ಭಾನುವಾರ (ನ.16) ಸಂಜೆ ಕೊಪ್ಪಳ ಜಿಲ್ಲೆಯಲ್ಲಿ, ತಂಪು ಪಾನೀಯದಲ್ಲಿ ಬೆರೆಸಿದ ಮದ್ಯ ಕುಡಿಸಿ 39 ವರ್ಷದ ಮಹಿಳೆಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಮಹಿಳೆ, ತನ್ನ ಪತಿಗೆ ಕರ್ತವ್ಯಕ್ಕೆ ಹೋಗುವುದಾಗಿ ಹೇಳಿ ಪರಿಚಯಸ್ಥರಿಂದ ಹಣ ಸಂಗ್ರಹಿಸಲು ಹೊಸಪೇಟೆಯಿಂದ ಕುಷ್ಟಗಿಗೆ ಪ್ರಯಾಣಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆಯ ಹೇಳಿಕೆಯ ಪ್ರಕಾರ, ಆರೋಪಿಗಳಲ್ಲಿ ಒಬ್ಬನಾದ ಲಕ್ಷ್ಮಣ್, ಆರು ತಿಂಗಳ ಹಿಂದೆ ಪರಿಚಿತನಾಗಿದ್ದ. ರೂ.5,000 ಬಾಕಿ ಉಳಿಸಿಕೊಂಡಿದ್ದ ಎನ್ನಲಾಗಿದೆ. ಆ ಹಣವನ್ನು ಮರುಪಾವತಿಸುವುದಾಗಿ ಹೇಳಿ ಕುಷ್ಟಗಿಗೆ ಕರೆದೊಯ್ದ. ನಂತರ ಆತ ಆಕೆಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾನೆ.
ಲಕ್ಷ್ಮಣ್ ಮತ್ತು ಆತನ ಮೂವರು ಸ್ನೇಹಿತರು ಆಕೆಗೆ ತಂಪು ಪಾನೀಯ ನೀಡಿ, ಅದನ್ನು ಜ್ಯೂಸ್ ಎಂದು ಹೇಳಿ ಮದ್ಯ ಕುಡಿಸಿದ್ದಾರೆ. ಮದ್ದೂರು ವ್ಯಾಪ್ತಿಯ ಬಳಿಯ ಹೊಲದಲ್ಲಿರುವ ಪಾಳುಬಿದ್ದ ಮನೆಗೆ ಕರೆದುಕೊಂಡು ಹೋಗಿ, ಸಂಜೆ 5 ರಿಂದ 5.45 ರ ನಡುವೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆಕೆ ಅಸ್ವಸ್ತಳಾದ ನಂತರ, ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಪೊಲೀಸರು ಸಂತ್ರಸ್ತೆಯ ದೂರನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೊಪ್ಪಳ ಡಿಎಸ್‌ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆ ಸ್ಥಿರವಾಗಿದ್ದಾರೆ ಎಂದು ಅವರು ಹೇಳಿದರು.
ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 70 (ಸಾಮೂಹಿಕ ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ನಾಲ್ವರು ಆರೋಪಿಗಳನ್ನು ಭಾನುವಾರ ತಡರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.


