Homeಕರ್ನಾಟಕಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ...

ಕೊಪ್ಪ: ನಿವೇಶನರಹಿತ ಎಸ್ಟೇಟ್ ಕಾರ್ಮಿಕರಿಂದ ಸರ್ಕಾರಿ ಜಾಗದಲ್ಲಿ ಟೆಂಟ್‌ ನಿರ್ಮಾಣ: ಭೂಮಾಲೀಕ ರಾಘವೇಂದ್ರ ಗುರು ಹೆಬ್ಬಾರ್‌ಗೆ ಕೆ.ಎಲ್.ಅಶೋಕ್ ಎಚ್ಚರಿಕೆ-video

- Advertisement -
- Advertisement -

ಕೊಪ್ಪ: ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಲಿತ ಕಾರ್ಮಿಕ ಕುಟುಂಬಗಳು ನಿವೇಶನಕ್ಕಾಗಿ ತೀವ್ರ ಹೋರಾಟಕ್ಕಿಳಿದಿದ್ದು, ಜಯಪುರದಿಂದ 6 ಕಿ.ಮೀ. ದೂರದಲ್ಲಿರುವ ಸರ್ಕಾರಿ ಜಾಗದಲ್ಲಿ ವಾಸ ಮಾಡುವುದಕ್ಕಾಗಿ ಟೆಂಟ್‌ಗಳನ್ನು ನಿರ್ಮಿಸಿಕೊಂಡಿದ್ದಾರೆ. ದಶಕಗಳಿಂದ ನಿವೇಶನಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ, ಭೂಹೀನ ಹಾಗೂ ವಸತಿಹೀನರಾಗಿರುವ ಸುಮಾರು 40 ದಲಿತ ಎಸ್ಟೇಟ್ ಕಾರ್ಮಿಕ ಕುಟುಂಬಗಳು ಇದೀಗ ಸ್ವತಃ ತಾವೇ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸಲು ಮುಂದಾಗಿವೆ. ಈ ಹೋರಾಟಕ್ಕೆ ಕರ್ನಾಟಕ ಜನಶಕ್ತಿ ಸಂಘಟನೆ ಬೆಂಬಲ ವ್ಯಕ್ತಪಡಿಸಿದೆ.

ಈ ದಲಿತ ಎಸ್ಟೇಟ್ ಕಾರ್ಮಿಕರು ಸರಕಾರಿ ಜಾಗದಲ್ಲಿ ಟೆಂಟ್ ನಿರ್ಮಿಸಿ, ವಾಸ ಮಾಡುವುದನ್ನು ಸಾವಿರಾರು ಎಕರೆ ಭೂಮಿಯನ್ನು ಹೊಂದಿರುವ ಸ್ಥಳೀಯ ಭೂಮಾಲೀಕನಾಗಿರುವ ಗುರು ಹೆಬ್ಬಾರ್ ವಿರೋಧಿಸುತ್ತಿದ್ದು ಮಾತ್ರವಲ್ಲದೇ, ದಲಿತರಿಗೆ ನಾನಾ ರೀತಿಯ ಕಿರುಕುಳವನ್ನು ನೀಡುತ್ತಿದ್ದಾನೆ. ಇದಕ್ಕಾಗಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಜನಶಕ್ತಿಯ ಕೆ.ಎಲ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಆಟೋರಿಕ್ಷಾ ಚಾಲಕ ಮಂಜು, “ಕಳೆದ 40 ವರ್ಷಗಳಿಂದ ನಾವು ನಿವೇಶನಕ್ಕಾಗಿ  ಸಂಬಂಧಪಟ್ಟ ಇಲಾಖೆಗಳಿಗೆ ಅರ್ಜಿಗಳನ್ನು ಸಲ್ಲಿಸುತ್ತಲೇ ಇದ್ದೇವೆ. ಪ್ರತಿ ವರ್ಷವೂ ಗ್ರಾಮ ಪಂಚಾಯತ್‌ಗಳಿಗೆ ಅರ್ಜಿಗಳನ್ನು ಹಾಕಿದ್ದೇವೆ, ಆದರೆ ಯಾವುದೇ ಫಲಿತಾಂಶ ಸಿಕ್ಕಿಲ್ಲ. ಸರ್ಕಾರದಿಂದ ನಮಗೆ ಯಾವುದೇ ಸೌಲಭ್ಯಗಳು ಸಿಗಲಿಲ್ಲ. ಹಾಗಾಗಿ, ಇಲ್ಲಿ ಸುಮಾರು ಎರಡು ಎಕರೆ ಕಂದಾಯ ಜಾಗವಿದೆ ಎಂದು ತಿಳಿದುಬಂದಿದೆ. ನಾವು ಮೊದಲು ಇಲ್ಲಿ ಶೆಡ್‌ಗಳನ್ನು ಹಾಕಿಕೊಂಡು, ಮುಂದಿನ ದಿನಗಳಲ್ಲಿ ಮನೆಗಳನ್ನು ಕಟ್ಟಿಕೊಳ್ಳಲು ಯೋಜಿಸಿದ್ದೇವೆ” ಎಂದು ಅಳಲು ತೋಡಿಕೊಂಡರು. “ಇಲ್ಲಿಯವರೆಗೆ ನಾವೆಲ್ಲರೂ ಎಸ್ಟೇಟ್‌ಗಳಲ್ಲಿ ನೀಡಿದ ವಸತಿಗಳಲ್ಲಿ ವಾಸಿಸುತ್ತಿದ್ದೇವೆ. ಆದರೆ, ಕೆಲವರು ನಿವೃತ್ತಿ ಹೊಂದಿದ್ದು, ಎಸ್ಟೇಟ್ ಮಾಲೀಕರು ವಾಸಿಸಲು ಅವಕಾಶ ನೀಡುತ್ತಿಲ್ಲ. ತಿಂಗಳಿಗೆ 5000 ರೂಪಾಯಿ ಮನೆ ಬಾಡಿಗೆ ಕಟ್ಟಿ ಬದುಕುವುದು ನಮಗೆ ಅಸಾಧ್ಯ” ಎಂದು ಅವರು ಪ್ರಶ್ನಿಸಿದರು.

ಸರ್ಕಾರವು ವಸತಿ ಇಲ್ಲದವರಿಗೆ ವಸತಿ ಮತ್ತು ನಿವೇಶನ ಇಲ್ಲದವರಿಗೆ ನಿವೇಶನ ನೀಡಬೇಕು ಎಂದು ಹೇಳುತ್ತದೆ. ಆದರೆ, ನಮಗೆ ಇನ್ನೂ ನಿವೇಶನ ಸಿಕ್ಕಿಲ್ಲ. ಕೊಪ್ಪ ಕ್ಷೇತ್ರದ ಶಾಸಕ ರಾಜೇಗೌಡ ಅವರನ್ನು ಈ ಬಗ್ಗೆ ಕೇಳಿದಾಗ, “ಜಾಗ ಸಿಕ್ಕರೆ ನಿವೇಶನ ಕೊಡುತ್ತೇನೆ” ಎಂದು ಹೇಳಿದ್ದಾರೆ. ಈಗ ಜಾಗ ಸಿಕ್ಕಿರುವುದರಿಂದ, ಶಾಸಕರು ಈ ಜಾಗವನ್ನು ನಮಗೆ ದೊರಕುವಂತೆ ಮಾಡಬೇಕು ಎಂದು ಕುಟುಂಬಗಳು ಆಗ್ರಹಿಸಿವೆ. ಇನ್ನು, ಈ ಸ್ಥಳೀಯ ಭೂಮಾಲೀಕರಾದ ಹೆಬ್ಬಾರು ಮನೆತನದವರು ದಲಿತ ಕುಟುಂಬಗಳಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. “ಮೊದಲು ಅವರು ಬೇರೆಯವರಿಗೆ ಸೈಟ್ ಕೊಟ್ಟಿದ್ದೇವೆ ಎಂದು ಬೆದರಿಸಿದರು. ಈ ಜಾಗದಲ್ಲಿ ಎರಡು ದಿನಗಳ ಹಿಂದೆ ಬಾಳೆ ಗಿಡಗಳನ್ನು ನೆಟ್ಟು ಹೋಗಿದ್ದಾರೆ. ಆದರೆ, ಇದು ನಿಜಕ್ಕೂ ಸರ್ಕಾರಿ ಜಾಗ. ನಮಗೆ ಬೆದರಿಕೆ ಹಾಕಲು ಬಂದಿರುವರುವ ಭೂಮಾಲೀಕರಿಗೆ ಈಗಾಗಲೇ ನೂರಾರು ಎಕರೆ ಜಮೀನು ಇದೆ, ಅವರ ಮನೆಯಲ್ಲಿ ಹಿಂದೆ ಹಲವು ದಲಿತರು ಕೂಲಿಯಾಳುಗಳಾಗಿ ದುಡಿದಿದ್ದರೂ ಸರಿಯಾಗಿ ಸಂಬಳ ನೀಡಿಲ್ಲ. ಸ್ಥಳೀಯರನ್ನು ಹೆದರಿಸಿ ಕಡಿಮೆ ಹಣಕ್ಕೆ ಹಲವರ ಜಮೀನನ್ನು ಸಹ ಖರೀದಿಸಿದ್ದಾರೆ” ಎಂದು ಮಂಜು ದೂರಿದರು.

ಈ ಸಂಬಂಧ ಈಗಾಗಲೇ ತಹಶೀಲ್ದಾರ್ ಗಮನಕ್ಕೆ ತರಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಪಂಚಾಯತ್ ಅಧ್ಯಕ್ಷರು ಸಹ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸುವುದಾಗಿ ಹೇಳಿದ್ದಾರೆ. ಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ “ಏನೂ ಮಾಡಬೇಡಿ, ಹಾಗೆಯೇ ಇರಲಿ” ಎಂದು ಸೂಚಿಸಿ ಹೋಗಿದ್ದಾರೆ ಎಂದು ಈ ದಲಿತ ಕುಟುಂಬಗಳು ತಿಳಿಸಿವೆ. “ನಮಗೆ ನ್ಯಾಯ ಬೇಕು. ಸರ್ಕಾರಿ ಜಾಗವನ್ನು ಸ್ಥಳೀಯರು ಏಕೆ ವಿರೋಧಿಸಬೇಕು? ಬೇಕಾದರೆ ಸರ್ಕಾರ ಮಧ್ಯಪ್ರವೇಶ ಮಾಡಲಿ” ಎಂದು ದಲಿತ ಕುಟುಂಬಗಳು ಆಗ್ರಹಿಸಿವೆ. ಸರ್ಕಾರದ ಅಧಿಕೃತ ಆದೇಶದಂತೆ ಬಡವರಿಗೆ ನಿವೇಶನ, ಮನೆ ಸಿಗಬೇಕು ಎಂಬುದು ಅವರ ಬೇಡಿಕೆಯಾಗಿದೆ.

ಕಳೆದ ನಾಲ್ಕು ತಿಂಗಳ ಹಿಂದೆ ಸ್ಥಳದ ಜಿಪಿಎಸ್ ಮಾಡಿಕೊಂಡು ಹೋಗಿದ್ದು, ಅದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಕುಟುಂಬಗಳು ಹೇಳಿವೆ. “4-5 ತಿಂಗಳ ಹಿಂದೆ ಜಿಪಿಎಸ್ ಮಾಡಲಾಗಿದೆ, ಆದರೆ 40 ವರ್ಷಗಳಿಂದ ನಾವು ಮನೆ ಮತ್ತು ಜಾಗವಿಲ್ಲದೆ ಅರ್ಜಿ ಹಾಕುತ್ತಲೇ ಇದ್ದೇವೆ. ಈಗ ಎಸ್ಟೇಟ್‌ನಲ್ಲಿ ಕೆಲವರು ನಿವೃತ್ತರಾಗಿದ್ದಾರೆ, ಇನ್ನು ಕೆಲವರು ಸದ್ಯದಲ್ಲೇ ನಿವೃತ್ತರಾಗಲಿದ್ದಾರೆ. ಅನಾರೋಗ್ಯದಿಂದ ಮನೆಯಲ್ಲಿ ಕುಳಿತರೆ ಎಸ್ಟೇಟ್ ಮಾಲೀಕರು ಜಾಗ ಖಾಲಿ ಮಾಡುವಂತೆ ಬೆದರಿಸುತ್ತಿದ್ದಾರೆ” ಎಂದು ಅಳಲು ತೋಡಿಕೊಂಡರು. “ನಾವೆಲ್ಲರೂ ಬಾಳೆಹೊನ್ನೂರು ಟೀ ಎಸ್ಟೇಟ್‌ನಲ್ಲಿ ದುಡಿಯುತ್ತಿದ್ದೇವೆ. ಶತಮಾನದಿಂದ ನಮಗೆ ಮನೆ ಎಂಬುದೇ ಇಲ್ಲ. ಅದಕ್ಕಾಗಿಯೇ ಈ ಜಾಗದಲ್ಲಿ ಬಿಡಾರ ಹೂಡಿದ್ದೇವೆ. ನಾವೆಲ್ಲ ಬಡವರು. ಇದಕ್ಕಾಗಿ ನಾಗರಿಕರು. ಸಂಘಟನೆಗಳು ನಮಗೆ ಬೆಂಬಲ ನೀಡಬೇಕು. ನಮ್ಮದೇ ಎಂದು ಒಂದು ಜಾಗವಿರಲಿಲ್ಲ. ಈಗಲಾದರೂ ನಾವು ಸ್ವತಂತ್ರವಾಗಿ ಬದುಕಲು ಇಲ್ಲಿ ಜಾಗ ಕೊಡಬೇಕು” ಎಂದು ದಲಿತ ಕುಟುಂಬಗಳು ಮನವಿ ಮಾಡಿವೆ.

ಧರ್ಮಸ್ಥಳ ಪ್ರಕರಣ: ಎಸ್ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ; ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ವೇದಿಕೆಯ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...