Homeಕರ್ನಾಟಕಕೊಪ್ಪಳ: ದಲಿತ ಯುವಕನಿಗೆ ದಂಡ ಹಾಕಿದ್ದ ಪ್ರಕರಣ ಬಯಲಿಗೆಳೆದ ವರದಿಗಾರನಿಗೆ ಜೀವಭಯ

ಕೊಪ್ಪಳ: ದಲಿತ ಯುವಕನಿಗೆ ದಂಡ ಹಾಕಿದ್ದ ಪ್ರಕರಣ ಬಯಲಿಗೆಳೆದ ವರದಿಗಾರನಿಗೆ ಜೀವಭಯ

- Advertisement -
- Advertisement -

ಕೊಪ್ಪಳದ ಕಾರಟಗಿ ತಾಲೂಕಿನ ನಾಗನಕಲ್ಲ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಸಿಂಧೋಳ ಸಮುದಾಯದ ಯುವಕ ದೇವಾಸ್ಥಾನ ಪ್ರವೇಶಿಸಿದಕ್ಕೆ ದಂಡ ಹಾಕಿದ್ದ ಪ್ರಕರಣವನ್ನು ಬಯಲಿಗೆಳೆದ ವರದಿಗಾರನಿಗೆ ಜೀವಭಯ ಇದ್ದು, ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.

ಸ್ಥಳೀಯ ಸುದ್ದಿವಾಹಿನಿ ಜಿಬಿ ನ್ಯೂಸ್ ವರದಿಗಾರ ಸುಂದರರಾಜ್, ತಮಗೆ ಜೀವ ಭಯ ಇದೆ ಎಂದು ರಕ್ಷಣೆ ನೀಡುವಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಸುದ್ದಿವಾಹಿನಿಯ ಸುದ್ದಿ ಸಂಪಾದಕರು ಮತ್ತು ದಲಿತ ಮುಖಂಡರ ಜೊತೆಗೆ ತೆರಳಿ ಮನವಿ ಸಲ್ಲಿಸಿದ್ದಾರೆ.

ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಸಿಂಧೋಳ ಸಮುದಾಯದ ಯುವಕ ಮಾರೆಪ್ಪ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ದಲಿತ ಯುವಕ ದೇವಸ್ಥಾನಕ್ಕೆ ತೆರಳಿದ್ದಕ್ಕೆ ದೇವಸ್ಥಾನದ ಆಡಳಿತ ಮಂಡಳಿ 11 ಸಾವಿರ ರೂಪಾಯಿ ದಂಡ ಹಾಕಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಇದನ್ನು ಸೆ.24 ರಂದು ಜಿಬಿ ನ್ಯೂಸ್ ವರದಿಗಾರ ಸುಂದರರಾಜ್ ಬೆಳಕಿಗೆ ತಂದಿದ್ದರು.

ಇದನ್ನೂ ಓದಿ: ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ

ಸ್ಥಳೀಯರಿಂದ ದೂರವಾಣಿ ಕರೆ ಮೂಲಕ ಮಾಹಿತಿ ಪಡೆದಿದ್ದ ಸುಂದರರಾಜ್ ಅವರು ಸ್ಥಳಕ್ಕೆ ಭೇಟಿ ನೀಡಿ, ಸ್ಥಳಿಯರನ್ನು ಮಾತಾಡಿಸಿ, ವಿವರಗಳನ್ನು ವಿಡಿಯೋ ಮೂಲಕ ದಾಖಲು ಮಾಡಿಕೊಂಡು ಈ ಬಗ್ಗೆ ಸುದ್ದಿ ಮಾಡಿದ್ದರು. ಇದರಿಂದ ಮುಖ್ಯವಾಹಿನಿಯ ಮಾಧ್ಯಮಗಳು ಗಮನ ಕೊಟ್ಟವು. ಇದರ ಜೊತೆಗೆ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು. ಅಸ್ಪೃಶ್ಯತೆ ಆಚರಣೆ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾಹಿತಿ ಹಂಚಿಕೊಂಡಿರುವ ಜಿಬಿ ನ್ಯೂಸ್ ವರದಿಗಾರ ಸುಂದರರಾಜ್, ’ನಾನು ನಾಗನಕಲ್ ಪ್ರಕರಣವನ್ನು ಹೊರಗೆಳೆದ ಬಳಿಕ, ಕಳೆದೆರಡು ದಿನಗಳಿಂದ ಅಪರಿಚಿತ ವಾಹನಗಳು ನನ್ನ ವಾಹನವನ್ನು ಹಿಂಬಾಲಿಸುತ್ತಿವೆ. ಹೀಗಾಗಿ ನಾನು ಆತಂಕಗೊಂಡು ಪೊಲೀಸರಿಗೆ ಮನವಿ ಸಲ್ಲಿಸಿದ್ದೇನೆ. ನನಗೆ ಯಾರು ಕರೆ ಮಾಡಿ ಅಥವಾ ಎದುರು ಬಂದು ಬೆದರಿಕೆ ಹಾಕಿಲ್ಲ. ಆದರೆ, ನಾನು ಓಡಾಡುವಾಗ ಬೈಕ್‌ನಲ್ಲಿ ಹಿಂಬಾಲಿಸಿದ ಅನುಭವ ಆಯಿತು. ಮುನ್ನೆಚ್ಚರಿಕೆಯಾಗಿ ನಾನು ದೂರು ನೀಡಿದ್ದೇನೆ” ಎಂದಿದ್ದಾರೆ.

ಇನ್ನು ವರದಿಗಾರನಿಗೆ ಕರ್ನಾಟಕ ಜನಶಕ್ತಿ, ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಮಹಿಳಾ ಮುನ್ನಡೆ, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಕರ್ನಾಟಕ ಶ್ರಮಿಕ ಶಕ್ತಿ, ಕರ್ನಾಟಕ ಕೋಮು ಸೌಹಾರ್ದತೆ ವೇದಿಕೆ ಬೆಂಬಲ ನೀಡಿವೆ.

“ಸಾಮಾಜಿಕ ಅವ್ಯವಸ್ಥೆ ಬಗ್ಗೆ ವರದಿ ಮಾಡಿದ ಜಿಬಿ ನ್ಯೂಸ್ ಟೀಮ್‌ಗೆ ರಕ್ಷಣೆ ನೀಡುವುದು ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮೆಲ್ಲರ ಜವಾಬ್ದಾರಿ ಕೂಡ. ಪ್ರಾಮಾಣಿಕ ಮಾಧ್ಯಮ ಮಿತ್ರರ ಜೊತೆಗೆ ನಾವಿದ್ದೇವೆ” ಎಂದು
ಹೋರಾಟಗಾರ ಕರಿಯಪ್ಪ ಗುಡಿಮನಿ ಹೇಳಿದ್ದಾರೆ.

ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದ ಸಿಂಧೋಳ ಸಮುದಾಯದ ಯುವಕ ಮಾರೆಪ್ಪ ದೇವಸ್ಥಾನಕ್ಕೆ ಹೋಗಿ ತಾನೇ ಪೂಜೆ ಸಲ್ಲಿಸಿ ಬಂದಿದ್ದರಿಂದ ದೇವಸ್ಥಾನ ಮೈಲಿಯಾಗಿದೆ ಎಂದು ದೇವಾಲಯ ಆಡಳಿತ ಮಂಡಳಿಯ ಪ್ರಮುಖರು ಮೈಲಿಗೆ ನಿವಾರಣೆ, ಶುದ್ಧೀಕರಣ ಮತ್ತು ಪಶ್ಚಾತಾಪ ಸೇರಿ ಒಟ್ಟು 5 ಲಕ್ಷ ದಂಡ ಕಟ್ಟುವಂತೆ ಆದೇಶಿಸಿದ್ದರು ಎನ್ನಲಾಗಿದೆ. ದಂಡದ ಮೊತ್ತ ಹೆಚ್ಚಾಗಿದ್ದಕ್ಕೆ ಕೆಲವರು ಆಕ್ಷೇಪಿಸಿದ್ದರಿಂದ ಕೊನೆಗೆ 11 ಸಾವಿರ ದಂಡ ಕಟ್ಟಿ ಇಡೀ ಪ್ರಕರಣವನ್ನು ಮುಚ್ಚಿ ಹಾಕಲಾಗಿತ್ತು ಎಂದು ವರದಿಯಾಗಿದೆ. ಈ ಸಂಬಂಧ ದೇವಸ್ಥಾನದ ಪೂಜಾರಿ ಸೇರಿದಂತೆ ಆಡಳಿತ ಮಂಡಳಿಯ ಒಟ್ಟು 8 ಜನರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿದ್ದಾರೆ.


ಇದನ್ನೂ ಓದಿ: ಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ: ದೇಗುಲ ಪ್ರವೇಶಿಸಿದ ದಲಿತ ಯುವಕನಿಗೆ ದಂಡ, 8 ಜನರ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...