Homeಕರ್ನಾಟಕಕೊರಟೆಗೆರೆ ಅಪಘಾತದಿಂದ ಎಚ್ಚೆತ್ತ ಜನ: ಖಾಸಗಿ ಬಸ್‌ ಸಂಚಾರ ನಿಷೇಧಕ್ಕೆ ಒತ್ತಾಯಿಸಿ ಕಾಲ್ನಡಿಗೆ ಜಾಥಾ

ಕೊರಟೆಗೆರೆ ಅಪಘಾತದಿಂದ ಎಚ್ಚೆತ್ತ ಜನ: ಖಾಸಗಿ ಬಸ್‌ ಸಂಚಾರ ನಿಷೇಧಕ್ಕೆ ಒತ್ತಾಯಿಸಿ ಕಾಲ್ನಡಿಗೆ ಜಾಥಾ

- Advertisement -
- Advertisement -

ತುಮಕೂರು –ಪಾವಗಡ ರಾಜ್ಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸುವಂತೆ ಒತ್ತಾಯಿಸಿ ಕೊರಟಗೆರೆ ಹಿತರಕ್ಷಣಾ ವೇದಿಕೆ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಕೊರಟಗೆರೆಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು.

ಕಳೆದ ವಾರ ಕೊರಟಗೆರೆ ಬಳಿ ಸಂಭವಿಸಿದ ಭೀಕರ ಅಪಘಾತದ ನಂತರ ಎಚ್ಚೆತ್ತಿರುವ ಜನರು ಪರಿಹಾರಕ್ಕಾಗಿ ಇಂದಿ ಬೀದಿಗಿಳಿದಿದ್ದಾರೆ.

ಈ ರಾಜ್ಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಗಳನ್ನು ಸಂಪೂರ್ಣ ನಿಷೇಧಿಸಬೇಕು ಮತ್ತು ಸರ್ಕಾರಿ ಬಸ್ ಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಇತ್ತೀಚೆಗೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಕೊರಟಗೆರೆಯಲ್ಲಿ  ಕೆ.ಎಸ್.ಆರ್.ಟಿ.ಸಿ ಡಿಪೋ ಸ್ಥಾಪಿಸಬೇಕು ಎಂದು ಜಾಥಾದ ಮೂಲಕ ಒತ್ತಾಯಿಸಿದರು.

ಇದನ್ನೂ ಓದಿ: ಖಾಸಗಿ ಬಸ್ಸು ಪಲ್ಟಿಯಾಗಿ ಕೊರಟಗೆರೆ ಬಳಿ 8 ಸಾವು: ವಿಡಿಯೋ ನೋಡಿ…

ತುಮಕೂರು ಪಾವಗಡ ರಸ್ತೆಯಲ್ಲಿ ಉಬ್ಬುಗಳು ನಿರ್ಮಾಣ ಮಾಡದೇ ಇರುವುದರಿಂದ ಖಾಸಗಿ ಬಸ್ ಗಳು ಅತಿ ವೇಗವಾಗಿ ಸಂಚರಿಸುತ್ತವೆ. ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನಗಳಲ್ಲಿ ಹೋಗಲು ಭಯವಾಗುತ್ತದೆ. ದಾರಿ ಹೋಕರು ನಡೆದು ಹೋಗಲು ಆಗುತ್ತಿಲ್ಲ. ಈ ರಸ್ತೆಯಲ್ಲಿ ಖಾಸಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಪ್ರತಿ ಐದು ನಿಮಿಷಕ್ಕೆ ಒಂದು ಖಾಸಗಿ ಬಸ್ ಸಂಚರಿಸುತ್ತವೆ. ಬಸ್ ಗಳ ಸಂಚಾರದ ನಡುವೆ ಅಂತರ ಕಡಿಮೆ ಇದೆ. ಹೀಗಾಗಿ ಸಮಯ ನಿರ್ವಹಣೆ ಮಾಡಲು ಖಾಸಗಿ ಬಸ್ ಗಳು ಪೈಪೋಟಿ ಮೇಲೆ ವೇಗವಾಗಿ ಓಡಾಡುತ್ತವೆ.. ಮಧುಗಿರಿ ತುಮಕೂರು ನಡುವೆ ಕೆಲ ಬಸ್ ಗಳಿಗೆ 12 ಟ್ರಿಪ್ ಓಡಾಡಲು ಅವಕಾಶ ಕಲ್ಪಿಸಿದೆ. ಇದರಿಂದ ರಸ್ತೆಯಲ್ಲಿ ಓಡಾಡುವುದು ಮತ್ತು ರಸ್ತೆ ದಾಟುವುದಕ್ಕೆ ತೊಂದರೆಯಾಗಿದೆ ಎಂದು ದೂರಿದರು.

ಕೆಲವು ಖಾಸಗಿ ಬಸ್ ಗಳು ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳುವುದಿಲ್ಲ. ವೇಗವಾಗಿ ಹೋಗುತ್ತವೆ. ಬಸ್‌ಗಾಗಿ ಕೆಲವೇ ಸಂಖ್ಯೆಯಲ್ಲಿರುವ ಸರ್ಕಾರಿ ಬಸ್ ಗಳನ್ನು ಅವಲಂಬಿಸಬೇಕಾಗಿದೆ. ಈ ರಸ್ತೆಯ ಪ್ರಮುಖ ಗ್ರಾಮಗಳನ್ನು ಬಿಟ್ಟರೆ ಬೇರೆ ಕಡೆ ವಾಹನಗಳ ನಿಲುಗಡೆ ಮಾಡುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ಮತ್ತು ಮಕ್ಕಳು ಬಸ್ ಗಾಗಿ ಕಾಯುವಂತಹ ಪರಿಸ್ಥಿತಿ ಬಂದಿದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಖಾಸಗಿ ಬಸ್ ಗಳ ನಡುವೆ ತೀವ್ರ ಪೈಪೋಟಿ ಇರುವುದರಿಂದ ಕೂಡಲೇ ಅವುಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಸರ್ಕಾರಿ ಬಸ್ ಗಳ ಸೇವೆ ಒದಿಗಸಬೇಕು. ಪದೇ ಪದೇ ಅಪಘಾತಗಳು ಆಗುತ್ತಿರುವುದಕ್ಕೆ ಕಡಿವಾಣ ಹಾಕಬೇಕು ಎಂದು ಜಿಲ್ಲಾದಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...