Homeಮುಖಪುಟಭೀಮಾ-ಕೋರೆಗಾಂವ್ ಶೌರ್ಯ ದಿನ : ಸ್ಮಾರಕ ವಿಸ್ತರಣೆಗೆ ₹200 ಕೋಟಿ ಬೇಡಿಕೆ

ಭೀಮಾ-ಕೋರೆಗಾಂವ್ ಶೌರ್ಯ ದಿನ : ಸ್ಮಾರಕ ವಿಸ್ತರಣೆಗೆ ₹200 ಕೋಟಿ ಬೇಡಿಕೆ

- Advertisement -
- Advertisement -

ದಲಿತರ ಸ್ವಾಭಿಮಾನ ಮತ್ತು ಅಸ್ಮಿತೆಯ 1818ರ ಭೀಮಾ-ಕೋರೆಗಾಂವ್ ಯುದ್ದದ ನೆನಪಿನಲ್ಲಿ ಬುಧವಾರ (ಜ.1) ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕೋರೆಗಾಂವ್‌ ಭೀಮಾ ಗ್ರಾಮದಲ್ಲಿ 207ನೇ ‘ಶೌರ್ಯ ದಿನ’ ಆಚರಣೆ ನಡೆಯಿತು.

ರಾಜಕೀಯ ನಾಯಕರು, ಸಮುದಾಯದ ಮುಖಂಡರು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನರು ಭೀಮಾ-ಕೋರೆಗಾಂವ್ ‘ವಿಜಯಸ್ತಂಭ’ದ ಬಳಿ ಜಮಾಯಿಸಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರು ‘ವಿಜಯಸ್ತಂಭ’ದ ಪ್ರದೇಶದ ಅಭಿವೃದ್ದಿ ಮತ್ತು ವಿಸ್ತರಣೆಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಬೇಡಿಕೆಯಿಟ್ಟರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅಠವಳೆ, “ಈ ದಿನ, ನಮ್ಮ ಜನರು ಪೇಶ್ವೆಗಳೊಂದಿಗೆ ಹೋರಾಡಿದರು. ಈ ಕಂಬವು ಅವರ ಶೌರ್ಯವನ್ನು ಪ್ರತಿಬಿಂಬಿಸುತ್ತದೆ. ಪ್ರತಿ ವರ್ಷ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಈ ಸ್ಥಳಕ್ಕೆ ಭೇಟಿ ನೀಡುತ್ತಿದ್ದರು. ಈಗ ದೇಶದ ವಿವಿಧ ಭಾಗಗಳ ಜನರು ಇಲ್ಲಿಗೆ ಭೇಟಿ ನೀಡಲು ಪ್ರಾರಂಭಿಸಿದ್ದಾರೆ. ವಿಜಯಸ್ತಂಭದ ಸುತ್ತ ಬೃಹತ್ ಸ್ಮಾರಕ ನಿರ್ಮಿಸಬೇಕು. ಸರ್ಕಾರ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಆದರೆ, ಕಾಮಗಾರಿ ಪೂರ್ಣಗೊಂಡಿಲ್ಲ. ನಾನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಸ್ಮಾರಕಕ್ಕೆ 200 ಕೋಟಿ ರೂ. ಮಂಜೂರಾತಿ ಪಡೆಯುತ್ತೇನೆ” ಎಂದರು.

ಜನವರಿ 1, 1818 ರಂದು ನಡೆದ ಕೋರೆಗಾಂವ್ ಕದನವನ್ನು ಸ್ಮರಿಸಲು ಕೋರೆಗಾಂವ್ ಭೀಮಾದಲ್ಲಿ ಪ್ರತಿವರ್ಷ ಶೌರ್ಯ ದಿನ ಆಚರಣೆ ಮಾಡಲಾಗುತ್ತದೆ. ಭೀಮಾ-ಕೋರೆಗಾಂವ್ ಯುದ್ದದಲ್ಲಿ 500 ಮಹಾರ್ ಸೈನಿಕರು ಸೇರಿದಂತೆ 834 ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಯೋಧರು ಪೇಶ್ವೆಯ 28,000 ಶಕ್ತಿಶಾಲಿ ಯೋಧರನ್ನು ಸೋಲಿಸಿದ್ದರು. ಈ ವಿಜಯದ ನೆನಪಿಗೆ ಬ್ರಿಟಿಷರು ವಿಜಯ ಸ್ತಂಭವನ್ನು ಸ್ಥಾಪಿಸಿದರು. ಅದು ಇಂದು ದಲಿತರ ಹೆಮ್ಮೆಯ ಸಂಕೇತವಾಗಿ ನಿಂತಿದೆ.

ವಂಚಿತ್ ಬಹುಜನ ಅಗಾಧಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್, ಸಚಿವರಾದ ದತ್ತಾತ್ರಯ ಭರ್ನೆ, ಆನಂದರಾಜ್ ಅಂಬೇಡ್ಕರ್, ರಾಜ್ಯ ಸಚಿವೆ ಮಾಧುರಿ ಮಿಸಾಲ್ ಮತ್ತು ಇತರ ಮುಖಂಡರು ಕೋರೆಗಾಂವ್ ಭೀಮಾದಲ್ಲಿ ಬುಧವಾರ (ಜ.1) ಉಪಸ್ಥಿತರಿದ್ದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂದೆ ಮತ್ತು ಅಜಿತ್ ಪವಾರ್ ವಿಜಯಸ್ತಂಭದ ಬಳಿಗೆ ಆಗಮಿಸಿದ್ದಕ್ಕೆ ಆನಂದರಾಜ್ ಅಂಬೇಡ್ಕರ್ ಬೇಸರ ವ್ಯಕ್ತಪಡಿಸಿದರು. “ಜನರು ಮತ ಹಾಕಿದ್ದರಿಂದ ಅವರು ಈಗ ಉನ್ನತ ಹುದ್ದೆಗೇರಿದ್ದಾರೆ. ಅವರಿಗೆ ಈ ದಿನ ಮತ್ತು ಜಾಗ ಮಹತ್ವದ್ದಾಗಿದ್ದರೆ ಇಲ್ಲಿಗೆ ಬರುತ್ತಿದ್ದರು. ಸಾಮಾನ್ಯ ಜನರು ಕರೆಯದೆ ಪ್ರತಿವರ್ಷ ಇಲ್ಲಿಗೆ ಆಗಮಿಸುತ್ತಿದ್ದಾರೆ” ಎಂದು ಹೇಳಿದರು.

ಡಾ. ಬಿ.ಆರ್ ಅಂಬೇಡ್ಕರ್ ಅವರ ಮೊಮ್ಮಗನಾಗಿರುವ ಆನಂದರಾಜ್ ಅಂಬೇಡ್ಕರ್ ಅವರು ಅಂಬೇಡ್ಕರ್‌ವಾದಿ ಸಂಘಟನೆ ರಿಪಬ್ಲಿಕನ್ ಸೇನೆಯ ಸ್ಥಾಪಕರಾಗಿದ್ದಾರೆ.

ಬಿಗಿ ಭದ್ರತೆ, ಅಗತ್ಯ ವ್ಯವಸ್ಥೆ 

ಪ್ರತಿ ವರ್ಷ ಜನವರಿ 1 ರಂದು ಕೋರೆಗಾಂವ್ ಭೀಮಾಗೆ ಕನಿಷ್ಠ ಎಂಟರಿಂದ 10 ಲಕ್ಷ ಜನರು ಆಗಮಿಸುತ್ತಾರೆ. ಬುಧವಾರ ವಿಶೇಷ ವ್ಯವಸ್ಥೆಗಳ ಭಾಗವಾಗಿ 5000 ಪೊಲೀಸ್ ಸಿಬ್ಬಂದಿ 2,000 ಗೃಹರಕ್ಷಕ ಸಿಬ್ಬಂದಿ, ರಾಜ್ಯ ಮೀಸಲು ಪೊಲೀಸ್ ಪಡೆ, ಬಾಂಬ್ ಪತ್ತೆ ಮತ್ತು ವಿಲೇವಾರಿ ದಳ (BBDS)ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

ಇದರ ಜೊತೆಗೆ ಸಿಸಿಟಿವಿ ಕ್ಯಾಮರಾ ಮತ್ತು ಮುಖ ಗುರುತಿಸುವಿಕೆಯ ಕ್ಯಾಮಾರಗಳನ್ನು ಅಳವಡಿಸಲಾಗಿತ್ತು. ಡ್ರೋನ್ ಮೂಲಕ ಜನಸಂದಣಿ ಮೇಲೆ ಕಣ್ಣಿಡಲಾಗಿತ್ತು. ವಾಹನ ಪಾರ್ಕಿಗ್‌ಗೆ ಜಾಗದ ವ್ಯವಸ್ಥೆ ಮಾಡಲಾಗಿತ್ತು. ತುರ್ತು ಸಂದರ್ಭಗಳಿಗೆ ಆಂಬ್ಯುಲೆನ್ಸ್, ಅಗ್ನಿಶಾಮಕ ತಂಡ ಸ್ಥಳದಲ್ಲಿತ್ತು.

ಇದನ್ನೂ ಓದಿ : ಕೋರೆಗಾಂವ್‌‌ ಕದನ: ದಲಿತ ಅಸ್ಮಿತೆ, ಸ್ವಾಭಿಮಾನದ ಮಹಾಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...