನಾಂಕ: 2026ರ ಅಕ್ಟೋಬರ್ 27 ರಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್...

ಉತ್ತರ ಪ್ರದೇಶದಲ್ಲಿ 1.27 ಕೋಟಿ ಹಿಂದೂ ಮತದಾರರ ಹೆಸರು ಅಳಿಸಿದ ಆರೋಪ: ಯೋಗಿ ಆದಿತ್ಯನಾಥ್ ಅವರಿಂದ ದಾಖಲೆ, ದತ್ತಾಂಶ ಕೇಳಿದ ಸ್ವತಂತ್ರ ಆಯೋಗ

ನವದೆಹಲಿ: ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸುಮಾರು 1.27 ಕೋಟಿ ಹಿಂದೂ ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿದೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಇದೀಗ...

ಐಸಿಜೆಯ ‘ನರಮೇಧ’ ತೀರ್ಪಿಗೆ ರೋಹಿಂಗ್ಯಾ ನಿರಾಶ್ರಿತರಿಂದ ಸ್ವಾಗತ: ತಾಯ್ನಾಡು ಮ್ಯಾನ್ಮಾರ್‌ಗೆ ಮರಳುವ ಇಂಗಿತ

ನವೆಂಬರ್ 19, 2026ರಂದು, ವಿಶ್ವಸಂಸ್ಥೆಯ ಅತ್ಯುನ್ನತ ನ್ಯಾಯಾಲಯವಾದ ಇಂಟರ್‌ನ್ಯಾಷನಲ್ ಕೋರ್ಟ್ ಆಫ್ ಜಸ್ಟೀಸ್ (ಐಸಿಜೆ) ರೋಹಿಂಗ್ಯಾ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮ್ಯಾನ್ಮಾರ್ ನರಮೇಧ ನಡೆಸಿದೆ ಎಂದು ಐತಿಹಾಸಿಕ ತೀರ್ಪು ನೀಡಿದೆ. ಅಂತಾರಾಷ್ಟ್ರೀಯ...

‘ಬಸವ ಮಂಟಪ’ ವಿವಾದ: ವಿದೇಶಕ್ಕೆ ತೆರಳಲು ಯತ್ನಿಸಿದ ಲೇಖಕ ರವಿ ಹಂಜ್ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ವಶಕ್ಕೆ; ಕೃತಿ ಮುಟ್ಟುಗೋಲು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಡಿಕೆಶಿ ಆದೇಶ

ಬೆಂಗಳೂರು, ನವೆಂಬರ್ 21: 12ನೇ ಶತಮಾನದ ಸಮಾಜ ಸುಧಾರಕ, ವಚನ ಚಳವಳಿಯ ಮುಂಚೂಣಿ ನಾಯಕ ಜಗಜ್ಯೋತಿ ಬಸವಣ್ಣನವರ ಕುರಿತು ಅವಹೇಳನಕಾರಿ ಮತ್ತು ಅವಮಾನಕರ ವಿಚಾರಗಳನ್ನು ಬರೆದಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ‘ಬಸವ ಮಂಟಪ’...

ಸ್ಥಳಾಂತರಗೊಂಡ ರೋಹಿಂಗ್ಯಾಗಳ ಸುರಕ್ಷಿತ, ತ್ವರಿತ ವಾಪಸಾತಿಗೆ ಬೆಂಬಲ : ಭಾರತ ಪುನರುಚ್ಚಾರ

ಸ್ಥಳಾಂತರಗೊಂಡ ರೋಹಿಂಗ್ಯಾ ಮುಸ್ಲಿಮರನ್ನು ಮ್ಯಾನ್ಮಾರ್‌ಗೆ ಸುರಕ್ಷಿತವಾಗಿ ಮತ್ತು ಸುಸ್ಥಿರವಾಗಿ ವಾಪಸ್ ಕಳುಹಿಸುವುದಕ್ಕೆ ತನ್ನ ಬೆಂಬಲವನ್ನು ಭಾರತ ಶುಕ್ರವಾರ (ನ.20) ಪುನರುಚ್ಚರಿಸಿದೆ. ಮ್ಯಾನ್ಮಾರ್ ವಿರುದ್ಧದ ನರಮೇಧ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ತನ್ನ ಐತಿಹಾಸಿಕ...

“ತೆರಿಗೆ ಇಳಿಸಿದರೂ ಉದ್ಯಮ ವಲಯ ಸಂಬಳ ಹೆಚ್ಚಿಸಿಲ್ಲ”: ಪ್ರಧಾನಿ ಮೋದಿ ಮಾತುಗಳಲ್ಲೇ ಸಾಬೀತಾಯ್ತು ‘ಟ್ರಿಕಲ್-ಡೌನ್’ ಆರ್ಥಿಕತೆಯ ವೈಫಲ್ಯ!

ಕೇಂದ್ರ ಸರ್ಕಾರವು ಕಾರ್ಪೊರೇಟ್ ತೆರಿಗೆಯನ್ನು ಕಡಿತಗೊಳಿಸಿ ಉದ್ಯಮ ವಲಯಕ್ಕೆ ಭಾರಿ ರಿಯಾಯಿತಿ ನೀಡಿದ್ದರೂ, ಕಂಪನಿಗಳು ತಮ್ಮ ಲಾಭವನ್ನು ಕಾರ್ಮಿಕರೊಂದಿಗೆ ಹಂಚಿಕೊಳ್ಳದೆ ಕೇವಲ ತಮ್ಮ ತಿಜೋರಿ ತುಂಬಿಸಿಕೊಂಡಿವೆ ಎಂಬುದನ್ನು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ...

ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 13 ಮಂದಿ ಸಾವು; 346 ಜನರು ಆಸ್ಪತ್ರೆಗೆ ದಾಖಲು, ಹಲವರ ಸ್ಥಿತಿ ಗಂಭೀರ

ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಕಲುಷಿತ ಮದ್ಯ ಸೇವನೆಯಿಂದ ಸಂಭವಿಸಿರುವ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ನಕಲಿ ಮದ್ಯ ಸೇವನೆಯಿಂದ ಮೆಥನಾಲ್ ವಿಷಪೂರಿತಕ್ಕೆ ಒಳಗಾಗಿರುವ ಶಂಕೆಯ ಹಿನ್ನೆಲೆಯಲ್ಲಿ 346ಕ್ಕೂ ಹೆಚ್ಚು ಜನರನ್ನು...

SIR ಪೂರ್ವದ ಮತದಾರರ ಪಟ್ಟಿ ಬಳಕೆ : ರಾಜಸ್ಥಾನ ಪಂಚಾಯತ್ ಸಮರದಲ್ಲಿ ಕಾಂಗ್ರೆಸ್​ಗೆ ಭರ್ಜರಿ ಜಯ; ಬಿಜೆಪಿಗೆ ಹಿನ್ನಡೆ

ರಾಜಸ್ಥಾನದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ (ಪಂಚಾಯತ್ ಸಮಿತಿ ಮತ್ತು ಜಿಲ್ಲಾ ಪರಿಷತ್) ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರತಿಪಕ್ಷ ಕಾಂಗ್ರೆಸ್ ಭರ್ಜರಿ ಮೇಲುಗೈ ಸಾಧಿಸಿದೆ. ಈ ಫಲಿತಾಂಶವು ರಾಜ್ಯದ ಆಡಳಿತಾರೂಢ ಬಿಜೆಪಿಗೆ ದೊಡ್ಡ ಮಟ್ಟದ...

ಎಸ್‌ಐಆರ್‌ನಲ್ಲಿ ಅಳಿಸುವಿಕೆಗೆ ಗುರುತಿಸಿದ್ದ 1,635 ಮತದಾರರ ಹೆಸರು ಅಂತಿಮ ಪಟ್ಟಿಯಲ್ಲಿ ಮತ್ತೆ ಪ್ರತ್ಯಕ್ಷ; ಹಳೆಯ EPIC ಸಂಖ್ಯೆಗಳೇ ಮುಂದುವರಿಕೆ

ಬೆಂಗಳೂರು: ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಹೆಸರಿನಲ್ಲಿ ನಡೆದಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು ನಡೆದಿರುವುದನ್ನು ದಿ ವೈರ್ ವರದಿ ಬಹಿರಂಗಪಡಿಸಿದೆ. ಬೆಂಗಳೂರಿನಲ್ಲಿ ಎಸ್‌ಐಆರ್ ವೇಳೆ ಗೈರುಹಾಜರಿ, ಸ್ಥಳಾಂತರ, ಮರಣ...

ದಲಿತ ತಾರತಮ್ಯ ಪ್ರಕರಣ: ತನಿಖಾಧಿಕಾರಿಯನ್ನು ಬದಲಿಸಲು ಮದ್ರಾಸ್ ಹೈಕೋರ್ಟ್ ಆದೇಶ

ರಾಮನಾಥಪುರಂ ಜಿಲ್ಲೆಯ ಗ್ರಾಮದೊಂದರಲ್ಲಿ ಸಾರ್ವಜನಿಕ ರಸ್ತೆಯನ್ನು ಬಳಸಲು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಜನರು ಎದುರಿಸುತ್ತಿರುವ ತೊಂದರೆಗಳ ಕುರಿತು ಸಲ್ಲಿಸಲಾದ ದೂರಿನ ಬಗ್ಗೆ ಹೊಸದಾಗಿ ತನಿಖೆ ನಡೆಸಲು, ಪೊಲೀಸ್ ಉಪ ಅಧೀಕ್ಷಕ (ಡಿವೈಎಸ್‌ಪಿ)...