Homeಕರ್ನಾಟಕಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ ಪ್ರಕರಣ: ದೂರು ದಾಖಲಿಸದಕ್ಕೆ ದಲಿತ ಸಂಘಟನೆಗಳ ಆಕ್ರೋಶ

’ಮೈಲಿಗೆ ಎಂದು ಮಗುವಿಗೆ ದಂಡ ಹಾಕುವ ಧರ್ಮವಿದ್ದರೆ ಅದು ನಮ್ಮ ಹೆಮ್ಮೆಯ ಸನಾತನ ಹಿಂದೂ ಧರ್ಮ’

- Advertisement -
- Advertisement -

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪುರ ಗ್ರಾಮದಲ್ಲಿ ದಲಿತ ಸಮುದಾಯದ ಮಗುವೊಂದು ಆಕಸ್ಮಿಕವಾಗಿ ದೇವಸ್ಥಾನ ಪ್ರವೇಶಿಸಿದಕ್ಕೆ ಮಗುವಿನ ಕುಟುಂಬಕ್ಕೆ ಗ್ರಾಮಸ್ಥರು ದಂಡ ವಿಧಿಸಿದ್ದರು. ದೇವಸ್ಥಾನ ಶುದ್ಧಿಕರಿಸಿ ಅಸ್ಪೃಶ್ಯತೆ ಆಚರಿಸಿದ್ದರು, ಆದರೂ ಘಟನೆ ಬಗ್ಗೆ ದೂರು ಮಾತ್ರ ದಾಖಲಾಗದಕ್ಕೆ ದಲಿತಪರ ಸಂಘಟನೆಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳದೆ ಶಾಂತಿ-ಸೌಹಾರ್ದ ಸಭೆ ನಡೆಸಿ ಪ್ರಕರಣವನ್ನು ಮುಚ್ಚಿ ಹಾಕಲು ಅಧಿಕಾರಿಗಳು ಪ್ರಯತ್ನಿಸಿದ್ದಾರೆ ಎಂದು ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಅಧ್ಯಕ್ಷ ಕರಿಯಪ್ಪ ಗುಡಿಮನಿ ಆರೋಪಿಸಿದ್ದಾರೆ.

ಕುಷ್ಟಗಿ ತಾಲೂಕಿನ ಮಿಯಾಪುರದಲ್ಲಿ ಸೆ. 4 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚನ್ನದಾಸರ ಸಮುದಾಯದ ಮಗುವಿನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಆಂಜನೇಯ ದೇವಸ್ಥಾನಕ್ಕೆ ಕುಟುಂಬದವರು ತೆರಳಿದ್ದರು. ಆಕಸ್ಮಿಕವಾಗಿ ಮಗು ದೇವಸ್ಥಾನದ ಒಳಗೆ ಪ್ರವೇಶಿಸಿದೆ. ದಲಿತರು ಗುಡಿ ಪ್ರವೇಶಿಸಿದ್ದಕ್ಕೆ ಅಪವಿತ್ರವಾಗಿದೆ ಎಂದು ಸೆ.11 ರಂದು ಗ್ರಾಮದ ಸವರ್ಣಿಯರು ಸಭೆ ನಡೆಸಿ, ದೇವಸ್ಥಾನವನ್ನು ಶುದ್ಧೀಕರಿಸಿದ್ದರು. ಕುಟುಂಬಕ್ಕೆ 25 ಸಾವಿರ ರೂಪಾಯಿ ದಂಡ ವಿಧಿಸಿದ್ದರು.

ಇದನ್ನೂ ಓದಿ: ಅತ್ಯಾಚಾರ ನಿಲ್ಲಬೇಕು, ಅತ್ಯಾಚಾರಿಗಳಿಗೆ ಶಿಕ್ಷೆಯಾಗಬೇಕು: ಸೈಕ್ಲಿಂಗ್ ಜಾಗೃತಿ ಮೂಡಿಸುತ್ತಿರುವ ಕಿರಣ್

ಬಳಿಕ ಗ್ರಾಮಕ್ಕೆ ಪೊಲೀಸ್‌, ಕಂದಾಯ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ದಂಡ ವಿಧಿಸಿದವರಿಗೆ ಎಚ್ಚರಿಕೆ ನೀಡಿ, ಗ್ರಾಮಸ್ಥರಿಗೆ ತಿಳಿವಳಿಕೆ ಹೇಳಿದ್ದರು. ಆದರೆ, ಕಾನೂನು ಕ್ರಮ ಕೈಗೊಂಡಿಲ್ಲ.

ಕುಷ್ಟಗಿ ತಹಶೀಲ್ದಾರ ಸಿದ್ದೇಶ, ಗಂಗಾವತಿ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಚಂದ್ರ ಸಂಗನಾಳ, ಸಿಪಿಐ ನಿಂಗಪ್ಪ ಎನ್‌.ಆರ್‌, ಪಿಎಸ್‌ಐಗಳಾದ ತಿಮ್ಮಣ್ಣ ನಾಯಕ, ಅಶೋಕ ಬೇವೂರು, ಕಂದಾಯ ನಿರೀಕ್ಷಕ ಉಮೇಶಗೌಡ ಪಾಟೀಲ್‌, ಪಿಡಿಒ ವೆಂಕಟೇಶ ನಾಯ್ಕ್‌ ಇದ್ದರು ಭೇಟಿ ನೀಡಿ, ಶಾಂತಿ-ಸೌಹಾರ್ದ ಸಭೆ ನಡೆಸಿದ್ದರು.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಅಧ್ಯಕ್ಷ, ಹೋರಾಟಗಾರ ಕರಿಯಪ್ಪ ಗುಡಿಮನಿ, “ಗಂಗಾವತಿ ಡಿವೈಎಸ್‌ಪಿ ಸಭೆ ನಡೆಸಿ ಸುಮ್ಮನೆ ಬಿಟ್ಟಿದ್ದಾರೆ. ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳದೆ ತಪ್ಪನ್ನು ಮುಚ್ಚಿಡಲು ಸಭೆ ನಡೆಸಿದ್ದಾರೆ. ಅವರು ಅಸ್ಪೃಶ್ಯತಾ ನಿವಾರಣೆ ಬಗ್ಗೆ ತಿಳಿ ಹೇಳಬೇಕಿತ್ತು. ಆದರೆ,
ದೂರು ದಾಖಲಾಗುವುದು ಬೇಡ. ಶಾಂತಿ ಕಾಪಾಡಿ ಎಂದು ಬಾಯಿ ಮಾತಿನಲ್ಲಿ ಹೇಳಿದ್ದಾರೆ” ಎಂದು ಆರೋಪಿಸಿದ್ದಾರೆ.

PC: public tv

“ಸಭೆ ನಡೆಸಿದ ಮಾತ್ರಕ್ಕೆ ಆ ದಲಿತ ಕುಟುಂಬಕ್ಕೆ ಆಗಿರುವ ಅವಮಾನ. ಮಾನಸಿಕ ಹಿಂಸೆ ಕಡಿಮೆಯಾಗುತ್ತದೆಯೇ…? ಅವರ ಮೇಲಾದ ದೌರ್ಜನ್ಯದ ಬಗ್ಗೆ ನೋವು ಇದ್ದೆ ಇರುತ್ತದೆ. ಕೊಪ್ಪಳ ಜಿಲ್ಲೆಯಲ್ಲಿ ಸರಣಿ ಘಟನೆಗಳು ಆಗುತ್ತಿವೆ. ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ ಅವರ ವ್ಯಾಪ್ತಿಯ ಗ್ರಾಮಗಳಲ್ಲಿ ದಲಿತರ ಮೇಲೆ ಅವಮಾನ, ಶೋಷಣೆ ನಡೆಯುತ್ತಲೇ ಇವೆ. ಪೊಲೀಸರು ಉಳ್ಳವರ ಪರ ಇದ್ದಾರೆ. ಹೀಗಾಗಿ ಅವರು ಘಟನೆಗಳನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇವರನ್ನು ಗಂಗಾವತಿಯಿಂದ ವರ್ಗಾವಣೆ  ಮಾಡಬೇಕು. ನಾವು ನಮ್ಮ ಸಂಘದ ವತಿಯಿಂದ ಗ್ರಾಮಕ್ಕೆ ಭೇಟಿ ನೀಡುತ್ತೇವೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಘಟನೆಯನ್ನು ಖಂಡಿಸಿರುವ ಭೀಮ್ ಆರ್ಮಿಯ ಮುಖಂಡ ನಟರಾಜ್ ದಿಂಡಗೂರು, “ಮನುಷ್ಯರನ್ನು ಮನುಷ್ಯ ಎಂದು ನೋಡದ ಧರ್ಮ ಇದು. ಆಡವಾಡುವ ಮಗುವಿನ ಮೇಲೆ ಅಸ್ಪೃಶ್ಯತಾ ಆಚರಣೆ ನಡೆಸುವುದು ಅಮಾನವೀಯ. ಅಲ್ಲಿ ಕಾನೂನು ವ್ಯವಸ್ಥೆ ಸವರ್ಣಿಯರ ಪರವಾಗಿದೆ. ಇವರು ದೊಡ್ಡ ದೊಡ್ಡ ಭಾಷಣ ಮಾಡುತ್ತಾರೆ. ನಾವೆಲ್ಲ ಹಿಂದೂಗಳು ಒಂದು ಎಂದು..ಆದರೆ, ಇಂತಹ ಘಟನೆಗಳು ಬಂದಾಗ ನಾವು ಯಾರು…? ನಮ್ಮ ಅಸ್ತಿತ್ವವೇನು…? ಮೈಲಿಗೆ ಎಂದು ಮಗುವಿಗೆ ದಂಡ ಹಾಕುವ ಧರ್ಮವಿದ್ದರೆ ಅದು ನಮ್ಮ ಹೆಮ್ಮೆಯ ಸನಾತನ ಹಿಂದೂ ಧರ್ಮ. ಇಂತಹ ಘಟನೆಗಳಿಗೆ ತಾಲೂಕು ಆಡಳಿತ, ಜಿಲ್ಲಾಡಳಿತ ಕಾರಣ. ಇಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಕೂಡ ಘಟನೆಯನ್ನು ಖಂಡಿಸಿದ್ದು, “ಬಿಜೆಪಿ ತನ್ನ ಆಡಳಿತದಲ್ಲಿ ದಲಿತ ವಿರೋಧಿ ವಾತಾವರಣ ನಿರ್ಮಿಸುತ್ತಿದೆ. ದಲಿತರಿಗೆ ಮೂತ್ರ ಕುಡಿಸುವುದರಿಂದ ಹಿಡಿದು ಬಹಿಷ್ಕಾರ, ಹಲ್ಲೆಯ ಪ್ರಕರಣಗಳು ಹೆಚ್ಚುತ್ತಿವೆ. ಮನುವಾದಿ ಬಿಜೆಪಿ ಆಡಳಿತದಲ್ಲಿ ದಲಿತರಿಗೆ ನೆಮ್ಮದಿಯ ಬದುಕಿಲ್ಲದಾಗಿದೆ. ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಕಟ್ಟಲು ಹೊರಟ ಹಿಂದೂರಾಷ್ಟ್ರದ ಅಡಿಗಲ್ಲು ಇದೇನಾ!?” ಎಂದು ಪ್ರಶ್ನಿಸಿದೆ.

ಕೊಪ್ಪಳ ಜಿಲ್ಲೆಯಲ್ಲಿ ಈಗಲೂ ಸಹ ಗ್ರಾಮೀಣ ಪ್ರದೇಶಗಳಲ್ಲಿ ದಲಿತರ ಮೇಲೆ ಶೋಷಣೆ ನಡೆಯುತ್ತಲೆ ಇದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಆಗಸ್ಟ್ ತಿಂಗಳಲ್ಲಿ ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಜನರ ಮೇಲೆ, ಕುರುಬ ಮತ್ತು ನಾಯಕ ಸಮುದಯಗಳ ಜನರು ಗುಂಪು ಕಟ್ಟಿಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...