Homeಕರ್ನಾಟಕಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

ಕೊಪ್ಪಳ ಎಲೆಕ್ಷನ್ ರೌಂಡ್ ಅಪ್ : ಹಗಲಲ್ಲೆ ಕರಡಿಗೆ ಸೋಲಿನ ಜಾಮೂನು ಗ್ಯಾರಂಟಿ ರೀ!

- Advertisement -
- Advertisement -

| ಮಲ್ಲಿ |
ಕೊನೆಗೂ ಬಿಜೆಪಿ ಜಗ್ಗಾಡಿ, ಅಲುಗಾಡಿ, ಒಂದಿಷ್ಟು ಡ್ರಾಮಾ ಮಾಡಿ ಟಿಕೆಟನ್ನು ನೀಡಿದೆ. ಹಾಲಿ ಸಂಸದ ಕರಡಿ ಸಂಗಣ್ಣ ಪ್ರಯಾಸಪಟ್ಟು ಅಂತಿಮ ಹಂತದಲ್ಲಿ ಬಿ ಫಾರಂ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಲ ಕರಡಿ ಸೋಲುತ್ತಾರೆ ಎಂದೇ ಬಿಜೆಪಿಯ ಆಂತರಿಕ ಸಮೀಕ್ಷೆ ಹೇಳಿತ್ತಂತೆ. ಅದಕ್ಕೇ ಇಲ್ಲಿಗೆ ರಾಮುಲುರನ್ನು ತರಲು ಅದು ಯೋಚಿಸಿತು. ರಾಮುಲು ನೋ ಎಂದ ಮೇಲೆ ಸ್ಥಳೀಯ ಅಭ್ಯರ್ಥಿಗಳ ಹುಡುಕಾಟ ನಡೆಸಿತು. ಆದರೆ ಅಂತಹ ಸಮರ್ಥರು ಸಿಗದೇ ಇದ್ದಾಗ ಮತ್ತೆ ಅನಿವಾರ್ಯವಾಗಿ ಕರಡಿ ಸಂಗಣ್ಣರಿಗೇ ಟಿಕೆಟ್ ನೀಡಿದೆ. ಇತ್ತ ಕಾಂಗ್ರೆಸ್ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್‍ರ ಸಹೋದರ ಜಿಪಂ ಸದಸ್ಯ ರಾಜಶೇಖರ ಹಿಟ್ನಾಳರಿಗೆ ವಾರದ ಹಿಂದೆನೇ ಟಿಕೆಟ್ ಘೋಷಿಸಿರುವುದರಿಂದ ಅವರಾಗಲೇ ಪ್ರಚಾರದಲ್ಲಿ ಕರಡಿಗಿಂತ ತುಂಬ ಮುಂದೆ ಇದ್ದಾರೆ.

ಕಾಂಗ್ರೆಸ್ ಬುಟ್ಟಿಗೆ ಈ ಸಲ ಹೊಸದಾಗಿ ಬೀಳಬಹುದಾದ ಎಂಪಿ ಕ್ಷೇತ್ರಗಳಲ್ಲಿ ಕೊಪ್ಪಳವೂ ಒಂದು ಎನ್ನಲಾಗುತ್ತಿದೆ. ಇದು ಬಿಜೆಪಿಯನ್ನೂ ಕಾಡುತ್ತಿದ್ದರ ಪರಿಣಾಮವಾಗಿ, ಅದು ಅಭ್ಯರ್ಥಿ ಬದಲಾವಣೆಗೆ ಚಿಂತಿಸಿತ್ತು. ಆದರೆ ಅಂತಿಮವಾಗಿ ಅದು ಮತ್ತೆ ಹಾಲಿ ಸಂಸದ ಕರಡಿ ಸಂಗಣ್ಣರನ್ನೇ ಕಣಕ್ಕೆ ಇಳಿಸುವ ನಿರ್ಧಾರಕ್ಕೆ ಬಂದಿದೆ.
ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳಾಗಲು ಮೂರ್ನಾಲ್ಕು ಜನ ಪೈಪೋಟಿ ನಡೆಸುತ್ತಿದ್ದರೂ, ಅಂತಿಮವಾಗಿ ರಾಜಶೇಖರ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರರ ಅಣ್ಣನ ಮಗ ಶರಣೇಗೌಡ, ವಿರೂಪಾಕ್ಷಪ್ಪ ಸಿಂಗನಾಳ ಮತ್ತು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೆಸರುಗಳು ಚಾಲ್ತಿಗೆ ಬಂದಿದ್ದವು. ಆದರೆ ಅಂತಿಮವಾಗಿ ಹಿಟ್ನಾಳ್‍ಗೆ ಟಿಕೆಟ್ ಸಿಕ್ಕಿದೆ.

ಹಾಲಿ ಸಂಸದ ಕರಡಿ ಸಂಗಣ್ಣ ಹಿಂದೆ 4 ಬಾರಿ ಕೊಪ್ಪಳದ ಶಾಸಕರಾಗಿದ್ದವರು. ಅವರು ಪಂಚಮಸಾಲಿ ರಾಜಕೀಯ ಮಾಡುತ್ತ ಬಂದಿರುವುದು ಕ್ಷೇತ್ರದಲ್ಲಿ ಅಸಮಾಧಾನ ಹುಟ್ಟಿಸಿದೆ. ಪಂಚಮಸಾಲಿಗಳ ಸಮಸ್ಯೆಗೂ ಅವರು ಸ್ಪಂದಿಸಿಲ್ಲ, ಮಣ್ಣಿಗೆ ಹೋಗುವ, ಮದುವೆಗಳಿಗೆ ಹಾಜರಾಗುವುದನ್ನೇ ಜನಸೇವೆ ಎಂದು ಭ್ರಮಿಸಿರುವ ಕರಡಿ ಸಂಗಣ್ಣ 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೂ ಮುಜುಗರವಾಗುವಂತೆ ನಡೆದುಕೊಂಡರು.

ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಮಗನಿಗೇ ಟಿಕೆಟ್ ಕೊಡಬೇಕೆಂದು ಕರಡಿ ಸಂಗಣ್ಣ ಮಾಡಿದ ರಂಪಕ್ಕೆ ಬಿಜೆಪಿ ಹೈಕಮಾಂಡೇ ಬೆಚ್ಚಿಬಿದ್ದಿತ್ತು. ತನ್ನ ಮಗನಿಗೆ ಟಿಕೆಟ್ ಕೊಡದಿದ್ದರೆ ಬಿಜೆಪಿ ತೊರೆಯುವುದಾಗಿ ಬೆದರಿಸಿದ ಸಂಗಣ್ಣ, ಪಂಚಮಸಾಲಿ ವೇದಿಕೆಯೊಂದನ್ನು ಮಾಡಿ, ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಪಂಚಮಸಾಲಿ ಅಭ್ಯರ್ಥಿಗಳನ್ನು ಹಾಕುವುದಾಗಿ ಬಿಜೆಪಿಯನ್ನೇ ಬ್ಲ್ಯಾಕ್‍ಮೇಲ್ ಮಾಡಿದ್ದರು. ಆಗಲೇ ಜನ ಸಂಗಣ್ಣರ ಈ ಪುತ್ರವ್ಯಾಮೋಹವನ್ನು ಕಂಡು ರೋಸಿದ್ದರೂ, ಬಿಜೆಪಿ ಸಂಗಣ್ಣರ ಒತ್ತಡಕ್ಕೆ ಮಣಿದು ಅವರ ಮಗನಿಗೇ ಕೊಪ್ಪಳ ವಿಧಾನಸಭಾದÀ ಟಿಕೆಟ್ ನೀಡಿತ್ತು. ಅಷ್ಟರಲ್ಲಾಗಲೇ ಬಿಜೆಪಿಯಿಂದ ಬಿ ಫಾರಂ ಪಡೆದು ಪ್ರಚಾರ ಆರಂಭಿಸಿದ್ದ ಚಂದ್ರಶೇಖರ್‍ಗೆ ಕೈಕೊಟ್ಟ ಬಿಜೆಪಿ ನಾಯಕರು ಕೊನೆ ಕ್ಷಣದಲ್ಲಿ ಬಿ ಫಾರಂ ಅನ್ನು ಕರಡಿ ಮಗನಿಗೆ ನೀಡಿದರು. ಚಂದ್ರಶೇಖರ್‍ಗೆ ಟಿಕೆಟ್ ತಪ್ಪಿಸಿದ್ದಕ್ಕೆ ಗಮನಾರ್ಹ ಸಂಖ್ಯೆಯಲ್ಲಿ ಇರುವ ರೆಡ್ಡಿ ಲಿಂಗಾಯತರು ಕಾಂಗ್ರೆಸ್ ಪರ ನಿಂತರು. ಕಾಂಗ್ರೆಸ್‍ನ ರಾಘವೇಂದ್ರ ಹಿಟ್ನಾಳ್ ಎರಡನೇ ಬಾರಿಗೆ ನಿರಾಯಾಸವಾಗಿ ಗೆದ್ದರು.

ಆಗಿಂದಲೂ ಕರಡಿ ಸಂಗಣ್ಣರಿಗೆ ಪಾಠ ಕಲಿಸಲು ರೆಡ್ಡಿ ಮತ್ತು ಇತರ ಲಿಂಗಾಯತ ಸಮುದಾಯಗಳು ಕಾಯುತ್ತಿವೆ. ರೈಲ್ವೇ ಬ್ರಿಡ್ಜ್ ಮಾಡಿಸಿದ್ದೇ ಸಾಧನೆ ಎನ್ನುತ್ತಿರುವ ಕರಡಿಯವರಿಗೆ ಈ ಸಲ ಗೆಲುವು ಮರೀಚಿಕೆ ಆಗುವ ಎಲ್ಲ ಸಾಧ್ಯತೆಗಳೂ ದಟ್ಟವಾಗಿವೆ. ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಜನರ ಒಲವು ಗಳಿಸಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿರುವ ರಾಜಶೇಖರ್ ಈಗಾಗಲೇ ಪ್ರಚಾರ ಶುರು ಮಾಡಿಯಾಗಿದೆ.
ಇಲ್ಲಿ ಕುರುಬರು, ಮುಸ್ಲಿಮರು ಮತ್ತು ಲಿಂಗಾಯತರ ಮತಗಳು ನಿರ್ಣಾಯಕವಾಗಿದ್ದು, ಈ ಮೂರೂ ಸಮುದಾಯಗಳು ಕರಡಿ ವಿರುದ್ಧ ನಿಲ್ಲುವ ಸೂಚನೆಗಳು ಕಾಣಿಸುತ್ತಿವೆ. ಹೀಗಾಗಿ ಈ ಸಲ ಕತ್ತಲಲ್ಲಿ ಅಲ್ಲ, ಹಾಡಹಗಲೇ ಕರಡಿಗೆ ಸೋಲಿನ ಜಾಮೂನು ತಿನ್ನಿಸುವುದು ಬಹುತೇಕ ಖಚಿತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...