Homeಮುಖಪುಟಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ ಗೋಪಾಲಕೃಷ್ಣ ರಾಜೀನಾಮೆ: ಕಾಂಗ್ರೆಸ್ ಸೇರುವ ಸಾಧ್ಯತೆ

ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ ಗೋಪಾಲಕೃಷ್ಣ ರಾಜೀನಾಮೆ: ಕಾಂಗ್ರೆಸ್ ಸೇರುವ ಸಾಧ್ಯತೆ

- Advertisement -
- Advertisement -

ಬಿಜೆಪಿ ತೊರೆಯುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಇಂದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ ಗೋಪಾಲಕೃಷ್ಣರವರು ಸಹ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಬೆಳಿಗ್ಗೆ ಶಿರಸಿಯಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿ ಮಾಡಿದ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಲವೇ ದಿನಗಳಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ.

ಮೊಳಕಾಲ್ಮೂರು ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಕ್ಕೆ 1997ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಎನ್.ವೈ ಗೋಪಾಲಕೃಷ್ಣರವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯ ಸಾಧಿಸಿದ್ದರು. ಆನಂತರ 1999, 2004, 2008ರಲ್ಲಿಯೂ ಸತತ ಗೆಲುವು ಸಾಧಿಸಿದ್ದರು. ಆದರೆ 2013ರಲ್ಲಿ ಸೋತ ನಂತರ 2018ರ ಚುನಾವಣೆಯಲ್ಲಿ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿರಲಿಲ್ಲ. ಇದರಿಂದ ಬೇಸರಗೊಂಡು ಬಿಜೆಪಿ ಸೇರಿ ಕೂಡ್ಲಿಗಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಈಗ 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಬಯಸಿರುವ ಅವರು, ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯನವರ ಜೊತೆ ಮಾತನಾಡಿದ್ದರು. ಆ ಹಿನ್ನೆಲೆಯಲ್ಲಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಲವೇ ದಿನಗಳಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ.

ಬಹಳಷ್ಟು ಶಾಸಕರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ನಿನ್ನೆಯಷ್ಟೇ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ ಕಾಂಗ್ರೆಸ್ ಸೇರಿದ್ದಾರೆ. ಅರಸೀಕೆರೆಯ ಶಿವಲಿಂಗೇಗೌಡರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆ. ಮಾಜಿ ಶಾಸಕ ವೈ.ಎಸ್.ವಿ ದತ್ತಾರವರು ಕಾಂಗ್ರೆಸ್ ಸೇರಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ಹಾಗೂ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಸೇರಿದ್ದಾರೆ. ಇನ್ನು ಆಯನೂರು ಮಂಜುನಾಥ್ ಮತ್ತು ಆರ್.ಶಂಕರ್‌ರವರು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂದ ಮತದಾರ: ಎಬಿಪಿ ಸಿ–ವೋಟರ್ ಸಮೀಕ್ಷೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...